ಅಂತಿಮ ಮತದಾರರ ಪಟ್ಟಿ ಅ.19ರಂದು ಪ್ರಕಟ: ಡಿಸಿ

KannadaprabhaNewsNetwork |  
Published : Jul 25, 2026, 02:30 AM IST
ಚಿತ್ರ :  24ಎಂಡಿಕೆ2 : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿದರು.  | Kannada Prabha

ಸಾರಾಂಶ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಗಣತಿ ನಮೂನೆಯ ಡಿಜಿಟಲೀಕರಣವು ಶೇ.80 ರಷ್ಟು ಪೂರ್ಣಗೊಂಡಿದ್ದು, 28 ರೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸುವಂತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ನಿರ್ದೇಶನ ನೀಡಿದ್ದಾರೆ.

ಮಡಿಕೇರಿ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಗಣತಿ ನಮೂನೆಯ ಡಿಜಿಟಲೀಕರಣವು ಶೇ.80 ರಷ್ಟು ಪೂರ್ಣಗೊಂಡಿದ್ದು, 28 ರೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸುವಂತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಎಸ್‌ಐಆರ್ ಪ್ರಗತಿ ಸಂಬಂಧ ನೋಡಲ್ ಅಧಿಕಾರಿಗಳ ಜತೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂದರ್ಭದಲ್ಲಿ ಮೃತಪಟ್ಟ ಮತದಾರರ ಸಂಖ್ಯೆಯು 12,323, ಶಾಶ್ವತವಾಗಿ ಸ್ಥಳಾಂತರಗೊಂಡ ಮತದಾರರ ಸಂಖ್ಯೆ 24,676, ಎರಡು ಕಡೆ ಹೆಸರು ಹೊಂದಿರುವ ಮತದಾರರ ಸಂಖ್ಯೆ 3,484, ಗೈರು ಮತದಾರರ ಸಂಖ್ಯೆ 5,339, ಹಾಗೆಯೇ ಇತರೆ ಕಾರಣಗಳಿಂದ ಗಣತಿ ನಮೂನೆ ಸಲ್ಲಿಸದಿರುವ ಮತದಾರರ ಸಂಖ್ಯೆ 75 ಇದ್ದು, ಈ ಬಗ್ಗೆ ಮತ್ತೊಮ್ಮೆ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಮತಗಟ್ಟೆ ಅಧಿಕಾರಿಯು ಮನೆ ಮನೆಗೆ ಭೇಟಿ ನೀಡುವ ಕಾರ್ಯವು ಆ. 8 ರವರೆಗೆ ನಡೆಯಲಿದೆ. ಮತಗಟ್ಟೆ ಪುನರ್ ವಿಂಗಡಣೆ ಕಾರ್ಯಕ್ರಮ ಆ.8 ರಂದು ನಡೆಯಲಿದೆ. ಕರಡು ಮತದಾರರ ಪಟ್ಟಿಯು ಆ.17 ರಂದು ಪ್ರಕಟವಾಗಲಿದೆ. ಮತದಾರರ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಆ.17 ರಿಂದ ಸೆ.16 ರವರೆಗೆ ಕಾಲಾವಕಾಶ ನೀಡಲಾಗಿದೆ. ಸೂಚನೆ ಹಂತ/ ಹಕ್ಕು ಮತ್ತು ಆಕ್ಷೇಪಣೆಗಳ ತೀರುವಳಿಯು ಆ.17 ರಿಂದ ಅ.15 ರವರೆಗೆ ನಡೆಯಲಿದೆ. ಅಂತಿಮ ಮತದಾರರ ಪಟ್ಟಿಯು ಅ.19 ರಂದು ಪ್ರಕಟಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ನೋಡಲ್ ಅಧಿಕಾರಿಗಳಾದ ಮಂಜುನಾಥ್, ಶೇಖರ್, ಭಾಸ್ಕರ್, ಎಚ್.ಆರ್.ರಮೇಶ್, ಮಿಲನ ಭರತ್, ಬಾಲಕೃಷ್ಣ ರೈ, ಆಶಾ, ಗೌರಿ, ಗಿರೀಶ, ಗೋಪಿ, ನಾಚಪ್ಪ, ವಿ.ಟಿ.ವಿಸ್ಮಯಿ, ಕೃಷ್ಣಪ್ರಸಾದ್, ಸಿದ್ದರಾಜು, ಚುನಾವಣಾ ಶಿರಸ್ತೆದಾರರಾದ ಮಹೇಶ್, ಅನಿಲ್ ಕುಮಾರ್ ಇತರರು ತಮ್ಮ ತಮ್ಮ ವ್ಯಾಪ್ತಿಯ ಡಿಜಿಟಲೀಕರಣ ಪ್ರಗತಿ ಸಂಬಂಧ ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರ ಕಾರಾಗೃಹದಲ್ಲಿ ಕನ್ನಡಗೀತೆಗಳ ಗಾಯನ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಆಗ್ರಹಿಸಿ ಮಂಗಳೂರಲ್ಲಿ ಬೃಹತ್ ಪ್ರತಿಭಟನೆ