ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ!

KannadaprabhaNewsNetwork |  
Published : Apr 06, 2026, 02:30 AM IST
ಪೋಟೊ ಕ್ಯಾಪ್ಸನ್:ಪ್ರಾಣೇಶ ಎಮ್ ಮುಂಡರಗಿ ತಾಲೂಕ ಸಹಾಯಕ ಕೃಷಿ ನಿದೇರ್ಶಕರುಪೋಟೊ ಕ್ಯಾಪ್ಸನ್:ರಸಗೊಬ್ಬರ ಸಿಂಪಡಿಸುತ್ತಿರುವ ರೈತರ ಭಾವಚಿತ್ರ. | Kannada Prabha

ಸಾರಾಂಶ

ಈ ಬಾರಿ ರಸಗೊಬ್ಬರ ಉತ್ಪಾದನೆಯಲ್ಲಿ ಸ್ವಲ್ಪ‌ ಪ್ರಮಾಣದಲ್ಲಿ ಕುಸಿತವಾಗುವ ಸಾಧ್ಯತೆ ಇದೆ. ಹೀಗಾಗಿ ರಸಗೊಬ್ಬರ ವಿತರಣೆಯ ಮೇಲೆ ವಿಶೇಷ ನಿಗಾ ಇರಿಸಲು ನಿರ್ಧರಿಸಲಾಗಿದೆ.

ಮುಂಡರಗಿ/ಡಂಬಳ: ಕೊಲ್ಲಿ ಯುದ್ಧದಿಂದ ರಸಗೊಬ್ಬರ ತಯಾರಿಕೆ ಕಚ್ಚಾ ಸಾಮಗ್ರಿಯಲ್ಲಿ ಭಾರಿ ಸಮಸ್ಯೆಯಾಗುವ ಸಾಧ್ಯತೆಯಿದ್ದು, ಅದಕ್ಕಾಗಿ ರೈತರು ರಸಗೊಬ್ಬರ ಖರೀದಿಗೆ ಇನ್ಮುಂದೆ ಕಡ್ಡಾಯವಾಗಿ ಎಫ್‌ಐಡಿ ಹೊಂದಿರಬೇಕು. ಅಷ್ಟೇ ಅಲ್ಲ, ತಮ್ಮ ಭೂಮಿಯನ್ನು ಸಹ ಎಫ್‌ಐಡಿಗೆ ಜೋಡಿಸಿರಬೇಕು. ಇದರ ಆಧಾರದಲ್ಲಿಯೇ ರಸಗೊಬ್ಬರವನ್ನು ಕೆ ಕಿಸಾನ್ ತಂತ್ರಜ್ಞಾನದ ಮೂಲಕ ವಿತರಣೆ ಮಾಡಲಾಗುತ್ತದೆ.

ಈ ಬಾರಿ ರಸಗೊಬ್ಬರ ಉತ್ಪಾದನೆಯಲ್ಲಿ ಸ್ವಲ್ಪ‌ ಪ್ರಮಾಣದಲ್ಲಿ ಕುಸಿತವಾಗುವ ಸಾಧ್ಯತೆ ಇದೆ. ಹೀಗಾಗಿ ರಸಗೊಬ್ಬರ ವಿತರಣೆಯ ಮೇಲೆ ವಿಶೇಷ ನಿಗಾ ಇರಿಸಲು ನಿರ್ಧರಿಸಲಾಗಿದೆ.

ರೈತರು ಏನು ಮಾಡಬೇಕು?: ರೈತರು ಈಗಾಗಲೇ ಎಫ್‌ಐಡಿ ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲ ಪಹಣಿ ಹಾಗೂ ಆಧಾರ್ ಕಾರ್ಡ್ ತೆಗೆದುಕೊಂಡು ಸಮೀಪದ ರೈತ ಸಂಪರ್ಕ ಕೇಂದ್ರ, ಸಾಮಾನ್ಯ ಸೇವಾ ಕೇಂದ್ರ ಮತ್ತು ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಬೇಕು. ಎಫ್ಐಡಿ ಹೊಂದಿದ್ದಲ್ಲಿ ನಿಮ್ಮ ಎಲ್ಲ ಸರ್ವೇ ನಂಬರ್ ಎಫ್‌ಐಡಿಗೆ ಲಿಂಕ್ ಮಾಡಿಸಿಕೊಳ್ಳಲು ಹಾಗೂ ಎಫ್‌ಐಡಿ ಹೊಂದಿರದೆ ಇದ್ದಲ್ಲಿ ಹೊಸದಾಗಿ ಎಫ್‌ಐಡಿ ಸೃಜಿಸಿಕೊಳ್ಳಬೇಕು ಎನ್ನುತ್ತಾರೆ ಮುಂಡರಗಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಪ್ರಾಣೇಶ್.

ಮಾರಾಟಗಾರರ ಮೇಲೆ ನಿಗಾ: ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ರಸಗೊಬ್ಬರವನ್ನು ಕೆ ಕಿಸಾನ್ ತಂತ್ರಾಂಶದ ಮೂಲಕ ರೈತರ ಎಫ್‌ಐಡಿ ನಮೂದಿಸಿ ಮಾರಾಟ ಮಾಡಬೇಕು ಹಾಗೂ ತಮ್ಮ ಎಲ್ಲ ಒ ಫಾರಂ ನವೀಕರಣ ಮಾಡಿಕೊಳ್ಳಬೇಕು. ಒಂದು ವೇಳೆ ಮಾರಾಟಗಾರರು ಒ ಫಾರಂಗಳ ನೋಂದಣಿ ಇಲ್ಲದೇ ಮಾರಾಟ ಮಾಡಿದಲ್ಲಿ ಹಾಗೂ ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡುಬಂದಲ್ಲಿ ಪರವಾನಗಿ ಅಮಾನತು ಅಥವಾ ರದ್ದು ಮಾಡುವ ಎಚ್ಚರಿಕೆ ನೀಡಲಾಗಿದೆ. ಇಂದಿನಿಂದ ಜನಗಣತಿ ತರಬೇತಿ ಕಾರ್ಯಾಗಾರ

ನರೇಗಲ್ಲ: ಸ್ಥಳೀಯ ರೋಟರಿ ಭವನದಲ್ಲಿ ಭಾರತಿಯ ಜನಗಣತಿ- 2027ರ ಸಮೀಕ್ಷೆ ಕುರಿತು ಗಣತಿದಾರರ ಮತ್ತು ಮೇಲ್ವಿಚಾರಕರ ತರಬೇತಿ ಕಾರ್ಯಕ್ರಮ ಏ. 6ರಿಂದ 8ರ ವರೆಗೆ ಮೂರು ದಿನಗಳ ಕಾಲ ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ನಡೆಯಲಿದೆ.ರಾಜ್ಯ ಜನಗಣತಿ ತರಬೇತುದಾರ ಬಸವರಾಜ ಗಿರಿತಮ್ಮಣ್ಣವರ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಆರ್.ಎಸ್. ನರೇಗಲ್ಲ, ಶಿಕ್ಷಕ ವಿ.ಎ. ಕುಂಬಾರ ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಜನಗಣತಿ ತರಬೇತುದಾರ ಬಿ.ಎಸ್. ಕಳಕೊಣ್ಣವರ ಹಾಗೂ ಶಿವಾನಂದ ಗೊಗೇರಿ ತರಬೇತಿ ನೀಡಲಿದ್ದಾರೆ ಎಂದು ಪಪಂ ಮುಖ್ಯಾಧಿಕಾರಿ ಮಲ್ಲೇಶ ಪಚ್ಚಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಪನಹಳ್ಳಿ ಹಿರೇಕೆರೆ ಅಭಿವೃದ್ಧಿಗೆ ₹3 ಕೋಟಿ ಅನುದಾನ ಮಂಜೂರು: ಶಾಸಕಿ ಎಂ.ಪಿ.ಲತಾ
ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್‌ ರಾಂ: ಶಾಸಕ ಕೃಷ್ಣನಾಯ್ಕ