ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಸಭೆಯಲ್ಲಿ ಬಾಲನ್ಯಾಯ ಕಾಯ್ದೆ-2015ಗೆ ಸಂಬಂಧಿಸಿದ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಬಾಲನ್ಯಾಯ ಮಂಡಳಿ, ಜಿಲ್ಲಾ ತನಿಖಾ ಸಮಿತಿ, ಮಕ್ಕಳ ಸಲಹಾ ಮಂಡಳಿಯ ಪ್ರಗತಿ ಪರಿಶೀಲಿಸಲಾಯಿತು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ.ವೀಣಾ ಎಂ. ಮಾತನಾಡಿ, ಎಚ್.ಐ.ವಿ ಸೋಂಕಿತ ಮತ್ತು ಬಾಧಿತ ಮಕ್ಕಳಿಗೆ ಪೌಷ್ಟಿಕ ಆಹಾರ, ವೈದ್ಯಕೀಯ ವೆಚ್ಚ ಹಾಗೂ ಇತರೆ ವೆಚ್ಚಕ್ಕಾಗಿ ಪ್ರತಿ ಮಾಹೆ ₹2000 ಗಳಂತೆ ಡಿಬಿಟಿ ಮೂಲಕ ಆರ್ಥಿಕ ಸಹಾಯಧನ ನೀಡಲಾಗುತ್ತಿದ್ದು, 2025-26ನೇ ಸಾಲಿನ ಒಟ್ಟು 2025-26ನೇ ಸಾಲಿನ ಒಟ್ಟು 356 ಮಕ್ಕಳಿಗೆ ಆರ್ಥಿಕ ಸೌಲಭ್ಯ ನೀಡಲಾಗಿದೆ ಎಂದು ಎಂದು ತಿಳಿಸಿದರು.ಮಕ್ಕಳ ಪಾಲನಾ ಸಂಸ್ಥೆಗಳಿಂದ ಬಿಡುಗಡೆಯಾದ ಮಕ್ಕಳು, ಅನಾಥ, ಏಕಪೋಷಕ, ಜೈಲಿನಲ್ಲಿರುವ ಪಾಲಕರ ಮಕ್ಕಳಿಗೆ ಹಾಗೂ ಇತರೆ ಮಕ್ಕಳಿಗೆ ಕುಟುಂಬದ ವಾತಾವರಣದಲ್ಲಿ ಬೆಳೆಯಲು ಹಾಗೂ ವಿದ್ಯಾಭ್ಯಾಸ ಮುಂದುವರಿಸಲು ಪ್ರತಿ ಮಾಹೆ 4 ಸಾವಿರದಂತೆ ಡಿಬಿಟಿ ಮೂಲಕ ಪ್ರಾಯೋಜಕತ್ವ ಯೋಜನೆಯಡಿ ಆರ್ಥಿಕ ಸಹಾಯಧನ ನೀಡಲಾಗುವುದು. 2025-26ನೇ ಸಾಲಿನ 4ನೇ ತ್ರೈಮಾಸಿಕದಲ್ಲಿ ಒಟ್ಟು 169 ಮಕ್ಕಳಿಗೆ ಆರ್ಥಿಕ ಸೌಲಭ್ಯ ನೀಡಲಾಗಿದೆ ಎಂದು ತಿಳಿಸಿದರು. 427 ಮಕ್ಕಳಿಗೆ ಅನುದಾನ ಬೇಡಿಕೆಗೆ ಕೇಂದ್ರ ಕಚೇರಿಗೆ ಸಲ್ಲಿಸಲಾಗಿದೆ. 2026-27ನೇ ಸಾಲಿಗೆ 324 ಮಕ್ಕಳನ್ನು ಸಭೆಯಲ್ಲಿ ಅನುಮೋದಿಸಲಾಯಿತು.
ಪೋಕ್ಸೋ ಕಾಯ್ದೆ-2012, ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳಿಗೆ ಅಭಯಾ ನಿಧಿ ಯೋಜನೆಯಡಿ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಆರ್ಥಿಕ ಸಹಾಯ ಧನ ಒದಗಿಸಲಾಗುವುದು. 3 ಮತ್ತು 4ನೇ ತ್ರೈಮಾಸಿಕದಲ್ಲಿ ಒಟ್ಟು 28 ಮಕ್ಕಳಿಗೆ ಸಹಾಯಧನ ನೀಡಲಾಗಿದೆ ಎಂದು ತಿಳಿಳಿಸಿದರು.
18 ವರ್ಷ ಪೂರ್ಣಗೊಂಡು ಮಕ್ಕಳ ಪಾಲನಾ ಸಂಸ್ಥೆಗಳಿಂದ ಬಿಡುಗಡೆಯಾದ ಮಕ್ಕಳಿಗೆ ಉನ್ನತ ವ್ಯಾಸಂಗ ಅಥವಾ ವೃತ್ತಿ ತರಬೇತಿ ಪಡೆಯಲು ಪ್ರತಿ ಮಾಹೆ ₹5 ಸಾವಿರದಂತೆ ಕನಿಷ್ಠ 3 ವರ್ಷಗಳ ಕಾಲ ಡಿಬಿಟಿ ಮೂಲಕ ಆರ್ಥಿಕ ಸಹಾಯಧನ ನೀಡಲಾಗುವುದು. 3 ಮತ್ತು 4ನೇ ತ್ರೈಮಾಸಿಕದಲ್ಲಿ ಒಟ್ಟು 10 ಮಕ್ಕಳಿಗೆ ಆರ್ಥಿಕ ಸಹಾಯಧನ ನೀಡಲಾಗಿದೆ ಎಂದು ಸಭೆಗೆ ತಿಳಿಸಿದರು. ಅಪರ ಜಿಲ್ಲಾಧಿಕಾರಿಗಳು ಮಕ್ಕಳ ಪೂರ್ಣ ವಿಳಾಸ, ವಿದ್ಯಾಭ್ಯಾಸದ ವಿವರ ಸಲ್ಲಿಸಲು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಒಟ್ಟು 123 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 74 ಪ್ರಕರಣಗಳು ಬಾಕಿ ಇವೆ. ಮಕ್ಕಳ ಸಹಾಯವಾಣಿಗೆ ಒಟ್ಟು 275 ಪ್ರಕರಣಗಳು ದಾಖಲಾಗಿದ್ದು, ಎಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಯಾವುದೇ ಪ್ರಕರಣ ಬಾಕಿ ಇಲ್ಲ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಸಭೆಗೆ ತಿಳಿಸಿದರು.