ಬೀದಿಬದಿ ವ್ಯಾಪಾರಸ್ಥರಿಗೆ ಕೇಂದ್ರದಿಂದ ಆರ್ಥಿಕ ಸೌಲಭ್ಯ: ಶಾಸಕ ಡಾ. ಚಂದ್ರು ಲಮಾಣಿ

KannadaprabhaNewsNetwork |  
Published : Mar 04, 2024, 01:17 AM IST
ಶಿರಹಟ್ಟಿಯಲ್ಲಿ ಕೌಶಲ್ಯಾಭಿವೃದ್ದಿ ಉದ್ಯಮಶೀಲತಾ ಜೀವನೋಪಾಯ, ಪಟ್ಟಣ ಪಂಚಯತ ಶಿರಹಟ್ಟಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ, ಪಿಎಂ ಸ್ವನಿಧಿಯ ಉತ್ತಸವ ಕಾರ್ಯಕ್ರಮ ಹಾಗೂ ಬೀದಿ ಬದಿ ವ್ಯಾಪಾರಸ್ಥರಿಗೆ ಮಾರಾಟ ಪ್ರಮಾಣ ಪತ್ರ ವಿತರಿಸಿದ ಶಾಸಕ ಡಾ: ಚಂದ್ರು ಲಮಾಣಿ. | Kannada Prabha

ಸಾರಾಂಶ

ಪ್ರತಿಯೊಂದು ಮನೆಗೂ ಸಹ ಕೇಂದ್ರ ಸರಕಾರದ ಒಂದಿಲ್ಲೊಂದು ಯೋಜನೆಯನು ತಲುಪಿಸಲಾಗುತ್ತಿದೆ. ಇದೀಗ ಬೀದಿ ಬದಿ ವ್ಯಾಪಾರಸ್ಥರಿಗೂ ಸಹ ಆರ್ಥಿಕ ಸೌಲಭ್ಯವನ್ನು ಕಲ್ಪಿಸುತ್ತಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಶಿರಹಟ್ಟಿ: ಪ್ರತಿಯೊಂದು ಮನೆಗೂ ಸಹ ಕೇಂದ್ರ ಸರಕಾರದ ಒಂದಿಲ್ಲೊಂದು ಯೋಜನೆಯನು ತಲುಪಿಸಲಾಗುತ್ತಿದೆ. ಇದೀಗ ಬೀದಿ ಬದಿ ವ್ಯಾಪಾರಸ್ಥರಿಗೂ ಸಹ ಆರ್ಥಿಕ ಸೌಲಭ್ಯವನ್ನು ಕಲ್ಪಿಸುತ್ತಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಅವರು ಶನಿವಾರ ಶಿರಹಟ್ಟಿಯಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಜೀವನೋಪಾಯ, ಪಟ್ಟಣ ಪಂಚಾಯತ ಶಿರಹಟ್ಟಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ, ಪಿಎಂ ಸ್ವನಿಧಿಯ ಉತ್ಸವ ಕಾರ್ಯಕ್ರಮ ಹಾಗೂ ಬೀದಿ ಬದಿ ವ್ಯಾಪಾರಸ್ಥರಿಗೆ ಮಾರಾಟ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಆಯುಷ್ಮಾನ ಭಾರತ ಯೋಜನೆ ಅಡಿಯಲ್ಲಿ 5 ಲಕ್ಷದ ವರೆಗೆ ಸಹಾಯಧನ ಪಡೆಯಬಹುದಾಗಿದೆ. ಹೊಸದಾಗಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಕೌಶಲ್ಯಾಧಾರಿತ ಕೆಲಸ ಮಾಡುವಂತಹ ಕುಟುಂಬಗಳಿಗೂ ಸಹ ಹಂತ ಹಂತವಾಗಿ ಆರ್ಥಿಕ ಸೌಲಭ್ಯವನ್ನು ನೀಡಲಾಗುತ್ತಿದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಜೊತೆಗೆ ಡಿಜಿಟಲ್ ವ್ಯವಹಾರ ಮಾಡಿದ ವ್ಯಾಪಾರಸ್ಥರಿಗೆ ಮಾಸಿಕವಾಗಿಯೂ ಸಹ ಸಹಾಯಧನ ಸಿಗಲಿದೆ. ಆದ್ದರಿಂದ ಹೆಚ್ಚು ಡಿಜಿಟಲ್ ವ್ಯವಹರಿಸಬೇಕೆಂದು ಹೇಳಿದರು.

ತಹಸೀಲ್ದಾರ್‌ ಅನಿಲ ಬಡಿಗೇರ, ಮುಖ್ಯಾಧಿಕಾರಿ ಸಿದ್ದರಾಯ ಕಟ್ಟಿಮನಿ, ಪಪಂ ಮಾಜಿ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಸದಸ್ಯರಾದ ಸಂದೀಪ ಕಪ್ಪತ್ತನವರ, ಫಕ್ಕೀರೇಶ ರಟ್ಟಿಹಳ್ಳಿ, ಹೊನ್ನಪ್ಪ ಶಿರಹಟ್ಟಿ, ಇಸಾಕ ಆದ್ರಳ್ಳಿ, ಅಲ್ಲಾಭಕ್ಷಿ ನಗಾರಿ, ಶಬ್ಬೀರ ನಗಾರಿ, ಮಾಬುಸಾಬ ಲಕ್ಷ್ಮೇಶ್ವರ, ದೇವಪ್ಪ ಆಡೂರ, ನಂದಾ ಪಲ್ಲೇದ, ಎಂ.ಕೆ. ಲಮಾಣಿ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗು ಸಾವಿನ ಶಾಕ್‌ನಿಂದ ತಾಯಿಯೂ ಆತ್ಮ*ತ್ಯೆ
ಗ್ಯಾಸ್‌ಗಾಗಿ ಆಟೋ ಚಾಲಕರ ಯುದ್ಧ! - ಬಂಕ್‌ಗಳ ಮುಂದೆ ರಾತ್ರಿ ಇಡೀ ಜಾಗರಣೆ