ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಖಂಡಿಸಿ ಸಿಪಿಐ ಪ್ರತಿಭಟನೆ

KannadaprabhaNewsNetwork |  
Published : Feb 13, 2024, 12:52 AM ISTUpdated : Feb 13, 2024, 04:29 PM IST
3 | Kannada Prabha

ಸಾರಾಂಶ

ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ಅನ್ಯಾಯ ಎಸಗಿರುವುದನ್ನು ಖಂಡಿಸಿ ಭಾರತ್ ಕಮ್ಯೂನಿಸ್ಟ್ ಪಕ್ಷದವರು (ಸಿಪಿಐ) ನಗರದ ಮೆಟ್ರೋಪೋಲ್ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆ ಮುಂಭಾಗದಲ್ಲಿ ಸೋಮವಾರ ಪ್ರತಿಭಟಿಸಿದರು.

ಕನ್ನಡಪ್ರಭ ವಾರ್ತೆ ಮೈಸೂರು

ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ಅನ್ಯಾಯ ಎಸಗಿರುವುದನ್ನು ಖಂಡಿಸಿ ಭಾರತ್ ಕಮ್ಯೂನಿಸ್ಟ್ ಪಕ್ಷದವರು (ಸಿಪಿಐ) ನಗರದ ಮೆಟ್ರೋಪೋಲ್ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆ ಮುಂಭಾಗದಲ್ಲಿ ಸೋಮವಾರ ಪ್ರತಿಭಟಿಸಿದರು.

ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡಿರುವ ಭಾರತ, ಸಂವಿಧಾನದ ಆಶಯದಂತೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸೇರಿ ದೇಶದ ಜನತೆಯ ಪರವಾಗಿ ಆಡಳಿತ ನಡೆಸಬೇಕಿದೆ. 

ಕೇಂದ್ರ ಮತ್ತು ರಾಜ್ಯಗಳಿಗೆ ಹಂಚಿಕೆಯಾಗಬೇಕೆಂದು ಹಣಕಾಸು ಆಯೋಗ ರಚಿಸಲಾಗಿದೆ. ಅದರಂತೆ ತೆರಿಗೆ ಹಣವನ್ನು ನ್ಯಾಯ ಸಮ್ಮತವಾಗಿ ರಾಜ್ಯಗಳಿಗೆ ಹಂಚಿಕೆ ಮಾಡಿ ಅಗತ್ಯ ಅನುದಾನಗಳನ್ನು ಕಾಲ ಕಾಲಕ್ಕೆ ಬಿಡುಗಡೆಗೊಳಿಸಬೇಕಾಗಿರುವುದು ಒಕ್ಕೂಟ ಸರ್ಕಾರದ ಹೊಣೆಗಾರಿಕೆ ಆಗಿದೆ ಎಂದು ಅವರು ತಿಳಿಸಿದರು.

ಆದರೆ, ಕಳೆದ 4 ವರ್ಷಗಳಿಂದ ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಕಡಿತಗೊಳಿಸಿ ಸುಮಾರು 45 ಸಾವಿರ ಕೋಟಿ ನಷ್ಟವಾಗಿದೆ ಎಂದು ರಾಜ್ಯದ ಮುಖ್ಯಮಂತ್ರಿಗಳೇ ಅಂಕಿ ಅಂಶಗಳನ್ನು ಬಹಿರಂಗಪಡಿಸಿದ್ದಾರೆ. 

ಹಾಗೆಯೇ, ಜಿಎಸ್ ಟಿ, ತೆರಿಗೆ ಹಣ, ಬರ ಪರಿಹಾರ ಸೇರಿದಂತೆ ವಿವಿಧ ಅನುದಾನಗಳನ್ನು ಕರ್ನಾಟಕಕ್ಕೆ ಹಂಚಿಕೆ ಮಾಡುವ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಪಾಲಿನ ತೆರಿಗೆ ಹಣ ಸೇರಿದಂತೆ ನೆಲ ಜಲ ಭಾಷೆಯಂತಹ ರಾಜ್ಯದ ಅಸ್ಮಿತೆಯ ಪ್ರಶ್ನೆ ಎದುರಾದಾಗ ಸಂಸದರು ರಾಜ್ಯದ ಪರ ಧ್ವನಿಯೆತ್ತದೆ ಮೌನ ತಾಳಿದ್ದಾರೆ. 

ಕ್ಷೇತ್ರದ ಅಭಿವೃದ್ಧಿಗೆ ಸಂಸದರು ಕೇಂದ್ರ ಸರ್ಕಾರದಿಂದ ಬಿಡುಗಡೆಗೊಳಿಸಿರುವ ನಿಧಿ, ಅನುದಾನದಲ್ಲಿ ಎಷ್ಟು ಕ್ಷೇತ್ರದಲ್ಲಿ ಅಭಿವೃದ್ಧಿ ಆಗಿದೆ ಎಂದು ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಒತ್ತಾಯಿಸಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್.ವಿ. ರಾಮಕೃಷ್ಣ, ಮುಖಂಡರಾದ ಕೆ.ಜಿ. ಸೋಮರಾಜೇ ಅರಸ್, ಎನ್.ಕೆ. ದೇವದಾಸ್, ಶಿವಣ್ಣ, ಡಿ. ಜಗನ್ನಾಥ್ ಮೊದಲಾದವರು ಇದ್ದರು.

ಪ್ರತಿಭಟನಾ ಸ್ಥಳ ಬದಲು: ಕೇಂದ್ರ ಸರ್ಕಾರ ತೆರಿಗೆ ಹಣ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಎಸೆಗಿರುವ ಅನ್ಯಾಯವನ್ನು ಪ್ರಶ್ನಿಸುವಂತೆ ಆಗ್ರಹಿಸಿ ಹಾಗೂ ರಾಜ್ಯದ ಪಾಲಿನ ತೆರಿಗೆ ಹಣ ಸೇರಿದಂತೆ ನೆಲ, ಜಲ, ಭಾಷೆಯಂತಹ ಅಸ್ಥಿತೆಯ ಪ್ರಶ್ನೆಗಳನ್ನು ಎದುರಾದಾಗ ರಾಜ್ಯದ ಪರ ಧ್ವನಿ ಎತ್ತದೆ.

ಮೌನ ತಾಳಿರುವ ರಾಜ್ಯದ ಸಂಸದರ ನಿರ್ಲಕ್ಷತನವನ್ನು ಖಂಡಿಸಿ ಸಿಪಿಐ ಪಕ್ಷದವರು ನಗರದ ಹುಣಸೂರು ರಸ್ತೆ ಜಲದರ್ಶಿನಿ ಆವರಣದಲ್ಲಿರುವ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದರ ಕಚೇರಿಯ ಎದುರು ಸೋಮವಾರ ಪ್ರತಿಭಟಿಸಲು ಮುಂದಾಗಿದ್ದರು. 

ಆದರೆ, ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಮೆಟ್ರೋಪೊಲ್ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟಿಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ