ಚಿಕ್ಕಮಗಳೂರು: ಜಿಲ್ಲಾದ್ಯಂತ ಬಾಂಗ್ಲ ಅಕ್ರಮ ವಲಸಿಗರ ಪತ್ತೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿರ್ದೇಶಿಸಿದ್ದಾರೆ.
ಇದೇ ವೇಳೆ ನೂತನವಾಗಿ ಸ್ಥಾಪಿಸಲಾದ ಇಂಟೆಗ್ರೇಟೆಡ್ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ (ಐಸಿಸಿಸಿ)ಗೆ ಭೇಟಿ ನೀಡಿ ಪರಿಶೀಲಿಸಿ ಕ್ಯಾಮರಾ ಗುಣಮಟ್ಟ ತುಂಬಾ ಚೆನ್ನಾಗಿದೆ. ಚಿಕ್ಕಮಗಳೂರು ನಗರಕ್ಕೆ ಸೀಮಿತವಾದ ಈ ಕೇಂದ್ರದ ಕಾರ್ಯ ಚಟುವಟಿಕೆಯನ್ನು ಜಿಲ್ಲೆಯ ತಾಲೂಕು ಕೇಂದ್ರ ಸೇರಿದಂತೆ ಪ್ರಮುಖ ಸ್ಥಳಗಳಿಳೂ ವಿಸ್ತರಿಸಲು ಕ್ರಮ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಫೋಟೊ::ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾದ ಇಂಟಿಗ್ರೇಟೆಡ್ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ನ್ನು ಗೃಹ ಸಚಿವ ಡಾ,ಜಿ.ಪರಮೇಶ್ವರ್ ಪರಿಶೀಲಿಸಿದರು. ಈ ವೇಳೆ ಜಿಲ್ಲಾ ವರಿಷ್ಠಾಧಿಕಾರಿ ಡಾ.ಜಿತೇಂದ್ರ ಕುಮಾರ್ ದಯಾಮ ಮೊದಲಾದವರಿದ್ದರು.