ಕನ್ನಡಪ್ರಭ ವಾರ್ತೆ ಕುಶಾಲನಗರ
ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಬಿ.ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದ್ದು ಎಲ್ಲೆಂದರಲ್ಲಿ ಕಸ ತ್ಯಾಜ್ಯಗಳನ್ನು ಎಸೆಯುವವರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ಜೊತೆಗೆ ದಂಡ ವಿಧಿಸಲು ನಿರ್ಣಯ ಕೈಗೊಳ್ಳಲಾಯಿತು ಎಂದು ಹೇಳಿದ್ದಾರೆ.
ಪುರಸಭೆ ಮೂಲಕ ಮನೆ ಮನೆಗೆ ತೆರಳಿ ಕಸ ಸಂಗ್ರಹ ಮಾಡುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಆದರೂ ಕೆಲವು ವ್ಯಕ್ತಿಗಳು ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದು ಹಾಗೂ ಜಲಮೂಲಗಳನ್ನು ಕಲುಷಿತಗೊಳಿಸುತ್ತಿರುವುದು ಕಂಡು ಬಂದಿದ್ದು ಸ್ವಚ್ಛ ಪಟ್ಟಣ ಹಾಗೂ ಸ್ವಚ್ಛ ಕಾವೇರಿ ಗುರಿಯೊಂದಿಗೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದ ಅವರು, ಪಟ್ಟಣದ ಒಳಚರಂಡಿ ಯೋಜನೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಈಗಾಗಲೇ ಪಟ್ಟಣದ ಹಲವು ಕಡೆ ಕಲುಷಿತ ನೀರನ್ನು ಪಂಪ್ ಮೂಲಕ ಒಳಚರಂಡಿ ಯೋಜನೆಯ ತ್ಯಾಜ್ಯ ವಿಲೇವಾರಿ ಕೇಂದ್ರ ಘಟಕಕ್ಕೆ ಹಾಯಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.ಪಟ್ಟಣದಲ್ಲಿ ಚರಂಡಿಗಳಿಂದ ಸಂಗ್ರಹವಾದ ಕಲುಷಿತ ನೀರನ್ನು ಸ್ವಯಂ ಚಾಲಿತ ಪಂಪ್ ಮೂಲಕ ಒಳಚರಂಡಿ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಹಾಯಿಸಲಾಗುತ್ತಿದೆ. ಈ ಮೂಲಕ ನದಿಗೆ ಯಾವುದೇ ರೀತಿಯಲ್ಲಿ ಕಲುಷಿತ ನೀರು ಅಥವಾ ತ್ಯಾಜ್ಯ ಸೇರುವುದನ್ನು ತಪ್ಪಿಸಿದಂತಾಗಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಸಿ.ಸಿ.ಟಿವಿಯನ್ನು ಅಳವಡಿಸುವ ಬಗ್ಗೆ ಮತ್ತು ಪುರಸಭಾ ವ್ಯಾಪ್ತಿಯ ಕಸವಿಲೇವಾರಿ ಮಾಡುವ ವಾಹನಗಳ ನಿರ್ವಹಣೆ ಬಗ್ಗೆ ಹಾಗೂ ವಾಹನಗಳಿಗೆ ನೂತನ ಬಿಡಿಭಾಗಗಳನ್ನು ಖರೀಸುವ ಬಗ್ಗೆ ಮತ್ತು ಇನ್ನಿತರ ವಿಷಯದ ಬಗ್ಗೆ ಸ್ಥಾಯಿ ಸಮಿತಿ ಸಭೆಯಲ್ಲಿ ಚರ್ಚಿಸಲಾಯಿತು.ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂ ಬಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸ್ಥಾಯಿ ಸಮಿತಿ ಸದಸ್ಯರಾದ ಎಂ.ಕೆ.ದಿನೇಶ್. ಜಯವರ್ಧನ್. ಜಗದೀಶ್. ಸುರಯಬಾನು, ಜಯಲಕ್ಷಿ, ಜಗದೀಶ್, ಹಿರಿಯ ಆರೋಗ್ಯ ಅಧಿಕಾರಿ ಉದಯ್ ಕುಮಾರ್ ಮತ್ತಿತರರು ಇದ್ದರು.