ಕನ್ನಡಪ್ರಭ ವಾರ್ತೆ ಪಾಂಡವಪುರ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರವು 56 ಸಾವಿರ ಹುದ್ದೆಗಳ ನೇಮಕಾತಿಗೆ ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ. ಒಳ ಮೀಸಲಾತಿ ಜಾರಿಗೊಳಿಸದೆ ನೇಮಕಾತಿಗೆ ಮುಂದಾಗಿರುವುದು ಮಾದಿಗ ಸಮುದಾಯಕ್ಕೆ ಮರಣ ಶಾಸನವಾಗಿ ಪರಿಣಮಿಸಿದೆ ಎಂದು ಎಚ್ಚರಿಸಿದರು.
ಮಾದಿಗ ಸಮುದಾಯದ ಉದ್ಯೋಗ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ನೇಮಕಾತಿಯಲ್ಲಿ ಅವಕಾಶ ಇಲ್ಲದಂತಾಗಿದೆ. ಸಂವಿಧಾನ ಜಾರಿಗೊಂಡ ದಿನದಿಂದಲೂ ಈದುವರೆಗೂ ಸಮುದಾಯದವರಿಗೆ ಅವಕಾಶ ಸಿಕ್ಕಿಲ್ಲ. ಎಲ್ಲವೂ ಬಲಿತ ದಲಿತ ಸಮುದಾಯದ ಪಾಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕಳೆದ 35 ವರ್ಷಗಳಿಂದಲೂ ಒಳಮೀಸಲಾತಿಗಾಗಿ ಹೋರಾಟ ನಡೆಸಿದರ ಪರಿಣಾಮ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿತು. ಇದರ ಆಧಾರದ ಮೇರೆಗೆ ರಾಜ್ಯ ಸರ್ಕಾರ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ರಚಿಸಿ ವರದಿ ತರಿಸಿಕೊಂಡು ಅದನ್ನು ಪರಿಷ್ಕರಣೆ ಮಾಡಿ ಸದನದಲ್ಲಿ ಮಸೂದೆ ಮಂಡಿಸಿ ರಾಜ್ಯಪಾಲರ ಅನುಮೋದನೆ ಪಡೆದಿದೆ. ಆದರೆ, ಸಚಿವ ಸಂಪುಟದ ಸಚಿವರು ಮಾದಿಗ ಸಮುದಾಯದ ಹೋರಾಟವನ್ನು ಗಾಳಿಗೆ ತೂರಿ ಮಸೂದೆ ತಿರಸ್ಕರಿಸಿ ಕೇವಲ ಒಂದು ಸಮುದಾಯದ ಹಿತ ಕಾಯಲು ಮುಂದಾಗಿರುವುದು ಸರಿಯಲ್ಲ ಎಂದು ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಸಮುದಾಯದ ಮುಖಂಡರಾದ ಕಡಬಾ ಪುಟ್ಟರಾಜು, ಎಸ್.ರಾಚಯ್ಯ, ಟೌನ್ ಚಂದ್ರು, ಆಟೋ ಮಲ್ಲೇಶ್, ಪಾಂಡವಪುರ ಮಲ್ಲಿಕಾರ್ಜುನ್, ಚಿಕ್ಕಾಯಿರಹಳ್ಳಿ ರಾಜೇಶ್, ಸಿ.ಎಸ್.ಶಿವಯ್ಯ, ಬಸ್ತಿಹಳ್ಳಿ ಯೋಗೇಶ್, ವದೇಸಮುದ್ರ ಮೋಹನ್ ಕುಮಾರ್, ಪಾಂಡವಪುರ ತುಕರಾಮ್, ಶಶಿಧರ, ಮುರಳೀಧರ ಸೇರಿದಂತೆ ಹಲವರು ಉಪಸ್ಥಿತರಿದ್ದರು.