ಆರ್ಥಿಕ ಭವಿಷ್ಯ ಭದ್ರತೆ ಯುವನಿಧಿ ಉದ್ದೇಶ: ಸಂಗಮೇಶ್ವರ್

KannadaprabhaNewsNetwork |  
Published : Jan 09, 2024, 02:00 AM IST
ಚಿತ್ರ: ಡಿ೮-ಬಿಡಿವಿಟಿಭದ್ರಾವತಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿದರು. | Kannada Prabha

ಸಾರಾಂಶ

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿ ಜ.12ರಂದು ಶಿವಮೊಗ್ಗದಲ್ಲಿ ಮಹತ್ವಾಂಕಾಕ್ಷೆಯ ಯುವನಿಧಿ ಯೋಜನೆ ಜಾರಿಯಾಗುತ್ತಿದೆ. ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆದಿವೆ ಎಂದು ಭದ್ರಾವತಿಯಲ್ಲಿ ಶಾಸಕ ಬಿ.ಕೆ.ಸಂಗಮೇಶ್‌ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ, ಭದ್ರಾವತಿ

ಯುವಪೀಳಿಗೆಗೆ ಆದರ್ಶರಾಗಿರುವ ಸ್ವಾಮಿ ವಿವೇಕಾನಂದರ ಜನ್ಮದಿನ ಜ.12ರಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆದಿವೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು.

ಭದ್ರಾವತಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿದ್ಯಾವಂತ, ನಿರುದ್ಯೋಗಿ ಯುವಕರ ಆರ್ಥಿಕ ಭವಿಷ್ಯ ಭದ್ರವಾಗಿಸಲು ಯುವನಿಧಿ ಯೋಜನೆ ಸಹಕಾರಿಯಾಗಿದೆ. 2023ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೊಮಾ ಮುಗಿಸಿರುವ ನಿರುದ್ಯೋಗಿ ಯುವಜನರು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದರು.

ಯುವನಿಧಿ ಯೋಜನೆ ತಾಲೂಕು ಉಸ್ತುವಾರಿ ರಮೇಶ್ ಶಂಕರಘಟ್ಟ ಮಾತನಾಡಿ, ಜ.12ರಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ ಶಿವಮೊಗ್ಗ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿರುವ ಬೃಹತ್ ಕಾರ್ಯಕ್ರಮದಲ್ಲಿ ಅರ್ಜಿ ಸಲ್ಲಿಸಿರುವ ಫಲಾನುಭವಿ ನಿರುದ್ಯೋಗಿ ಯುವಕರ ಬ್ಯಾಂಕ್ ಖಾತೆಗೆ ನೇರ ಹಣ ವರ್ಗಾವಣೆ ಮೂಲಕ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉನ್ನತ ಶಿಕ್ಷಣ ಸಚಿವರು ಸೇರಿದಂತೆ ಸಂಪುಟ ದರ್ಜೆಯ ಹಲವು ಸಚಿವರು ಪಾಲ್ಗೊಳ್ಳಲಿದ್ದಾರೆ. ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಶಾಸಕರಾದ ಬಿ.ಕೆ. ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್ ಸೇರಿದಂತೆ ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಪಂ ಮಾಜಿ ಅಧ್ಯಕ್ಷೆ ಬಲ್ಕೀಷ್ ಬಾನು, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಎಸ್.ಕುಮಾರ್, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್. ಷಡಾಕ್ಷರಿ, ಮಹಿಳಾ ಘಟಕದ ಅಧ್ಯಕ್ಷೆ ಸುಕನ್ಯಾ ರಾಜು, ಯುವ ಘಟಕದ ನಗರ ಅಧ್ಯಕ್ಷ ಅಫ್ತಾಪ್ ಅಹಮದ್, ನಗರಸಭೆ ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಮಾಜಿ ಉಪಾಧ್ಯಕ್ಷ ಚನ್ನಪ್ಪ, ಮುಖಂಡರಾದ ಸಿ.ಎಂ. ಖಾದರ್, ಎಸ್. ಮಣಿಶೇಖರ್, ಅಂತೋಣಿ ವಿಲ್ಸನ್, ಸಿ.ಜಯಪ್ಪ, ಬಿ.ಗಂಗಾಧರ್, ಮುಸ್ವೀರ್, ಅಭಿಲಾಷ್ ಇನ್ನಿತರರು ಉಪಸ್ಥಿತರಿದ್ದರು.

- - - -ಡಿ8ಬಿಡಿವಿಟಿ:

ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿಭಟನೆ ನಂತರ ಹರಾಜು ಮತ್ತೆ ಆರಂಭ
ಪತಿ ಕೊಲೆ: ಪತ್ನಿ ಪ್ರಿಯಕರ ಸೇರಿ ನಾಲ್ವರ ಸೆರೆ