ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಸಗೊಬ್ಬರ ಮಾರಾಟಗಾರರ ಸಭೆಯಲ್ಲಿ ಅವರು ಮಾತನಾಡಿದ ಅವರು, ಈಗಾಗಲೇ ಮುಂಗಾರು ಆರಂಭದ ಪೂರ್ವದಲ್ಲಿಯೇ ಉತ್ತಮ ಮಳೆಯಾಗಿದ್ದು ರೈತರು ಕೂಡ ಬಿತ್ತನೆಗೆ ಭೂಮಿ ಹದ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ರೈತರಿಗೆ ಸಕಾಲದಲ್ಲಿ ರಸಗೊಬ್ಬರವನ್ನು ತೊಂದರೆಯಾಗದಂತೆ ವಿತರಿಸುವ ಜವಾಬ್ದಾರಿ ನಿಮ್ಮೆಲ್ಲರ ಮೇಲಿದೆ ಎಂದರು.
ಕೃತಕ ಅಭಾವ ಸೃಷ್ಟಿಸಿದರೆ ಕ್ರಮ:ರೈತರಿಗೆ ಯಾವುದೇ ರೀತಿಯಲ್ಲೂ ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಿ ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಿದರೆ ಕ್ರಮಕೈಗೊಳ್ಳಲಾಗುವುದು. ಮುಂಗಾರು ಹಂಗಾಮಿನಲ್ಲಿ ಪ್ರಮುಖವಾಗಿ ಯೂರಿಯಾ ಮತ್ತು ಡಿಎಪಿ ಗೊಬ್ಬರ ಸರಬರಾಜು ಮತ್ತು ವಿತರಣೆಯನ್ನು ವ್ಯವಸ್ಥಿತವಾಗಿ ಮಾಡಬೇಕು. ಡಿಎಪಿ ಗೊಬ್ಬರದಲ್ಲಿ ಸಾರಜನಕ ಮತ್ತು ರಂಜಕ ಪ್ರಧಾನ ಪೋಷಕಾಂಶಗಳಾಗಿವೆ. ಬೆಳೆಗಳಿಗೆ ಬೇಕಾಗುವ ಪ್ರಮುಖ ಇನ್ನೊಂದು ಪೋಷಕಾಂಶ ಪೊಟ್ಯಾಷ್ ಇರುವುದಿಲ್ಲ. ಇದರಿಂದ ಗಿಡಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತದೆ. ಹೆಚ್ಚಿನ ಪ್ರಮಾಣದಲ್ಲಿ ಡಿಎಪಿ ಬಳಸುವುದರಿಂದ ಮಣ್ಣಿನಲ್ಲಿ ರಂಜಕ ಅಂಶ ಹೆಚ್ಚಾಗುತ್ತದೆ. ಅಗತ್ಯವಾದ ಲಘು ಪೋಷಕಾಂಶಗಳಾದ ಸತ್ತು(ಜಿಂಕ್) ಮತ್ತು ಕಬ್ಬಿಣದ ಕೊರತೆ ಉಂಟಾಗುತ್ತದೆ, ಬೆಳೆ ಇಳುವರಿ ಕಡಿಮೆಯಾಗುತ್ತದೆ. ಡಿಎಪಿ ಗೊಬ್ಬರದ ಬದಲಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಹಲವು ಸಂಯುಕ್ತ ಗೊಬ್ಬರಗಳನ್ನು ಬಳಸಲು ರೈತರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಮಾರಾಟಗಾರರಿಗೆ ಸೂಚಿಸಿದರು.612 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು:
ಸಭೆಯಲ್ಲಿ ತಹಸೀಲ್ದಾರ್ ಜಿ.ಎಸ್. ಶಂಕರಪ್ಪ, ಸಹಾಯಕ ಕೃಷಿ ನಿರ್ದೇಶಕ ಕೆ. ಮೋಹನ್ ಕುಮಾರ್ ಸೇರಿದಂತೆ ತಾಲೂಕಿನ ರಸಗೊಬ್ಬರ ಮಾರಾಟಗಾರರು ಭಾಗವಹಿಸಿದ್ದರು.