ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷರಿಗೆ ಆರ್ಥಿಕ ನೆರವು

KannadaprabhaNewsNetwork |  
Published : Mar 24, 2026, 01:30 AM IST
23ಎಚ್ಎಸ್ಎನ್6 : ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ಶಂಭುಲಿಂಗ ಅವರು ಗಂಭೀರ  ಅನಾರೋಗ್ಯದಿಂದ ಬಳಲುತ್ತಿದ್ದು ಬೇಲೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ ಬಿ ಶಿವರಾಜ್   ಮಣಿಪಾಲ್  ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದರು. | Kannada Prabha

ಸಾರಾಂಶ

ಕೆ. ಶಂಭುಲಿಂಗ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಕುರಿತು ತಿಳಿದುಕೊಂಡ ಬೇಲೂರು ತಾಲೂಕು ವಿತರಕರ ಸಂಘದ ಅಧ್ಯಕ್ಷ ಬಿಎಸ್ ಆರಾಧ್ಯ ಅವರ ಮನವಿ ಮೇರೆಗೆ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿಬಿ ಶಿವರಾಜ್ ಹಾಗೂ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಅವರೊಂದಿಗೆ ಮಾತನಾಡಿ ಧೈರ್ಯ ತುಂಬಿ ಸಹಾಯ ಧನ ನೀಡಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಿ ಬಿ ಶಿವರಾಜ್ ಹಾಗೂ ಪತ್ರಕರ್ತರು ಶಂಭುಲಿಂಗ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಕನ್ನಡಪ್ರಭ ವಾರ್ತೆ ಬೇಲೂರು

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ಶಂಭುಲಿಂಗ ಅವರು ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದು ಬೇಲೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ ಬಿ ಶಿವರಾಜ್ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದರು.ಕೆ. ಶಂಭುಲಿಂಗ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಕುರಿತು ತಿಳಿದುಕೊಂಡ ಬೇಲೂರು ತಾಲೂಕು ವಿತರಕರ ಸಂಘದ ಅಧ್ಯಕ್ಷ ಬಿಎಸ್ ಆರಾಧ್ಯ ಅವರ ಮನವಿ ಮೇರೆಗೆ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿಬಿ ಶಿವರಾಜ್ ಹಾಗೂ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಅವರೊಂದಿಗೆ ಮಾತನಾಡಿ ಧೈರ್ಯ ತುಂಬಿ ಸಹಾಯ ಧನ ನೀಡಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಿ ಬಿ ಶಿವರಾಜ್ ಹಾಗೂ ಪತ್ರಕರ್ತರು ಶಂಭುಲಿಂಗ ಅವರ ಕುಟುಂಬದವರಿಗೆ ಸಾಂತ್ವನ ಹೇಳಿ, ಯಾವುದೇ ಅಗತ್ಯ ಬಂದರೂ ಬೆಂಬಲ ನೀಡುವುದಾಗಿ ತಿಳಿಸಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದಿಂದ 10,000 ಸಹಾಯಧನ ನೀಡಿ, ಸಮಾಜಮುಖಿ ಕಾರ್ಯಕ್ಕೆ ಕೈಜೋಡಿಸಿದರು.

ತಾಲೂಕು ವಿತರಕರ ಸಂಘದ ಅಧ್ಯಕ್ಷ ಬಿ ಎಸ್ ಆರಾಧ್ಯ ಮಾತನಾಡಿ, “ಶಂಭುಲಿಂಗ ಅವರು ವರ್ಷಗಳ ಕಾಲ ಪತ್ರಿಕಾ ವಿತರಕರ ಹಕ್ಕುಗಳಿಗಾಗಿ ಹೋರಾಟ ನಡೆಸಿದವರು. ಇಂತಹ ಸಂದರ್ಭದಲ್ಲಿ ಅವರಿಗೆ ನಮ್ಮೆಲ್ಲರ ಸಹಾಯ ಅತ್ಯವಶ್ಯಕವಾಗಿದೆ.

ಶಂಭುಲಿಂಗ ಅವರಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಚಿಕಿತ್ಸೆ ಹಾಗೂ ವೈದ್ಯಕೀಯ ವೆಚ್ಚಗಳು ಎದುರಾಗುವ ಸಾಧ್ಯತೆ ಇರುವುದರಿಂದ, ಸಹೃದಯರು, ಪತ್ರಿಕಾ ವಿತರಕರು ಹಾಗೂ ಸಾರ್ವಜನಿಕರು ತಮ್ಮ ಕೈಲಾದಷ್ಟು ಆರ್ಥಿಕ ನೆರವು ನೀಡುವಂತೆ ಸಂಘ ಮನವಿ ಮಾಡಿದೆ ಎಂದರು.ಸಂಘದ ಪರವಾಗಿ ಸಹಾಯಧನ ಸಂಗ್ರಹಿಸುವ ಕಾರ್ಯವೂ ಆರಂಭಗೊಂಡಿದ್ದು, ರಾಜ್ಯದ ವಿವಿಧ ಭಾಗಗಳಿಂದ ಸಹಾಯ ಹರಿದು ಬರಲೆಂದು ನಿರೀಕ್ಷಿಸಲಾಗಿದೆ. “ಒಬ್ಬರ ನೋವಿಗೆ ಇನ್ನೊಬ್ಬರು ಸ್ಪಂದಿಸುವುದೇ ನಮ್ಮ ಸಮಾಜದ ಶಕ್ತಿ” ಎಂದು ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2028ಕ್ಕೆ ಹಿಂದೂ ಹೋರಾಟಗಾರಿಗೆ ಅಧಿಕಾರ ಸಿಕ್ಕರೆ ಕ್ರಾಂತಿ: ಬಸನಗೌಡ ಪಾಟೀಲ್ ಯತ್ನಾಳ್
ಹೊಳೆನರಸೀಪುರದಲ್ಲಿ ಕೈವಾರ ತಾತಯ್ಯ ಜಯಂತಿ