ಕನ್ನಡಪ್ರಭ ವಾರ್ತೆ ತುಮಕೂರು
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ತುಮಕೂರು ಹಾಗೂ ಜಿಲ್ಲಾ ನಗರ ಪೊಲೀಸ್ ಮತ್ತು ತಾಲೂಕು ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಟೌನ್‌ಹಾಲ್ ವೃತ್ತದಿಂದ ಏರ್ಪಡಿಸಲಾಗಿದ್ದ ‘ರಸ್ತೆ ಸುರಕ್ಷತಾ ಸಪ್ತಾಹ’ ಮತ್ತು ದ್ವಿತೀಯ ಸೋಪಾನ ಟೆಸ್ಟಿಂಗ್ ಕ್ಯಾಂಪ್‌ಗೆ ಚಾಲನೆ ನೀಡಿ ಮಾತನಾಡಿದರು.
ರಸ್ತೆ ಸುರಕ್ಷತೆ ಬಗ್ಗೆ, ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.ಶಾಲಾ ಸಮಯದಲ್ಲಿ ನಾವೂ ಕೂಡ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿದ್ದು ಶಿಸ್ತು ಕಲಿತಿದ್ದೇವೆ. ತಾವೂ ಸಹ ಜವಾಬ್ದಾರಿಯಿಂದ ಶಿಸ್ತು ಕಲಿಯಬೇಕಾಗಿದೆ. ಹಿಂದೆ ಮಧುಗಿರಿಯಲ್ಲಿ ತಹಸೀಲ್ದಾರ್ ಆಗಿದ್ದಂತಹ ಕಾಳಿಂಗ ಅವರು ಈಗಲೂ ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ರಾಜ್ಯ ಮತ್ತು ಏಷ್ಯಾ ಮಟ್ಟದಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೊಂಡಜ್ಜಿ ಬಸಪ್ಪನವರ ಕುಂಟುಂಬವನ್ನು ನಾವು ಈಗಲೂ ಸದಾ ಸ್ಮರಿಸುತ್ತೇವೆ. ಮಾಜಿ ಸಚಿವರಾದ ಪಿ.ಜಿ.ಆರ್. ಸಿಂಧ್ಯ ಮತ್ತಿತರೆ ಅನೇಕರು ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಈಗಲೂ ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
ತುಮಕೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಸೂರ್ಯಕಲಾ ಮಾತನಾಡಿ, ಜೀವ ಅತ್ಯಮೂಲ್ಯ ಆದುದರಿಂದ ಪ್ರತಿಯೊಬ್ಬರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಅಗತ್ಯವಿದೆ ಎಂದರು.
ಮುಂದಿನ ಪೀಳಿಗೆಗೆ ಉತ್ತಮ ನಾಗರಿಕರನ್ನು ನಿರ್ಮಾಣ ಮಾಡುವ ಕೆಲಸ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದಾಗಬೇಕು. ಮನುಷ್ಯನಿಗೆ ಸಂತೋಷ ಮತ್ತು ಆನಂದ ಸ್ಕೌಟ್ಸ್ ಮತ್ತು ಗೈಡ್ಸ್‌ನಿಂ ಸಿಗಲು ಸಾಧ್ಯ ಎಂದರು.
ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಉಪ್ಪಾರಹಳ್ಳಿ ಕುಮಾರ್ ಮಾತನಾಡಿ, ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಸ್ಕೌಟ್ಸ್ ಮತ್ತು ಗೈಡ್ಸ್‌ನ ವಿದ್ಯಾರ್ಥಿಗಳು ಜಾಗೃತಿ ಮೂಡಿಸುತ್ತಿದ್ದು, ವಾಹನ ಚಾಲಕರು ತಮ್ಮ ವಾಹನಗಳನ್ನು ರಸ್ತೆ ನಿಯಮಗಳನ್ನು ಪಾಲಿಸುವ ಮೂಲಕ ಚಲಾಯಿಸಿ ಸುರಕ್ಷತೆ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‌ನ ಸುಮಾರು ೨೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಗರದ ಟೌನ್ ಹಾಲ್ ವೃತ್ತದಿಂದ ಚರ್ಚ್ ಸರ್ಕಲ್ ಮೂಲಕ ಸೆಂಟ್ ಮೇರಿಸ್ ಶಾಲೆಯವರೆಗೆ ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸದಿರಿ ಸಂಚಾರಿ ನಿಯಮ ಪಾಲಿಸಿ ಎಂಬ ನಾಮಫಲಕಗಳನ್ನು ಹಿಡಿದು ಜಾಗೃತಿ ಮೂಡಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಗೆ ದ್ವಿತೀಯ ಸೋಪಾನ ಟೆಸ್ಟಿಂಗ್ ಕ್ಯಾಂಪನ್ನು ಯಶಸ್ವಿಯಾಗಿ ನಡೆಸಲಾಯಿತು.