ಧಾರವಾಡ: ಸೇವಾ ನ್ಯೂನ್ಯತೆ ಎಸಗಿದ ಬೈಲಹೊಂಗಲದ ಕಿತ್ತೂರುರಾಣಿ ಚೆನ್ನಮ್ಮ ಕೋ-ಆಪರೇಟಿವ್ ಸೊಸೈಟಿಗೆ ಇಲ್ಲಿಯ ಗ್ರಾಹಕರ ಆಯೋಗವು ದಂಡ ವಿಧಿಸಿ ಮತ್ತು ಪರಿಹಾರಕ್ಕೆ ಆದೇಶ ಮಾಡಿದೆ.
ದೂರು ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರಾದ ಬೋಳಶೆಟ್ಟಿ, ದೂರುದಾರರು ಠೇವಣಿ ರೂಪದಲ್ಲಿ ಇಟ್ಟ ಹಣವನ್ನು ಸೊಸೈಟಿಯ ಅಭಿವೃದ್ಧಿಗಾಗಿ ಉಪಯೋಗಿಸಿಕೊಂಡಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಹಣದ ಅವಶ್ಯಕತೆ ಇದ್ದಾಗ, ಮರಳಿಸದೆ ಇರುವುದು ಗ್ರಾಹಕರ ರಕ್ಷಣಾ ಕಾಯ್ದೆಯಡಿ ಸೇವಾ ನ್ಯೂನ್ಯತೆ ಎಂದು ಆಯೋಗ ತೀರ್ಪು ನೀಡಿದೆ.
ಠೇವಣಿ ಇಟ್ಟ ದಿನಾಂಕಗಳಿಂದ ಬಡ್ಡಿಯೊಂದಿಗೆ ಲೆಕ್ಕ ಹಾಕಿ ದೂರುದಾರರಿಗೆ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಹಿಂದಿರುಗಿಸುವಂತೆ ಆಯೋಗ ಆದೇಶಿಸಿದೆ. ಜತೆಗೆ ಸೇವಾ ನ್ಯೂನ್ಯತೆಯಿಂದ ಅವರಿಗೆ ಆಗಿರುವ ಅನಾನುಕೂಲತೆ, ತೊಂದರೆ ಹಾಗೂ ಮಾನಸಿಕ ಹಿಂಸೆಗೆ ತಲಾ ₹50 ಸಾವಿರ ಪರಿಹಾರ ಹಾಗೂ ತಲಾ ₹10 ಸಾವಿರ ಪ್ರಕರಣದ ಖರ್ಚು, ವೆಚ್ಚ ನೀಡಲು ಸೊಸೈಟಿಗೆ ಆದೇಶಿಸಿದೆ.