ಹುಬ್ಬಳ್ಳಿ:
ನ. 19 ಮತ್ತು 20ರಂದು ಅವಳಿ ನಗರದ ಎಲ್ಲ ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ನಿಗದಿತ ಅವಧಿ ಹೊರತುಪಡಿಸಿ ನಗರದಲ್ಲಿ ಸಂಚರಿಸುತ್ತಿದ್ದ ಭಾರಿ ವಾಹನಗಳನ್ನು ತಡೆದು ಪರಿಶೀಲಿಸಿದ ಪೊಲೀಸರು, ಮೋಟಾರು ವಾಹನ ಕಾಯ್ದೆಯಡಿ ನಿಯಮ ಉಲ್ಲಂಘಿಸಿದ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು ಹಾಗೂ ಭಾರಿ ವಾಹನಗಳಿಂದ ಉಂಟಾಗುವ ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಈ ಕ್ರಮಕೈಗೊಳ್ಳಲಾಗಿದೆ. ವಿಶೇಷ ಕಾರ್ಯಾಚರಣೆ ಮುಂದುವರಿಯಲಿದ್ದು, ಭಾರಿ ವಾಹನಗಳ ಚಾಲಕರು ಮತ್ತು ಮಾಲೀಕರು ನಿಗದಿತ ಸಂಚಾರ ಅವಧಿ ಹಾಗೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಸಂಚಾರ ವಿಭಾಗ ಸೂಚಿಸಿದೆ.