ಅಲ್ಪನಾ ಬದರಿನಾಥ್ ಭರತನಾಟ್ಯ ರಂಗಾರೋಹಣ

KannadaprabhaNewsNetwork |  
Published : Aug 02, 2025, 01:45 AM IST
46 | Kannada Prabha

ಸಾರಾಂಶ

ಮದ್ರಾಸ್ ಐಐಟಿಯಲ್ಲಿ ಈ ಸಾಲಿನಲ್ಲಿ ಸೀಟು ದಕ್ಕಿಸಿಕೊಂಡಿರುವ ಅಲ್ಪನಾ, ಮುಂಬರುವ ದಿನಗಳಲ್ಲಿ ಭರತನಾಟ್ಯ ರಂಗಕ್ಕೂ ಉತ್ತಮ ಕೊಡುಗೆಗಳನ್ನು ನೀಡಲಿದ್ದಾಳೆ.

ಕನ್ನಡಪ್ರಭ ವಾರ್ತೆ ಮೈಸೂರು

ಕೆ.ಆರ್. ನಗರ ತಾಲೂಕು ಹಂಪಾಪುರ ಮೂಲದ ಹಣಕಾಸು ತಜ್ಞ ಎಚ್.ಆರ್. ಬದರಿನಾಥ್ ಮತ್ತು ಸ್ಮಿತಾ ಮೈಸೂರು ಅವರ ಪುತ್ರಿ ಅಲ್ಪನಾ ಬದರಿನಾಥ್ ಭರತನಾಟ್ಯ ರಂಗಾರೋಹಣ ಕಾರ್ಯಕ್ರಮ ಗುರುವಾರ ಸಂಜೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಿತು.

ಮುಖ್ಯಅತಿಥಿಯಾಗಿದ್ದ ಪ್ರಖ್ಯಾತ ಕೂಚಿಪುಡಿ ವಿದುಷಿ ವೈಜಯಂತಿ ಕಾಶಿ ಮಾತನಾಡಿ, ರಾಜಧಾನಿಯ ಚಾಮರಾಜ ಪೇಟೆಯ ವೆಂಕಟೇಶ ನೃತ್ಯ ಮಂದಿರದ ಹಿರಿಯ ನೃತ್ಯವಿದುಷಿ ರಾಧಾ ಶ್ರೀಧರ್ ಶಿಷ್ಯೆ ಅಲ್ಪನಾಗೆ ಶಿಕ್ಷಣ ಮತ್ತು ಕಲಾ ರಂಗದಲ್ಲಿ ಉತ್ತಮ ಭವಿಷ್ಯವಿದೆ ಎಂದರು.

ಮದ್ರಾಸ್ ಐಐಟಿಯಲ್ಲಿ ಈ ಸಾಲಿನಲ್ಲಿ ಸೀಟು ದಕ್ಕಿಸಿಕೊಂಡಿರುವ ಅಲ್ಪನಾ, ಮುಂಬರುವ ದಿನಗಳಲ್ಲಿ ಭರತನಾಟ್ಯ ರಂಗಕ್ಕೂ ಉತ್ತಮ ಕೊಡುಗೆಗಳನ್ನು ನೀಡಲಿದ್ದಾಳೆ. ಆಕೆಯ ಭಾವಾಭಿನಯವೇ ಇದಕ್ಕೆ ದಿಕ್ಸೂಚಿಯಾಗಿದೆ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಖ್ಯಾತ ಆಸ್ಥಾನ ವಿದ್ವಾಂಸರಾಗಿದ್ದ ಬಿ.ಕೆ. ಪದ್ಮನಾಭರಾಯರು ಕಲಾವಿದೆಯ ಕುಟುಂಬದ ಹಿರಿಯರು. ಅವರ ರಚನೆಯ ಗಣೇಶ ಸ್ತುತಿಯಿಂದಲೇ ಕಾರ್ಯಕ್ರಮ ಆರಂಭಿಸಿದ್ದು ಮಾದರಿ. ಹಿರಿಯರ ಕೃಪೆ ಮತ್ತು ಅಶೀರ್ವಾದವೇ ಮಕ್ಕಳ ಬೆಳವಣಿಗೆಗೆ ರಕ್ಷೆ ಎಂಬುದು ಇಲ್ಲಿ ಕಾರ್ಯರೂಪಕ್ಕೆ ಬಂದಿರುವುದು ಅನುಸರಣೀಯ ಎಂದರು.

ಹಿರಿಯ ಕಲಾ ವಿಮರ್ಷಕ ಡಾ. ಸೂರ್ಯ ಪ್ರಸಾದ್ ಮಾತನಾಡಿ, ಕಲಾವಿದೆ ಅಲ್ಪನಾ ‘ವರ್ಣ‘ ವನ್ನು ಮನೋಜ್ಞವಾಗಿ ಪಡ ಮೂಡಿಸಿರುವುದು ಖುಷಿ ನೀಡಿದೆ ಎಂದರು.

ಐಸಿಸಿಆರ್ ಪ್ರಾದೇಶಿಕ ನಿರ್ದೇಶಕ ಪ್ರದೀಪ್ ಕುಮಾರ್, ಗುರುಗಳಾದ ರಾಧಾ ಶ್ರೀಧರ್, ಕುಸುಮಾ ರಾವ್, ಪಾಲಕರಾದ ಬದರಿನಾಥ್ ಮತ್ತು ಮೈಸೂರು ಸ್ಮಿತಾ ಇದ್ದರು.

ಗಾಯನದಲ್ಲಿ ವಿದುಷಿ ಐಶ್ವರ್ಯಾ ನಿತ್ಯಾನಂದ, ನಟವಾಂಗದಲ್ಲಿ ವಿದ್ವಾನ್. ಡಿ.ವಿ. ಪ್ರಸನ್ನ ಕುಮಾರ, ಮೃದಂಗದಲ್ಲಿ ವಿದ್ವಾನ್ ಸಾಯಿ ವಂಶಿ, ಕೊಳಲಿನಲ್ಲಿ ವಿದ್ವಾನ್ ಮಹೇಶ್ ಸ್ವಾಮಿ, ಪಿಟೀಲಿನಲ್ಲಿ ವಿದ್ವಾನ್ ಮೈಸೂರು ಆರ್. ದಯಾಕರ್ ಮತ್ತು ರಿದಂ ಪ್ಯಾಡ್ ನಲ್ಲಿ ಮಿಥುನ್ ಶಕ್ತಿ ಸಹಕಾರ ನೀಡಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ