ಸಾಧು ಲಿಂಗಾಯತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು

KannadaprabhaNewsNetwork | Published : Feb 27, 2025 12:31 AM

ಸಾರಾಂಶ

ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನ ವತಿಯಿಂದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸಾಧು ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಪ್ರತಿಷ್ಠಾನದ ಆಯ್ಕೆ ಸಮಿತಿ ಸದಸ್ಯ ಡಾ. ಎಚ್.ವಿ. ವಾಮದೇವಪ್ಪ ಹೇಳಿದ್ದಾರೆ.

- ಯಾವುದೇ ಕಾಲೇಜಿನಲ್ಲಿ ಸರ್ಕಾರಿ ಕೋಟಾದಡಿ ಪ್ರವೇಶ ಪಡೆದವರು ಅರ್ಹರು: ಡಾ.ವಾಮದೇವಪ್ಪ - - - ಕನ್ನಡಪ್ರಭ ವಾರ್ತೆ ದಾವಣಗೆರೆ ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನ ವತಿಯಿಂದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸಾಧು ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಪ್ರತಿಷ್ಠಾನದ ಆಯ್ಕೆ ಸಮಿತಿ ಸದಸ್ಯ ಡಾ. ಎಚ್.ವಿ. ವಾಮದೇವಪ್ಪ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯಾದ್ಯಂತ ಇರುವ ಯಾವುದೇ ವೈದ್ಯಕೀಯ, ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸರ್ಕಾರಿ ಕೋಟಾದಲ್ಲಿ ಪ್ರವೇಶ ಪಡೆದಿರುವ, ಆರ್ಥಿಕವಾಗಿ ಹಿಂದುಳಿದಿರುವ ಸಾಧು ಲಿಂಗಾಯತ ಸಮಾಜದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು ಎಂದರು.

ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿಗಾಗಿ ಮೊಬೈಲ್: 94811- 82711, 92424- 43909, 98448- 60466 ಇಲ್ಲಿಗೆ ಸಂಪರ್ಕಿಸಬಹುದು. ಅರ್ಜಿ ನಮೂನೆಯನ್ನು ಮತ್ತು ಅರ್ಜಿ ಸಲ್ಲಿಸಲು ಸಂಬಂಧಪಟ್ಟ ನಿಬಂಧನೆಗಳನ್ನು ವೆಬ್‌ಸೈಟ್‌: ** mbpt.org **ನಿಂದ ಡೌನ್‌ಲೋಡ್ ಮಾಡಿಕೊಂಡು, ಆನ್‌ಲೈನ್‌ನಲ್ಲಿಯೂ ಅರ್ಜಿ ಸಲ್ಲಿಸಬಹುದು. ಇದಲ್ಲದೇ ** sharanamaganurbasappaprati@gmail.com ** ಇ-ಮೇಲ್‌ ಐ.ಡಿ. ಮೂಲಕವೂ ಅರ್ಜಿ ರವಾನಿಸಬಹುದು. ಅರ್ಜಿ ಸಲ್ಲಿಕೆಗೆ ಮಾರ್ಚ್ 15 ಕೊನೆ ದಿನವಾಗಿದೆ ಎಂದರು.

ಪ್ರಥಮ ವರ್ಷದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್ ವೈದ್ಯಕೀಯ, ದಂತ ವೈದ್ಯಕೀಯ ಕಾಲೇಜಿನ ದಾಖಲಾತಿ ರಸೀದಿಗಳು ಮತ್ತು ನೀಟ್ ರ್ಯಾಂಕಿಂಗ್‌ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಬೇಕು. ಎರಡು, ಮೂರು ಮತ್ತು ನಾಲ್ಕನೇ ವರ್ಷದ ವೈದ್ಯಕೀಯ, ದಂತ ವೈದ್ಯಕೀಯ ವಿದ್ಯಾರ್ಥಿಗಳು ಹಿಂದಿನ ವರ್ಷದ ಅಂಕಪಟ್ಟಿ ಮತ್ತು ಪ್ರಸ್ತುತ ಸಾಲಿನ ಕಾಲೇಜಿನ ಶುಲ್ಕದ ರಶೀದಿಯ ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು ಎಂದರು.

ಪ್ರತಿಷ್ಠಾನದ ವಿಳಾಸವಾದ ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನ, ನಂ.963, ಬಸವ ಸದನ ತರಳಬಾಳು ಬಡಾವಣೆ, ದಾವಣಗೆರೆ-577005 ಇಲ್ಲಿಗೆ ಸಂಪರ್ಕ ಮಾಡಬಹುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನ ಅಧ್ಯಕ್ಷ ಎಂ.ಬಿ.ಸಂಗಮೇಶ್ವರ ಗೌಡ, ಎಸ್.ಆರ್.ಶಿರಗುಂಬಿ, ಕುಸುಮಾ, ಲೋಹಿತ್ ಇದ್ದರು.

- - - -26ಕೆಡಿವಿಜಿ33.ಜೆಪಿಜಿ:

ದಾವಣಗೆರೆಯ ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನದಿಂದ ವೈದ್ಯಕೀಯ ಸಾಧು ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಕುರಿತು ಡಾ. ಎಚ್.ವಿ. ವಾಮದೇವಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

Share this article