ಕನ್ನಡಪ್ರಭ ವಾರ್ತೆ ಸೊರಬ
ಪಟ್ಟಣದ ಶ್ರೀ ರಂಗನಾಥ ದೇವಸ್ಥಾನ ಆವರಣದಲ್ಲಿ ದಸರಾ ಉತ್ಸವ ಸಮಿತಿ, ತಾಲೂಕು ಆಡಳಿತ, ಪುರಸಭೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡ ಸಾರ್ವಜನಿಕ ದಸರಾ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ಷೇತ್ರದಲ್ಲಿ ಬರಗಾಲವಿದ್ದು, ಸರಳವಾಗಿ ದಸರಾ ಉತ್ಸವ ಆಚರಿಸುವ ಕುರಿತು ಸಲಹೆ ನೀಡಲಾಗಿತ್ತು. ಆದರೆ, ಸಾರ್ವಜನಿಕರು ಒಗ್ಗೂಡಿ ದಸರಾ ಉತ್ಸವ ಆಚರಿಸುತ್ತಿರುವುದರಿಂದ ಸಹಕಾರ ನೀಡುತ್ತೇನೆ. ಹಬ್ಬ ಹರಿದಿನಗಳು ಭಕ್ತಿ ವಾತಾವರಣ ಸೃಷ್ಠಿಸುತ್ತದೆ. ಇಂದಿನ ದಿನಗಳಲ್ಲಿ ಎಲ್ಲ ಹಬ್ಬಗಳನ್ನು ಎಲ್ಲ ಸಮಾಜದವರು ಒಗ್ಗೂಡಿ ಆಚರಿಸಬೇಕು. ಇದರಿಂದ ಆರೋಗ್ಯಕರ ಸಮಾಜ ನಿರ್ಮಾಣ ಆಗುತ್ತದೆ ಮತ್ತು ಸಹಬಾಳ್ವೆ ಬದುಕು ಕಂಡುಕೊಳ್ಳಬಹುದು ಎಂದರು.ಸಾನ್ನಿಧ್ಯ ವಹಿಸಿದ್ದ ಜಡೆ ಸಂಸ್ಥಾನ ಮಠದ ಡಾ.ಮಹಾಂತ ಸ್ವಾಮೀಜಿ ಮಾತನಾಡಿ, ನವರಾತ್ರಿ ಹಬ್ಬದ ಸಮಯದಲ್ಲಿ ನವದುರ್ಗೆಯರನ್ನು ಪೂಜಿಸುವುದು ಭಾರತೀಯ ಪರಂಪರೆಯಲ್ಲಿ ಮಹತ್ವವನ್ನು ಪಡೆದಿದೆ. ಮನುಷ್ಯನ ಅಜ್ಞಾನವನ್ನು ಹೋಗಲಾಡಿಸಿ ಸುಜ್ಞಾನವನ್ನು ತುಂಬಲು ಹಬ್ಬಗಳು ಪೂರಕವಾಗಿವೆ ಎಂದರು. ದಸರಾ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪರಶುರಾಮ ಸಣ್ಣಬೈಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ದೇವಿಯ ಮೂರ್ತಿ ನಿರ್ಮಿಸಿದ ಕಲಾವಿದ ಕೆ.ಎನ್. ರಾಘವೇಂದ್ರ, ದಸರಾ ಉತ್ಸವ ಸಮಿತಿ ನಿಕಟಪೂರ್ವ ಅಧ್ಯಕ್ಷ ಎನ್.ಷಣ್ಮುಖಾಚಾರ್, ಗುತ್ತಿಗೆದಾರ ಪಾಂಡುರಂಗ ಅವರನ್ನು ಸನ್ಮಾನಿಸಲಾಯಿತು.
- - - -16ಕೆಪಿಸೊರಬ02:
ಸೊರಬ ಪಟ್ಟಣದ ಶ್ರೀ ರಂಗನಾಥ ದೇವಸ್ಥಾನ ಆವರಣದಲ್ಲಿ ಸಾರ್ವಜನಿಕ ದಸರಾ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು.