ಫಿಶ್‌ಮಿಲ್‌ ಮುಚ್ಚದಿದ್ದರೆ ಹೋರಾಟ: ಬಿ.ಕೆ. ಇಮ್ತಿಯಾಝ್‌

KannadaprabhaNewsNetwork |  
Published : Oct 23, 2024, 12:30 AM IST
11 | Kannada Prabha

ಸಾರಾಂಶ

ಕಲ್ಲಿದ್ದಲು ಬಳಸುವ ಮೀನಿನ ಕಾರ್ಖಾನೆಗಳು ಮುಚ್ಚಲು ಜಿಲ್ಲಾಡಳಿತ ವಿಫಲವಾದಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳ ಸಹಕಾರದಲ್ಲಿ ಜಿಲ್ಲಾಡಳಿತ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ವಿವಿಧ ಹಂತದ ಹೋರಾಟಗಳನ್ನು ನಡೆಸಲಿದೆ ಎಂದು ಎಚ್ಚರಿಸಿದರು.

ಕನ್ನಡಪ್ರಭ ವಾರ್ತೆ ಉಳ್ಳಾಲ

ಕಲ್ಲಿದ್ದಲು ಬಳಸುತ್ತಿರುವ ಫಿಶ್ ಮಿಲ್‌ಗಳಿಂದಾಗಿ ಕೋಟೆಪುರ, ಮುಳಿಹಿತ್ಲು ಭಾಗದಲ್ಲಿ ವ್ಯಾಪಕವಾಗಿ ಆರೋಗ್ಯ ಸಮಸ್ಯೆಗಳು ಕಾಣಿಸುತ್ತಿದೆ. ಸಿಆರ್‌ಝಡ್‌ ಕಾನೂನು ಉಲ್ಲಂಘಿಸಿ ನಿರ್ಮಿಸಲಾಗಿರುವ ಕಟ್ಟಡಗಳಿಂದಾಗಿ ನದಿಯೇ ಮುಚ್ಚಿಹೋಗಿ ಕೋಟೆಪುರ-ಮುಳಿಹಿತ್ಲು ನಡುವೆ ದೋಣಿ ಸಂಪರ್ಕವೇ ಇಲ್ಲದಂಥ ಸ್ಥಿತಿ ನಿರ್ಮಾಣವಾಗಲಿದೆ. ಜಿಲ್ಲಾಡಳಿತ ಕಾನೂನು ಕ್ರಮ ಕೈಗೊಳ್ಳದಿದ್ದರೆ ಪೋಸ್ಟಲ್, ಕರಪತ್ರ, ಸಾಮಾಜಿಕ ಜಾಲತಾಣಗಳ ಮೂಲಕ ಚಳವಳಿಯನ್ನು ನಿರಂತರವಾಗಿ ನಡೆಸಲಿದ್ದೇವೆ ಎಂದು ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಹೇಳಿದ್ದಾರೆ.

ತೊಕ್ಕೊಟ್ಟು ಸೇವಾಸೌಧದಲ್ಲಿ ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಲಿದ್ದಲು ಬಳಕೆಯಿಂದಾಗಿ ದೀರ್ಘಕಾಲದ ಶ್ವಾಸಕೋಶದ ಕಾಯಿಲೆ, ರಕ್ತದೊತ್ತಡ ಹೃದ್ರೋಗ, ತುರಿಕೆ ಅಲರ್ಜಿ, ಚರ್ಮ ಕೆಂಪಾಗುವ ರೋಗ ಬರುವ ಸಾಧ್ಯತೆಗಳಿವೆ ಎಂಬ ಮಾಹಿತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪಡೆದ ವರದಿಯಿಂದ ಬಹಿರಂಗವಾಗಿದೆ. ಆದರೂ ಸ್ಥಳೀಯರ ಆರೋಗ್ಯದೊಂದಿಗೆ ಚೆಲ್ಲಾಟವಾಡಲಾಗುತ್ತಿದೆ. ಕಲ್ಲಿದ್ದಲು ಬಳಸುವ ಮೀನಿನ ಕಾರ್ಖಾನೆಗಳು ಮುಚ್ಚಲು ಜಿಲ್ಲಾಡಳಿತ ವಿಫಲವಾದಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳ ಸಹಕಾರದಲ್ಲಿ ಜಿಲ್ಲಾಡಳಿತ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ವಿವಿಧ ಹಂತದ ಹೋರಾಟಗಳನ್ನು ನಡೆಸಲಿದೆ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಉಳ್ಳಾಲ ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ, ಮೊಹಮ್ಮದ್ ಅಶ್ರಫ್, ಮೊಹಮ್ಮದ್ ಮುಸಾಫಿರ್ ವಾಕರ್, ನೌಫಾಲ್ ಕೋಟೆಪುರ, ಅಶ್ಫಾಕ್ ಕೋಟೆಪುರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''