ಕನ್ನಡಪ್ರಭ ವಾರ್ತೆ ಕುಶಾಲನಗರ
ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ಕ್ಲಸ್ಟರ್ ಕೇಂದ್ರದ ವತಿಯಿಂದ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಫ್.ಎಲ್.ಎನ್. “ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನದ ಕುರಿತು ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಸಂಭ್ರಮದ ಮಕ್ಕಳ ಕಲಿಕಾ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಲಿಕಾ ಹಬ್ಬವು ಮಕ್ಕಳ ಪ್ರತಿಭೆ ಹೊರ ತರಲು ಹಾಗೂ ಅವರಲ್ಲಿ ಸಂತಸದ ಕಲಿಕೆಯೊಂದಿಗೆ ಅವರ ಪ್ರತಿಭಾನ್ವೇಷಣೆಗೆ ಸಹಕಾರಿಯಾಗಿದೆ ಎಂದರು.ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ವಿನೂತನ ಚಟುವಟಿಕೆಗಳುಳ್ಳ ಕಲಿಕಾ ಹಬ್ಬವು ಮಕ್ಕಳ ಕಲಿಕೆಗೆ ಹೆಚ್ಚಿನ ಉತ್ತೇಜನ ನೀಡುವುದರೊಂದಿಗೆ ಅವರಲ್ಲಿ ಕಲಿಕಾ ಪ್ರೇರಣೆ ಬೆಳೆಸಲು ಸೂಕ್ತ ವೇದಿಕೆ ಒದಗಿಸುತ್ತದೆ. ಈ ಹಬ್ಬವು ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಪೂರಕವಾಗಿದೆ ಎಂದರು.
ಮಕ್ಕಳ ಕಲಿಕಾ ಹಬ್ಬದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಸಿ.ಆರ್.ಪಿ.ಟಿ.ಈ.ವಿಶ್ವನಾಥ್ , ವಿದ್ಯಾರ್ಥಿಗಳು
ಕುಶಾಲನಗರ ಪಿ.ಎಂ.ಶ್ರೀ ಶಾಲೆಯ ಎಸ್.ಡಿ.ಎಂ.ಸಿ.ಅಧ್ಯಕ್ಷ ಬಿ.ಎನ್.ಚಂದನ್ ಕುಮಾರ್, ಕಲಿಕಾ ಹಬ್ಬದಲ್ಲಿ ಮಕ್ಕಳು ಚಟುವಟಿಕೆಯೊಂದಿಗೆ ಪಾಲ್ಗೊಂಡಿರುವುದನ್ನು ಶ್ಲಾಘಿಸಿದರು.
ಮುಳ್ಳುಸೋಗೆ ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ರಶ್ಮಿ, ಶಾಲಾ ಮುಖ್ಯ ಶಿಕ್ಷಕಿ ಎಚ್.ಎಸ್. ಭಾಗ್ಯ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕಿ ಎಚ್.ಎಸ್.ಉಮಾದೇವಿ, ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಸಹ ಕಾರ್ಯದರ್ಶಿ ಎಸ್.ಆರ್.ಶಿವಲಿಂಗ, ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಾದ ಎಸ್.ಕೆ.ಜಲಜಾಕ್ಷಿ, ಎಂ.ಎಂ. ಭಾರತಿ, ಸಾಕಮ್ಮ, ಲಕ್ಷ್ಮಿ, ಶಾಂತಲಾ, ವಿವಿಧ ಶಾಲೆಯ ಶಿಕ್ಷಕರು, ಪೋಷಕರು, ಪಾಲ್ಗೊಂಡಿದ್ದರು.