ಸಹಕಾರಿ ಸಂಘಗಳಲ್ಲಿ ಆರ್ಥಿಕ ಶಿಸ್ತು ಅತ್ಯಗತ್ಯ: ಜಿ.ನಂಜನಗೌಡ

KannadaprabhaNewsNetwork |  
Published : Jun 24, 2026, 03:30 AM IST
ಫೋಟೋವಿವರ- (20ಎಚ್‌ಪಿಟಿ2)ಹೊಸಪೇಟೆ ನಗರ ಪ್ರೀಯದರ್ಶೀನಿ ಹೋಟೆಲ್ ಸಭಾಂಗಣದಲ್ಲಿ ಶನಿವಾರ ನಡೆದ ವಿಜಯನಗರ ಜಿಲ್ಲೆಯ ಸೌಹಾರ್ದ ಸಹಕಾರಿಗಳ ಸಂಪರ್ಕ ಸಭೆ ಹಾಗೂ ವಿಷಯಾಧಾರಿತ ತರಬೇತಿ ಕಾರ್ಯಕ್ರಮ ನಡೆಯಿತು | Kannada Prabha

ಸಾರಾಂಶ

ಸಹಕಾರ ಸಂಘಗಳ ಕಾಯ್ದೆ ನಿಯಮಗಳು ರಾಜ್ಯ ಸರ್ಕಾರವು ಕಾಲ ಕಾಲಕ್ಕೆ ತಿದ್ದುಪಡಿ ಮಾಡುತ್ತಿವೆ

ಹೊಸಪೇಟೆ: ಸಹಕಾರಿ ಸಂಘಗಳು ಆರ್ಥಿಕ ಸಂಸ್ಥೆಯಾಗಿರುವುದರಿಂದ ಸಂಘಗಳು ಆರ್ಥಿಕ ಶಿಸ್ತು ಅಳವಡಿಸಿಕೊಳ್ಳಬೇಕು ಎಂದು ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ರಾಜ್ಯ ಅಧ್ಯಕ್ಷ ಜಿ. ನಂಜನಗೌಡ ತಿಳಿಸಿದರು.

ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಶನಿವಾರ ನಡೆದ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ ಪ್ರಾಂತೀಯ ಕಚೇರಿ ಕಲಬುರಗಿ ಆಯೋಜಿಸಿದ ವಿಜಯನಗರ ಜಿಲ್ಲೆಯ ಸೌಹಾರ್ದ ಸಹಕಾರಿಗಳ ಸಂಪರ್ಕ ಸಭೆ ಹಾಗೂ ವಿಷಯಾಧಾರಿತ ತರಬೇತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಹಕಾರ ಸಂಘಗಳ ಕಾಯ್ದೆ ನಿಯಮಗಳು ರಾಜ್ಯ ಸರ್ಕಾರವು ಕಾಲ ಕಾಲಕ್ಕೆ ತಿದ್ದುಪಡಿ ಮಾಡುತ್ತಿವೆ ಅವುಗಳನ್ನು ಅವಲೋಕಿಸಿ ಸಹಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಸಹಕಾರ ಸಂಘಗಳ ಉಪನಿಬಂಧಕರಾದ ವೀರಭದ್ರಯ್ಯ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿ, ಸೌಹಾರ್ದ ಸಹಕಾರಿಯ ತರಬೇತಿಯ ಮಹತ್ವದ ಕುರಿತು ವಿವರಿಸಿದರು.

ಮುಖ್ಯ ಅಥಿತಿಗಳಾಗಿ ಸಂಯುಕ್ತ ಸಹಕಾರಿಯ ನಿರ್ದೇಶಕ ಜಿ.ಶ್ರೀಧರ, ಬಳ್ಳಾರಿ ಜನತಾ ಬಜಾರ ಸಹಕಾರಿಯ ಅಧ್ಯಕ್ಷ ಪಲ್ಯದ ಮೈತ್ರಿ, ಹೊಸಪೇಟೆಯ ವಿಕಾಸ್ ಸೌಹಾರ್ದ ಬ್ಯಾಂಕ್ ಅಧ್ಯಕ್ಷ ವಿಶ್ವನಾಥ ಹಿರೇಮಠ, ಲೆಕ್ಕ ಪರಿಶೋಧಕ ಮಧುಕರ್ ಹೆಗಡೆ, ಸಂಪನ್ಮೂಲ ವ್ಯಕ್ತಿಗಳಾದ ಯರ್ರಿಸ್ವಾಮಿ ಇದ್ದರು.

ಸಂಪನ್ಮೂಲ ವ್ಯಕ್ತಿಗಳಾದ ಯರ್ರಿಸ್ವಾಮಿ ಆರ್ಥಿಕ ಶಿಸ್ತು ಕುರಿತು ಉಪನ್ಯಾಸ ನೀಡಿದರು.

ಜಿಲ್ಲೆಯ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು/ ಉಪಾಧ್ಯಕ್ಷರು ನಿರ್ದೇಶಕರು ಹಾಗೂ ಮುಖ್ಯ ಕಾರ್ಯ ನಿರ್ವಾಹಕರು ಸಭೆಯಲ್ಲಿ ಭಾಗವಹಿಸಿದರು. ಪ್ರಾಂತೀಯ ಅಧಿಕಾರಿ ಸಂಜಯ ಕೋರಟಕರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸೌಹಾರ್ದ ಅಭಿವೃದ್ಧಿ ಅಧಿಕಾರಿ ವೀರಶಟ್ಟಿ ನಿರೂಪಿಸಿ, ವಂದಿಸಿದರು.

ಹೊಸಪೇಟೆ ನಗರ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ಸೌಹಾರ್ದ ಸಹಕಾರಿಗಳ ಸಂಪರ್ಕ ಸಭೆ ಹಾಗೂ ವಿಷಯಾಧಾರಿತ ತರಬೇತಿ ಕಾರ್ಯಕ್ರಮ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇವಿನ ಹಣ್ಣಿಗೆ ಭಾರಿ ಬೇಡಿಕೆ
ಕಾರ್ಖಾನೆ ಬಾಧಿತ ಹಳ್ಳಿಗಳಿಗೆ ಸಿಎಂ ಭೇಟಿ ನೀಡಲಿ