ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕರಿಂದ ಬಿರುಸಿನ ಮತಯಾಚನೆ

KannadaprabhaNewsNetwork |  
Published : May 30, 2024, 12:55 AM IST
29ಸಿಎಚ್‌ಎನ್‌29 ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರ ಪರ ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಮರಾಜ ತಾಲೂಕಿನ ಮಾದಾಪುರ ಸಂತ ತೆರೇಸಾ ಶಾಲೆಯಲ್ಲಿ ಮತಯಾಚಿಸಿದರು. | Kannada Prabha

ಸಾರಾಂಶ

ದೇಶ, ರಾಜ್ಯದಲ್ಲಿ ಕಾಂಗ್ರೆಸ್ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಿದ್ದು, ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವುದು ಕಾಂಗ್ರೆಸ್ ಎಂದು ಮಾಜಿ ಸಚಿವ, ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ದೇಶ, ರಾಜ್ಯದಲ್ಲಿ ಕಾಂಗ್ರೆಸ್ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಿದ್ದು, ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವುದು ಕಾಂಗ್ರೆಸ್ ಎಂದು ಮಾಜಿ ಸಚಿವ, ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.

ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರ ಪರ ತಾಲೂಕಿನ ಮಂಗಲ ಸರ್ಕಾರಿ ಪ್ರೌಢಶಾಲೆ, ಮಾದಾಪುರ ಸಂತ ತೆರೇಸಾ ಶಾಲೆಯಲ್ಲಿ ಶಿಕ್ಷಕರನ್ನು ಭೇಟಿ ಮಾಡಿ ಮತಯಾಚಿಸಿ ಮಾತನಾಡಿದರು. ಕಾಂಗ್ರೆಸ್ ಶಿಕ್ಷಣಕ್ಕೆ ಹಂತ ಹಂತವಾಗಿ ಒತ್ತು ನೀಡಿದೆ. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಬಂದಿದೆ. ಜೆಡಿಎಸ್, ಬಿಜೆಪಿ ಶಿಕ್ಷಕರಿಗೆ ಯಾವುದೇ ಕೊಡುಗೆ ನೀಡಿಲ್ಲ. ಸುಳ್ಳು, ಟೀಕೆ ಟಿಪ್ಪಣಿಯೇ ಅವರ ಸಾಧನೆಯಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರು ಒಬ್ಬ ವಾಗ್ಮಿಯಾಗಿದ್ದು, ಉತ್ತಮ ಆಡಳಿತಗಾರರಾಗಿದ್ದಾರೆ. ಅವರ ಪರವಾಗಿ ಕ್ಷೇತ್ರದಲ್ಲಿ ಉತ್ತಮ ವಾತಾವರಣವಿದ್ದು ಅವರು ಗೆಲುವು ಸಾಧಿಸಲಿದ್ದಾರೆ ಎಂದು ಪುಟ್ಟರಂಗಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದರು.

ಜೂ.3 ರಂದು ನಡಯುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸತತ ನಾಲ್ಕ ಬಾರಿ ಪ್ರತಿನಿಧಿಸಿರುವ ಮರಿತಿಬ್ಬೇಗೌಡರನ್ನು ಮತ್ತೊಮ್ಮೆ ನಿಮ್ಮ ಸೇವೆ ಮಾಡಲು ಶಿಕ್ಷಕರು ತಮ್ಮ ಅಮೂಲ್ಯವಾದ ಮತವನ್ನು ಹಾಕಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಉಪಾಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್‌ ಅಸ್ಗರ್, ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಪಂಕಜಾ ಶಿವಕುಮಾರ್, ಮಂಗಲ ಗ್ರಾಪಂ.ಅಧ್ಯಕ್ಷ ಅಣ್ಣಪ್ಪಸ್ವಾಮಿ, ಮಾದಾಪುರ ಗ್ರಾಪಂ ಅಧ್ಯಕ್ಷ ರೂಪೇಶ್, ಮುಖಂಡರಾದ ಸೋಮಣ್ಣೇಗೌಡ, ಮಂಗಲ ಶಿವಣ್ಣ, ಯಜಮಾನರಾದ ನಾರಾಯನಶೆಟ್ಟಿ, ಮಹದೇವಶೆಟ್ಟಿ, ಕಾಗಲವಾಡಿ ಚಂದ್ರು, ಸ್ವಾಮಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ