ಕುಂದಾಪುರ ಸುಜ್ಞಾನ ವಿದ್ಯಾಸಂಸ್ಥೆಯಲ್ಲಿ ಬೆಳಕಿನ ಹಬ್ಬ ಸಂಭ್ರಮ

KannadaprabhaNewsNetwork |  
Published : Oct 25, 2025, 01:02 AM IST
24ಸುಜ್ಞಾನಸುಜ್ಞಾನ ವಿದ್ಯಾಸಂಸ್ಥೆಯಲ್ಲಿದೀಪಾವಳಿ ಹಬ್ಬದ ಸಂಭ್ರಮ | Kannada Prabha

ಸಾರಾಂಶ

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ 22ರಂದು ಹಾಸ್ಟೆಲಿನ ಮಕ್ಕಳಿಗಾಗಿ ದೀಪಾವಳಿ ಹಬ್ಬವನ್ನು ಬಹಳ ಅದ್ಧೂರಿ ಹಾಗೂ ಶಾಸ್ತ್ರೋಕ್ತವಾಗಿ ಆಚರಿಸಲಾಯಿತು.

ಕುಂದಾಪುರ: ಇಲ್ಲಿನ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ 22ರಂದು ಹಾಸ್ಟೆಲಿನ ಮಕ್ಕಳಿಗಾಗಿ ದೀಪಾವಳಿ ಹಬ್ಬವನ್ನು ಬಹಳ ಅದ್ಧೂರಿ ಹಾಗೂ ಶಾಸ್ತ್ರೋಕ್ತವಾಗಿ ಆಚರಿಸಲಾಯಿತು. ಮುಖ್ಯ ಅತಿಥಿ ಕಲಾಮಾಧ್ಯಮ ವಾಹಿನಿ ಪರಮೇಶ್ವರ್ ಮಾತನಾಡಿ, ಅಕ್ಷರವೆನ್ನುವುದು ದೀಪವಿದ್ದಂತೆ. ಈ ಅಕ್ಷರವೆನ್ನುವ ಜ್ಞಾನದ ಬೆಳಕನ್ನು ಸುಜ್ಞಾನ ಕಾಲೇಜು ಮಕ್ಕಳ ಮನಸ್ಸಿನಲ್ಲಿ ಪಸರಿಸುತ್ತಿದೆ. ಸುಜ್ಞಾನ ಸಂಸ್ಥೆಯು ಉತ್ತಮ ಶಿಕ್ಷಣವನ್ನು ನೀಡುತ್ತಾ ಮಕ್ಕಳ ಮನಸ್ಸಿನಲ್ಲಿ ಸದ್ವಿಚಾರಗಳನ್ನು ಬಿತ್ತುತ್ತಿದೆ ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು.

ಅತಿಥಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಮಾತನಾಡಿ, ವಿದ್ಯೆ ಕಲಿಸಿದ ಗುರು ಹಾಗೂ ಜನ್ಮ ನೀಡಿದವರನ್ನು ಎಂದಿಗೂ ಮರೆಯಬಾರದು. ಕೀಳರಿಮೆ, ಅತಿಆತ್ಮವಿಶ್ವಾಸವನ್ನಾಗಲಿ ಬೆಳೆಸಿಕೊಳ್ಳಬಾರದು. ಮಾನವೀಯ ಮೌಲ್ಯಗಳ ಪಾಲನೆಗೆ ಬದ್ಧವಾಗಿರುವುದು ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ನುಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಮಾತನಾಡಿ, ಮಕ್ಕಳಲ್ಲಿ ಶೈಕ್ಷಣಿಕ - ಸಾಂಸ್ಕೃತಿಕ ಜಾಗೃತಿಗಾಗಿ ಇಂತಹ ಕಾರ್ಯಕ್ರಮಗಳನ್ನುಸಂಸ್ಥೆ ನಿರಂತರವಾಗಿ ಆಯೋಜಿಸುತ್ತಾ ಬಂದಿದೆ. ಹಬ್ಬದ ಆಚರಣೆಯಿಂದ ಮಕ್ಕಳಲ್ಲಿ ನಮ್ಮ ಪರಂಪರೆಯ ಬಗ್ಗೆ ಗೌರವ ಹೆಚ್ಚುತ್ತದೆ. ಅವರ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ ಎಂದರು.

ಖಜಾಂಚಿ ಭರತ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಚಿಂತಕ ಪಡುಕರೆ ಉದಯಶೆಟ್ಟಿ, ಹೊಂಬಾಡಿ ಮಂಡಾಡಿ ಗ್ರಾ.ಪಂ. ಉಪಾಧ್ಯಕ್ಷ ಬಿ.ಅರುಣ್ ಕುಮಾರ್ ಹೆಗ್ಡೆ. ಪ್ರಾಂಶುಪಾಲ ರಂಜನ್ ಬಿ.ಶೆಟ್ಟಿ, ಮುಖ್ಯೋಪಾಧ್ಯಾಯ ಪ್ರದೀಪ್ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಕೃತ ಶಿಕ್ಷಕಿ ಸುದಕ್ಷಿಣ ನಿರೂಪಿಸಿದರು.

ದೀಪಾವಳಿ ಹಬ್ಬದ ಪ್ರತಿಯೊಂದು ಪದ್ಧತಿಗಳನ್ನೂ ಆಚರಿಸಲಾಯಿತು. ಗದ್ದೆಗೆ ಹಿಟ್ಟು ಬಡಿಸುವುದು, ಬಲೀಂದ್ರ ಕರೆಯುವುದು, ತುಳಸಿಕಟ್ಟೆ ಪೂಜೆ, ಗೋಪೂಜೆಗಳನ್ನು ನಡೆ,ಲಾಯಿತು. ಕೃಷಿ ಚಟುವಟಿಕೆಯಲ್ಲಿ ಬಳಸಲಾಗುವ ಪರಿಕರಗಳಿಗೆ ಪೂಜೆ ಸಲ್ಲಿಸಲಾಯಿತು. ಅರೆಹೊಳೆ ನಂದಗೋಕುಲ ಕಲಾವಿದರು ‘ಬಿಡುವನೆ ಬ್ರಹ್ಮಲಿಂಗʼ ನೃತ್ಯ ಪ್ರದರ್ಶನ ಕಣ್ಮನ ಸೆಳೆಯಿತು. ಮಕ್ಕಳಿಗೆ ಮತ್ತು ಹೆತ್ತವರಿಗೆ ಹಬ್ಬದೂಟವನ್ನೂ ಕೂಡ ಅಷ್ಟೇ ಅದ್ಧೂರಿಯಾಗಿ ಉಣಬಡಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!