ದೊಡ್ಡಬಳ್ಳಾಪುರ: ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಹಾಗೂ ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ನೇತೃತ್ವದಲ್ಲಿ ಹರಳಿನ ಸುಧಾರಿತ ತಳಿ-ಐ.ಸಿ.ಹೆಚ್-66 ಪ್ರಾತ್ಯಕ್ಷಿಕೆಯ ಕುರಿತು ಕ್ಷೇತ್ರೋತ್ಸವ ತಾಲೂಕಿನ ಕೊಟ್ಟಿಗೆ ಮಾಚೇನಹಳ್ಳಿ ಗ್ರಾಮದಲ್ಲಿ ನಡೆಯಿತು.
ಹರಳಿನ ತಾಕಿನ ಸುತ್ತ ಕಂದಕ ಬದುಗಳ ನಿರ್ಮಾಣ, ಕೊಟ್ಟಿಗೆ ಗೊಬ್ಬರದ ಬಳಕೆ, ಶಿಫಾರಸ್ಸು ಮಾಡಿದ ರಸಗೊಬ್ಬರಗಳ ಸಿಂಪರಣೆ, ತೇವಾಂಶ ಸಂರಕ್ಷಣೆಗಾಗಿ ಸಾಲುಗಳು ಮತ್ತು ಅಗತ್ಯಾನುಸಾರ ಸಸ್ಯ ಸಂರಕ್ಷಣಾ ರಾಸಾಯನಿಕಗಳ ಬಳಕೆ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ಹರಳಿನ ಉತ್ತಮ ಇಳುವರಿ ಮತ್ತು ಅಧಿಕ ಆದಾಯ ಪಡೆಯಲಾಗಿದೆ ಎಂದು ತಿಳಿಸಿದರು.
ಕೇಂದ್ರದ ಮಣ್ಣು ವಿಜ್ಞಾನಿ ಡಾ. ಡಿ. ರವಿಕುಮಾರ್ ಮಾತನಾಡಿ, ಕೃಷಿಯಲ್ಲಿ ನೀರು ಮತ್ತು ಮಣ್ಣು ಮಾದರಿ ಪರೀಕ್ಷೆಯ ಮಹತ್ವ ಮತ್ತು ಮಣ್ಣಿನ ಆರೋಗ್ಯ ಮತ್ತು ಫಲವತ್ತತೆ ಹಾಗೂ ಪೋಷಕಾಂಶಗಳ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.ಕೃಷಿ ವಿಸ್ತರಣಾ ವಿಜ್ಞಾನಿ ಡಾ. ವೈ.ಎಂ.ಗೋಪಾಲ್ ಮಾತನಾಡಿ, ಕೃಷಿ ವಿಜ್ಞಾನ ಕೇಂದ್ರದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ರೈತರು ನೂತನ ತಾಂತ್ರಿಕತೆಗಳ ಬಗ್ಗೆ ಮಾಹಿತಿ ಪಡೆದು ಕ್ಷೇತ್ರದಲ್ಲಿ ಅಳವಡಿಸಿಕೊಂಡಾಗ ಉತ್ಪಾದಕತೆ ಹೆಚ್ಚುವುದರ ಜೊತೆಗೆ ಬೇಸಾಯದ ಖರ್ಚನ್ನೂ ಕಡಿಮೆ ಮಾಡಬಹುದು. ಕೇಂದ್ರದಿಂದ ಹಮ್ಮಿಕೊಳ್ಳುವ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಿಜ್ಞಾನಿಗಳು ನೀಡುವ ಸಲಹೆ ಮತ್ತು ಸೂಚನೆಗಳನ್ನು ಪಾಲಿಸಬೇಕೆಂದು ತಿಳಿಸಿದರು.
ಕೊಟ್ಟಿಗೆಮಾಚೇನಹಳ್ಳಿ ಮತ್ತು ಸುತ್ತಮುತ್ತಲಿನ ರೈತರು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.19ಕೆಡಿಬಿಪಿ5-
ದೊಡ್ಡಬಳ್ಳಾಪುರ ತಾಲೂಕಿನ ಕೊಟ್ಟಿಗೆ ಮಾಚೇನಹಳ್ಳಿ ಗ್ರಾಮದಲ್ಲಿ ಹರಳಿನ ಸುಧಾರಿತ ತಳಿಯ ಪ್ರಾತ್ಯಕ್ಷಿಕೆ ನಡೆಯಿತು.