ಪ್ರಚೋದನಕಾರಿ ಹೇಳಿಕೆ: ಆಂದೋಲಾಶ್ರೀ ವಿರುದ್ಧ ಪ್ರಕರಣ ದಾಖಲು

KannadaprabhaNewsNetwork | Published : Oct 7, 2023 2:14 AM

ಸಾರಾಂಶ

ಜಿಲ್ಲೆಯ ಶಹಾಪುರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಜೇವರ್ಗಿಯ ಆಂದೋಲಾ ಶ್ರೀ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ 295A, 153 ಸೆಕ್ಷನ್‌ನಡಿ ಪ್ರಕರಣ ದಾಖಲಾಗಿದೆ.
ಯಾದಗಿರಿ: ಜಿಲ್ಲೆಯ ಶಹಾಪುರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಜೇವರ್ಗಿಯ ಆಂದೋಲಾ ಶ್ರೀ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ 295A, 153 ಸೆಕ್ಷನ್‌ನಡಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಶಹಾಪುರದ ನಗರದಲ್ಲಿ ಇದೇ ಅ.3ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ಕಾರ್ಯಕ್ರಮ ನಡೆದಿತ್ತು. ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಕೋಮು ಪ್ರಚೋದನೆ ಭಾಷಣ ಮಾಡಿದ್ದ ಆಂದೋಲಾಶ್ರೀ, ಕೋಮು ಸೌಹಾರ್ದತೆಗೆ ಧಕ್ಕೆ, ಪ್ರಚೋದನೆ ಹಾಗೂ ಅನ್ಯಧರ್ಮೀಯರ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದರು ಎಂಬ ಆರೋಪದಡಿ ಈ ಪ್ರಕರಣ ದಾಖಲಾಗಿದೆ.

Share this article