ಕನ್ನಡಪ್ರಭ ವಾರ್ತೆ ಮಸ್ಕಿ
ಪಟ್ಟಣದಲ್ಲಿರುವ ಕುಡಿಯುವ ನೀರಿನ ಕೆರೆ ತುಂಬಿಸಲು ಕೈಗೊಂಡಿರುವ ಸಿದ್ಧತೆ ಪರಿಶೀಲಿಸಿ, ನಂತರ ಅಧಿಕಾರಿಗಳ ಸಭೆ ನಡೆಸಿ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಕುಡಿಯುವ ನೀರಿನ ಕೆರೆಗಳು ಖಾಲಿಯಾಗಿದ್ದು. ಆದ್ದರಿಂದ ಸರ್ಕಾರ ಕುಡಿಯುವ ನೀರಿಗಾಗಿ ತುಂಗಭದ್ರಾ ಎಡದಂಡೆ ಕಾಲುವೆಗೆ ನೀರು ಬೀಡಲು ಸೂಚನೆ ನೀಡಿದ ಹಿನ್ನೆಲೆ ಕಾಲುವೆಯಿಂದ ಮಸ್ಕಿ ಕೆರೆ ತುಂಬಿಸಲಾಗುತ್ತಿದೆ. ಆದ್ದರಿಂದ ತಾಲೂಕು ಆಡಳಿತದ ಎಲ್ಲಾ ಅಧಿಕಾರಿಗಳು ಕೆರೆ ಭರ್ತಿ ಮಾಡಿಸಬೇಕು. ಗ್ರಾಮ ಪಂಚಾಯತಿ ನರೇಗಾದಡಿ ಸಾಧ್ಯವಾದರೆ ಹೊಸ ಪೈಪ್ಲೈನ್, ಮೋಟರ್ ಅಳವಡಿಸಿ ನೀರು ತುಂಬಿಸುವಂತೆ ಪಿಡಿಒಗಳಿಗೆ ಸೂಚಿಸಬೇಕು. ತಾಲೂಕು ಮಟ್ಟದ ಅಧಿಕಾರಿಗಳು ಕೆರೆಗಳ ಪರಿಶೀಲನೆ ಮಾಡಿ ವರದಿ ನೀಡಬೇಕು ಎಂದರು.ಈ ವೇಳೆ ತಹಸೀಲ್ದಾರ್ ಅರಮನೆ ಸುಧಾ, ಪುರಸಭೆ ಮುಖ್ಯಾಧಿಕಾರಿನರಸರೆಡ್ಡಿ,ತಾಪಂ ಇಒ ಉಮೇಶ, ನೀರಾವರಿ ನಿಗಮದಎಇಇ ದಾವುದ್ ಸೇರಿದಂತೆ ಹಿರಿಯ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.