ರಾಜಣ್ಣ ಸಂಪುಟಕ್ಕೆ ಸೇರ್ಪಡೆಯಾಗುವರೆಗೂ ಹೋರಾಟ

KannadaprabhaNewsNetwork |  
Published : Sep 28, 2025, 02:00 AM IST
೨೭ಶಿರಾ೨: ಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾ ಗೊಳಿಸಿವುದನ್ನು ಖಂಡಿಸಿ ಹಾಗೂ ಕೆ.ಎನ್.ರಾಜಣ್ಣ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಪ್ರತಿಭಟನೆ ನಡೆಸಲು ಕೆ.ಎನ್.ಆರ್. ಅಭಿಮಾನಿಗಳು ಪೂರ್ವಭಾವಿ ನಡೆಸಿದರು. | Kannada Prabha

ಸಾರಾಂಶ

ಕೆ.ಎನ್.ರಾಜಣ್ಣ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಪ್ರತಿಭಟನೆ ನಡೆಸಲು ಕೆ.ಎನ್.ಆರ್. ಅಭಿಮಾನಿಗಳು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಶಿರಾ

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್.ರಾಜಣ್ಣ ಅವರನ್ನು ಪುನಃ ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವವರೆಗೂ ಹೋರಾಟ ಮಾಡುತ್ತೇವೆ ಎಂದು ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷರು ಹಾಗೂ ಮಾಜಿ ನಗರಸಭಾ ಸದಸ್ಯರಾದ ರವಿಶಂಕರ್ ಹೇಳಿದರು.

ಅವರು ನಗರದ ಪ್ರವಾಸಿ ಮಂದಿರದಲ್ಲಿ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿವುದನ್ನು ಖಂಡಿಸಿ ಹಾಗೂ ಕೆ.ಎನ್.ರಾಜಣ್ಣ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಪ್ರತಿಭಟನೆ ನಡೆಸಲು ಕೆ.ಎನ್.ಆರ್. ಅಭಿಮಾನಿಗಳು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಕೆ.ಎನ್.ರಾಜಣ್ಣ ಅವಗೆ ತುಮಕೂರು ಜಿಲ್ಲೆಯ 10 ತಾಲೂಕುಗಳಲ್ಲೂ ಎಲ್ಲಾ ಜನಾಂಗದ ಅಭಿಮಾನಿಗಳನ್ನು ಹೊಂದಿದ್ದಾರೆ. ಇಂದಿನ ಸಭೆಗೆ ಯಾದವ ಸಮಾಜ, ದಲಿತ ಸಮಾಜ, ಕುಂಚಿಟಿಗ ಸಮಾಜ, ಬಲಿಜ ಸಮಾಜ, ಭಾವಸಾರ ಕ್ಷತ್ರೀಯ ಸಮಾಜ, ಛಲವಾದಿ ಸಮಾಜ, ಸವಿತ ಸಮಾಜ, ದಲಿತ ಸಮಾಜ, ಮಡಿವಾಳ ಸಮಾಜ, ಯಾದವ ಸಮಾಜ, ಈಡಿಗ ಸಮಾಜ ಸೇರಿದಂತೆ ಎಲ್ಲಾ ಸಮುದಾಯದವರು ಆಗಮಿಸಿದ್ದಾರೆ.

ಇದರಿಂದಲೇ ತಿಳಿಯುತ್ತದೆ, ರಾಜಣ್ಣ ಅವರ ಮೇಲೆ ಎಲ್ಲಾ ಸಮುದಾಯದವರು ಅಭಿಮಾನ ಗೌರವ ಇಟ್ಟುಕೊಂಡಿದ್ದಾರೆ. ಅ. 14 ರಂದು ಕೆ.ಎನ್.ರಾಜಣ್ಣ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಒತ್ತಾಯಿಸಿ ಶಿರಾ ನಗರದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತಾಲೂಕು ಕಚೇರಿಗೆ ಮನವಿ ಸಲ್ಲಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ರಾಜಣ್ಣ ಅವರ ಅಭಿಮಾನಿಗಳು ಭಾಗವಹಿಸಿ ಎಂದರು.

ನಗರಸಭಾ ಸದಸ್ಯರಾದ ಎಸ್.ಎಲ್.ರಂಗನಾಥ್ ಮಾತನಾಡಿ, ಜಿಲ್ಲೆಯಲ್ಲಿ ಹಿಂದುಳಿದ ವರ್ಗದವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವವರೆಂದರೆ ಕೆ.ಎನ್.ರಾಜಣ್ಣ ಒಬ್ಬರೆ. ಅವರು ಇಡೀ ರಾಜ್ಯಕ್ಕೆ ಸಹಕಾರ ರತ್ನ. ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದು ನಾವು ಊಹಿಸಲು ಅಸಾಧ್ಯ ಎಂದರು.

ಕೆ.ಎನ್.ರಾಜಣ್ಣ ಅವರು ಮುಂದಿನ ದಿನಗಳಲ್ಲಿ ಕೆಪಿಸಿಸಿ ಅಧ್ಯಕ್ಷರಾಗುತ್ತಾರೆ ಎಂದು ನಾವು ಭಾವಿಸಿದ್ದೆವು. ಆದರೆ ರಾಜ್ಯ ಸರಕಾರ ಏಕಾಏಕಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿದೆ. ಆದ್ದರಿಂದ ರಾಜಣ್ಣ ಅವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ನಾವೆಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕಿದೆ. ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಲ್ಲಿ ಮತ್ತೊಮ್ಮೆ ಮನವಿ ಮಾಡೋಣ ಎಂದರು.

ಯಾದವ ಮುಖಂಡ ಶ್ರೀನಿವಾಸ್ ಬಾಬು ಮಾತನಾಡಿ, ಕೆ.ಎನ್.ರಾಜಣ್ಣ ಅವರು ಬಡವರ ಪರವಾಗಿ ಕೆಲಸ ಮಾಡುತ್ತಿದ್ದ ಏಕೈಕ ಮುಖಂಡರಾಗಿದ್ದರು. ಎಲ್ಲಾ ಪಕ್ಷದ ಬಡವರ ಕಷ್ಟಕ್ಕೆ ಸ್ಪಂದಿಸಿದ್ದಾರೆ. ಕೆ.ಎನ್.ರಾಜಣ್ಣ ಅವರು ನೇರನುಡಿ ವ್ಯಕ್ತಿಯಾಗಿದ್ದು ಯಾರೇ ತಪ್ಪು ಮಾಡಿದ್ದರೂ ನೇರವಾಗಿ ಹೇಳುತ್ತಾರೆ. ಆದರೆ ಕೆಲವರು ಅದನ್ನೇ ಅಸ್ತ್ರ ಮಾಡಿಕೊಂಡು ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿದ್ದಾರೆ. ನಾವು ಯಾವತ್ತೂ ಕೆ.ಎನ್.ರಾಜಣ್ಣ ಪರವಾಗಿದ್ದೇವೆ. ಆದ್ದರಿಂದ ನಾವೆಲ್ಲರೂ ಹೋರಾಟ ಮಾಡುತ್ತೇವೆ. ಸಚಿವ ಸ್ಥಾನ ನೀಡುವವರೆಗೂ ಹೋರಾಟ ಮಾಡುತ್ತೇವೆ ಎಂದರು.

ಪೂರ್ವಭಾವಿ ಸಭೆಯಲ್ಲಿ ಮಾಜಿ ಜಿ.ಪಂ. ಸದಸ್ಯ ಕೆ.ಪಿ.ಶ್ರೀನಿವಾಸ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ನಾಗಣ್ಣ, ಮಾಜಿ ಛೆರ್ಮದನ್ ಕರಿಯಣ್ಣ, ಹಿರಿಯ ದಲಿತ ಮುಖಂಡ ಜೆ.ಎನ್.ರಾಜಸಿಂಹ, ಕರ್ನಾಟಕ ಮೇಧ ಗಿರಿಜನ ಕಲ್ಯಾಣ ಸೇವಾ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಡೆಮನೆ ಎಸ್ ರವಿಕುಮಾರ್, ಕೃಷ್ಣಮೂರ್ತಿ, ಬಿಜೆಪಿ ಮುಖಂಡ ಸತ್ಯನಾರಾಯಣ್, ಪರುಸಣ್ಣ, ಬಸವರಾಜ ನಾಯಕ್, ಗ್ರಾ.ಪಂ. ಸದಸ್ಯ ಶಿವಕುಮಾರ್ ತಾವರೆಕೆರೆ, ಚಂಗಾವರ ಕೃಷ್ಣಪ್ಪ, ಈರಣ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.

೨೭ಶಿರಾ೨: ಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾ ಗೊಳಿಸಿವುದನ್ನು ಖಂಡಿಸಿ ಹಾಗೂ ಕೆ.ಎನ್.ರಾಜಣ್ಣ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಪ್ರತಿಭಟನೆ ನಡೆಸಲು ಕೆ.ಎನ್.ಆರ್. ಅಭಿಮಾನಿಗಳು ಪೂರ್ವಭಾವಿ ನಡೆಸಿದರು.

PREV

Recommended Stories

ಅ.4ರಿಂದ ಅಂತಾರಾಜ್ಯ ವಿವಿ ಕಬಡ್ಡಿ ಕ್ರೀಡಾಕೂಟ
ಜಾನಪದ ಕಲೆ ಉಳಿಸಲು ಸಂಘಟನೆಗಳ ಪಾತ್ರ ಪ್ರಮುಖ: ಎಂ.ಎಂ. ವಿರಕ್ತಮಠ