ಹಣಕಾಸು ಅವ್ಯವಹಾರ: ಬ್ಯಾಂಕ್‌ ವ್ಯವಸ್ಥಾಪಕನ ಬಂಧನ

KannadaprabhaNewsNetwork |  
Published : Feb 02, 2025, 01:01 AM IST
ವೆಂಕಟೇಶ ಮಜ್ಜಿಗುಡ್ಡಾ | Kannada Prabha

ಸಾರಾಂಶ

ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲ ನೀಡಿ, ಅದನ್ನು ಸಂಘದವರು ಮರು ಪಾವತಿ ಮಾಡಿದರೂ ದಾಖಲೆಗಳಲ್ಲಿ ನಮೂದಿಸದೇ ಅಪರಾತಪರಾ ಮಾಡಿದ್ದ ಆರೋಪದ ಮೇಲೆ ಇಲ್ಲಿಯ ಕೆನರಾ (ಸಿಂಡಿಕೇಟ್) ಬ್ಯಾಂಕಿನ ಹಿರಿಯ ವ್ಯವಸ್ಥಾಪಕರಾಗಿದ್ದ ವೆಂಕಟೇಶ ಮಜ್ಜಿಗುಡ್ಡ ಅವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ಬಂಧಿಸಿ ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದಾರೆ.

ಅಂಕೋಲಾ: ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲ ನೀಡಿ, ಅದನ್ನು ಸಂಘದವರು ಮರು ಪಾವತಿ ಮಾಡಿದರೂ ದಾಖಲೆಗಳಲ್ಲಿ ನಮೂದಿಸದೇ ಅಪರಾತಪರಾ ಮಾಡಿದ್ದ ಆರೋಪದ ಮೇಲೆ ಇಲ್ಲಿಯ ಕೆನರಾ (ಸಿಂಡಿಕೇಟ್) ಬ್ಯಾಂಕಿನ ಹಿರಿಯ ವ್ಯವಸ್ಥಾಪಕರಾಗಿದ್ದ ವೆಂಕಟೇಶ ಮಜ್ಜಿಗುಡ್ಡ ಅವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ಬಂಧಿಸಿ ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದಾರೆ.

ಒಂದೂವರೆ ವರ್ಷದಿಂದ ತಲೆ ಮರೆಸಿಕೊಂಡಿದ್ದ ವೆಂಕಟೇಶ ಮಜ್ಜಿಗುಡ್ಡ ಅವರನ್ನು (ಸಿಡಿಆರ್) ತಾಂತ್ರಿಕ ಸಾಕ್ಷಿಯ ಮೇರೆಗೆ ಸಿಐಡಿ ಅಧಿಕಾರಿಗಳು ಬಾಗಲಕೋಟೆಯಲ್ಲಿ ವಶಕ್ಕೆ ಪಡೆದು ಅಂಕೋಲಾದ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಆರೋಪವೇನು?: ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲ ನೀಡಿ, ಅದನ್ನು ಸಂಘದವರು ಮರುಪಾವತಿ ಮಾಡಿದರೂ ದಾಖಲೆಗಳಲ್ಲಿ ನಮೂದಿಸದೇ ಬ್ಯಾಂಕಿನ ಹಿರಿಯ ವ್ಯವಸ್ಥಾಪಕ ವೆಂಕಟೇಶ ಮಜ್ಜಿಗುಡ್ಡ ನಮಗೆ ಮೋಸ ಮಾಡಿದ್ದಾರೆ ಎಂದು ಸಂಘದ ಮಹಿಳೆಯರು ಆರೋಪಿಸಿದ್ದರು. ಬ್ಯಾಂಕಿನ ಇತರ ಸಿಬ್ಬಂದಿ ಐಡಿ ಬಳಸಿ ಬ್ಯಾಂಕ್‌ ಹಾಗೂ ಗ್ರಾಹಕರಿಗೆ ವಂಚಿಸಿರುವ ಬಗ್ಗೆ ದೂರು ಕೇಳಿ ಬಂದಿತ್ತು. ಬ್ಯಾಂಕ್‌ ಅಧಿಕಾರಿಗಳು ತನಿಖೆಗೆ ನಡೆಸಿದಾಗ ತಪ್ಪು ಕಂಡುಬಂದಿದ್ದರಿಂದ ಅವರನ್ನು ಸೇವೆಯಿಂದಲೆ ವಜಾಗೊಳಿಸಿ ಕೆನರಾ ಬ್ಯಾಂಕಿನ ರಾಜ್ಯ ಮುಖ್ಯ ಅಧಿಕಾರಿ ಆದೇಶ ಹೊರಡಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಸ್ಯೆ ಬಗೆಹರಿದ್ರೆ 6 ತಿಂಗಳಲ್ಲಿ 1 ಲಕ್ಷ ನೇಮಕಾತಿ : ಸಾರಿಗೆ ಸಚಿವ
ಸರ್ಕಾರದಿಂದ ಮಹತ್ವದ ನಿರ್ಧಾರ : ವಿಪತ್ತು ವೇಳೆ ಇಡೀ ಊರಿನ ರೈತರಿಗೆ ಪರಿಹಾರ