ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ

KannadaprabhaNewsNetwork |  
Published : Apr 18, 2026, 02:00 AM IST
ಜಮಖಂಡಿ ನಗರದ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್‌ ಕುಮಾರ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಅಧಿಕಾರಿಗಳು ಗೌರವ ವಂದನೆ ಸಲ್ಲಿಸಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್ಐಡಿ) ಸಂಖ್ಯೆ ಹೊಂದಿರುವುದು ಕಡ್ಡಾಯ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಕಲಾವತಿ ತಿಳಿಸಿದರು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್ಐಡಿ) ಸಂಖ್ಯೆ ಹೊಂದಿರುವುದು ಕಡ್ಡಾಯ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಕಲಾವತಿ ತಿಳಿಸಿದರು.

ಬುಧವಾರ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆದ ರಸಗೊಬ್ಬರ ತಯಾರಕರು, ಸರಬರಾಜುದಾರರು ಮತ್ತು ಮಾರಾಟಗಾರರ ಸಭೆಯಲ್ಲಿ ಅವರು ಮಾತನಾಡಿದರು.

2026- 27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ರಸಗೊಬ್ಬರ ವಿತರಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಕಾಳಸಂತೆಯಲ್ಲಿ ಗೊಬ್ಬರ ಮಾರಾಟ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಕೆ- ಕಿಸಾನ್ ತಂತ್ರಾಂಶದ ಬಳಸಿ ರೈತರು ತಮ್ಮ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿ ಅಗತ್ಯ ಇರುವಷ್ಟು ಪ್ರಮಾಣದ ರಸಗೊಬ್ಬರವನ್ನು ಮಾತ್ರ ಕೆ- ಕಿಸಾನ್ ತಂತ್ರಾಂಶದ ಮೂಲಕ ವಿತರಿಸಲಾಗುವುದು ಎಂದರು.

ಹೊಸ ಎಫ್ಐಡಿ ನೋಂದಣಿ:

ಈವರೆಗೆ ಫಾರ್ಮರ್ ಐಡಿ ಹೊಂದಿರದ ರೈತರು ಕೂಡಲೇ ತಮ್ಮ ಪಹಣಿ, ಬ್ಯಾಂಕ್ ಪಾಸ್ ಬುಕ್ ಮತ್ತು ಆಧಾರ್ ಕಾರ್ಡ್ ನೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕಾ ಇಲಾಖೆ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಈಗಾಗಲೇ ಎಫ್.ಐಡಿ ಹೊಂದಿರುವ ರೈತರು ತಮ್ಮ ಎಲ್ಲಾ ಸರ್ವೇ ನಂಬರ್ ಗಳನ್ನು ಅದಕ್ಕೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಿದೆ.

ಮಾರಾಟಗಾರರಿಗೆ ಎಚ್ಚರಿಕೆ:

ಅಧಿಕೃತ ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ಕೆ- ಕಿಸಾನ್ ತಂತ್ರಾಂಶದಲ್ಲಿ ರೈತರ ಎಫ್ಐಡಿ ನಮೂದಿಸಿ ಗೊಬ್ಬರ ಮಾರಾಟ ಮಾಡಬೇಕು. ಇದಕ್ಕೆ ಸಂಬಂಧಿಸಿದಂತೆ ಇಲಾಖೆ ತರಬೇತಿ ಹಾಗೂ ಮಾಹಿತಿ ನೀಡಲಾಗಿದೆ. ಚಿಲ್ಲರೆ ರಸಗೊಬ್ಬರ ಮಾರಾಟಗಾರರು ತಮ್ಮ ಎಲ್ಲ ಒ ಫಾರಂಗಳನ್ನು ನವೀಕರಣಗೊಳಿಸಿ ಕೊಳ್ಳಬೇಕು. ಒಂದು ವೇಳೆ ಮಾರಾಟಗಾರರು ಫಾರಂಗಳ ನೋಂದಣಿ ಇಲ್ಲದೆ ಮಾರಾಟ ಮಾಡಿದರೆ, ನಿಯಮ ಮೀರಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಥವಾ ಕೃಷಿಯೇತರ ಉದ್ದೇಶಕ್ಕೆ ರಸಗೊಬ್ಬರ ನೀಡಿದರೆ ಅಂತಹ ಮಾರಾಟಗಾರರ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಅವರು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನರ ನೈಜ ನಂಬಿಕೆ, ಸಂಸ್ಕೃತಿ ಪ್ರತಿಬಿಂಬಿಸುವ ಸಾಹಿತ್ಯ: ಡಾ. ವೀರೇಂದ್ರ ಪಾಲ್
ಹಿಮೋಫಿಲಿಯಾ ಬಗ್ಗೆ ಭಯ ಬೇಡ: ಡಾ. ರಾಜೇಂದ್ರ ಗಡಾದ