ಕನ್ನಡಪ್ರಭ ವಾರ್ತೆ ಮಧುಗಿರಿ
ಆರ್ಯವೈಶ್ಯ ಸಮಾಜದಲ್ಲಿರುವ ಬಡ ಕುಟುಂಬದ ವಿಧವೆಯರಿಗೆ ಮಾಶಾಸನ ನೀಡುವ ಮೂಲಕ ಅವರ ಆರ್ಥಿಕ ಸಬಲೀಕರಣಕ್ಕೆ ಮಹಾಸಭಾ ಮುಂದಾಗಿದೆ. ಆರ್ಥಿಕವಾಗಿ ಹಿಂದುಳಿದ ಆರ್ಯವೈಶ್ಯ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಬಡ್ಡಿ ರಹಿತ ಶೈಕ್ಷಣಿಕ ಸಾಲ ನೀಡಿ ಅವರ ಉನ್ನತ ಶಿಕ್ಷಣಕ್ಕೆ ನೆರವಾಗುತ್ತಿದ್ದೇವೆ ಎಂದು ಕರ್ನಾಟಕ ಆರ್ಯ ವೈಶ್ಯ ಮಹಾಸಭಾ ಜಿಲ್ಲಾ ಅಧ್ಯಕ್ಷ ಎಲ್. ಆರ್.ಚಂದ್ರಶೇಖರ್ ಹೇಳಿದರು.ಪಟ್ಟಣದ ದೊಡ್ಡಪೇಟೆಯಲ್ಲಿರುವ ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ಆಯೋಜಿಸಿದ್ದ ಸಮುದಾಯದಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ವೈಶ್ಯ ಸಮುದಾಯಕ್ಕೆ ತನ್ನದೇ ಆದ ಪರಂಪರೆ ಇದೆ. ಅದಾಗ್ಯೂ ಈ ಸ್ಪರ್ಧಾತ್ಮಕ ವ್ಯವಸ್ಥೆಯಲ್ಲಿ ನಮ್ಮ ಸಮಾಜದ ಪ್ರತಿಭೆಗಳನ್ನು ಮುಖ್ಯ ವಾಹಿನಿಗೆ ತರುವಂತಹ ಪ್ರಯತ್ನ ಹಾಗೂ ನಮ್ಮಲ್ಲಿನ ಹಿಂದುಳಿದ ಕುಟುಂಬದ ವೃತ್ತಿಪರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಮತ್ತು ಬೆಂಗಳೂರು ನಗರದಲ್ಲಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳಿಗೆ ಉಚಿತ ವಸತಿ ನಿಲಯ ಇನ್ನು ಹಲವಾರು ಸಮಾಜಮುಖಿ ಕಾರ್ಯಕ್ರಮಗಳು ಮಾಡುತ್ತಿದೆ ಎಂದರು.
ಕರ್ನಾಟಕ ಆರ್ಯವೈಶ್ಯ ಮಹಾಸಭಾ ನಿರ್ದೇಶಕ ಸಂಪಂಗಿ ರಾಮ ಶೆಟ್ಟಿ ಮಾತನಾಡಿ, ಸಂಘಟನೆ ಆರ್ಯ ವೈಶ್ಯ ಸಮಾಜದ ಏಕತೆ ಹಾಗೂ ಸಬಲೀಕರಣದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸಿ ಒಗ್ಗೂಡಿಸುವುದು ಮಹಾಸಭಾದ ಉದ್ದೇಶ ಎಂದರು.ದೇಶ ಉಳಿಯಲು ಒಳ್ಳೆಯ ನಾಯಕತ್ವ ಬೇಕು ಹಾಗೆ ನಿಮ್ಮ ಪಾಲಿಗೆ ಸಿಕ್ಕಿರುವ ಅದೃಷ್ಟ ಮಧುಗಿರಿ ಆರ್ಯವೈಶ್ಯ ಮಂಡಳಿ ಅಧ್ಯಕ್ಷರಾದ ಶ್ರೀನಿವಾಸ್ ಮೂರ್ತಿ ನಮ್ಮ ಸಮಾಜಕ್ಕೆ ಕೊಡುಗೆಯಾಗಿ ಸಿಕ್ಕಿದ್ದಾರೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅನುದಾನವನ್ನು ಸಮಾಜದ ಅಭಿವೃದ್ಧಿಗೆ ತಂದ ಮೊದಲ ವ್ಯಕ್ತಿ ಎಂದು ಶ್ಲಾಘಿಸಿದರು.
ತಿಪಟೂರು ಆರ್ಯವೈಶ್ಯ ಮಂಡಳಿ ಅಧ್ಯಕ್ಷರಾದ ಬಾಗೇಪಲ್ಲಿ ನಟರಾಜ್ ರವರು ದಿನಾಂಕ 20.07.2025 ರಂದು ಕರ್ನಾಟಕ ಆರ್ಯವೈಶ್ಯ ಮಹಾಸಭಾ ಜಿಲ್ಲಾ ಸಮಾವೇಶವನ್ನು ಆಯೋಜಿಸಲಾಗಿದೆ ನಮ್ಮ ಆರ್ಯವೈಶ್ಯ ಕುಲಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಮಧುಗಿರಿ ಆರ್ಯವೈಶ್ಯ ಸಂಘದ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ ಕಾರ್ಯದರ್ಶಿ ಭೀಮರಾಜ, ಎಸ್ ಎಂ ಕೃಷ್ಣ, ಚಿನ್ನ ವೆಂಕಟ ಶೆಟ್ಟಿ, ಡಾ.ವಿವೇಕಾನಂದ ಶೆಟ್ಟಿ, ಮಧುಸೂದನ್,ಮಾರುತಿ ಕುಮಾರ್, ಬಾಗೇಪಲ್ಲಿ ನಟರಾಜ್ ಇತರರಿದ್ದರು.