ಇಲಾಖೆಯ ಕೆಲಸ ಕಾಲಮಿತಿಯೊಳಗೆ ಮುಗಿಸಿ: ಮೊಹಮ್ಮದ ಮೊಹಸಿನ್

KannadaprabhaNewsNetwork | Published : Jan 18, 2024 2:01 AM

ಸಾರಾಂಶ

ಬಾಗಲಕೋಟೆ: ವಿವಿಧ ಇಲಾಖೆಗಳಿಗೆ ಬಿಡುಗಡೆಯಾದ ಅನುದಾನ ಸಂಪೂರ್ಣವಾಗಿ ಭರಿಸುವ ಮೂಲಕ ಇಲಾಖೆಗೆ ಸಂಬಂಧಿಸಿದ ಯಾವುದೇ ಕೆಲಸ ಬಾಕಿ ಉಳಿಸದೇ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ ಮೊಹಸಿನ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತಿ ನೂತನ ಸಭಾಭವನದಲ್ಲಿ ಬುಧವಾರ ಜರುಗಿದ ಜಿಪಂ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಲಾಖೆಗೆ ಬರುವ ಪ್ರತಿಯೊಂದು ಅರ್ಜಿಗಳು ಸಕಾಲದಡಿ ಬರುವುದರಿಂದ ಪ್ರತಿಯೊಂದು ಕಡತಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿಯಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೆಳಹಂತದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಕೆಲಸ ಬಾಕಿ ಇದರಂತೆ ನೋಡಿಕೊಳ್ಳಲು ಸೂಚಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ವಿವಿಧ ಇಲಾಖೆಗಳಿಗೆ ಬಿಡುಗಡೆಯಾದ ಅನುದಾನ ಸಂಪೂರ್ಣವಾಗಿ ಭರಿಸುವ ಮೂಲಕ ಇಲಾಖೆಗೆ ಸಂಬಂಧಿಸಿದ ಯಾವುದೇ ಕೆಲಸ ಬಾಕಿ ಉಳಿಸದೇ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ ಮೊಹಸಿನ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತಿ ನೂತನ ಸಭಾಭವನದಲ್ಲಿ ಬುಧವಾರ ಜರುಗಿದ ಜಿಪಂ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಲಾಖೆಗೆ ಬರುವ ಪ್ರತಿಯೊಂದು ಅರ್ಜಿಗಳು ಸಕಾಲದಡಿ ಬರುವುದರಿಂದ ಪ್ರತಿಯೊಂದು ಕಡತಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿಯಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೆಳಹಂತದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಕೆಲಸ ಬಾಕಿ ಇದರಂತೆ ನೋಡಿಕೊಳ್ಳಲು ಸೂಚಿಸಿದರು.

ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಇತ್ಯರ್ಥವಾಗಬೇಕಾದ ಸಮಸ್ಯೆಗಳು ರಾಜ್ಯಮಟ್ಟದಲ್ಲಿ ಚರ್ಚೆಯಾಗುತ್ತಿವೆ. ಸಮಸ್ಯೆಗೆ ಪರಿಹಾರ ದೊರಕಿಸಿ ಕೊಡುವದಲ್ಲಿ ವಿಫಲರಾಗಿದ್ಧೀರಿ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಮುಂದೆ ಈ ರೀತಿಯಾಗದಂತೆ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ನಿಗದಿತ ಅವಧಿಯಲ್ಲಿ ಬಗೆಹರಿಸಲು ತಿಳಿಸಿದರು.

ಶಾಲಾ-ಕಾಲೇಜು ಆವರಣದ ಹತ್ತಿರದಲ್ಲಿಯೇ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿರುವುದಾಗಿ ಜಿಪಂ ಸಿಇಒ ಶಶೀಧರ ಕುರೇರ ತಿಳಿಸಿದಾಗ ಅಂತಹ ಅಂಗಡಿಗಳನ್ನು ತೆರವುಗೊಳಿಸಲು ಕ್ರಮವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು. ಗಂಗಾ ಕಲ್ಯಾಣ ಯೋಜನೆಯಡಿ ಕೊರೆದ ಬೋರವೆಲ್‌ಗಳಿಗೆ ವಿದ್ಯುದ್ದೀಕರಣಕ್ಕೆ ಕ್ರಮವಹಿಸಲು ತಿಳಿಸಿದರು.

ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಧಾನ್ಯಗಳ ಬಗ್ಗೆ ಪರಿಶೀಲಿಸಬೇಕು. ಕಳಪೆ ಸರಬರಾಜು ಆಗದಂತೆ ನೋಡಿಕೊಳ್ಳಬೇಕು. ಸ್ಯಾಂಪಲ್ ಪರೀಕ್ಷೆ ಮಾಡಿ, ಮಕ್ಕಳ ಹಾಜರಾತಿ ತಕ್ಕಂತೆ ಆಹಾರ ಪೂರೈಕೆಯಾದ ಬಗ್ಗೆ ಪರಿಶೀಲನೆ ನಡೆಸಿ, ಆಹಾರ ಬಗ್ಗೆ ಯಾವುದೇ ರೀತಿಯ ದೂರುಗಳು ಬರದ ಹಾಗೆ ನೋಡಿಕೊಳ್ಳಲು ತಿಳಿಸಿದರು. ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಗೆ ಕ್ರಮವಹಿಸಲು ತಿಳಿಸಿದರು. ವಿವಿಧ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾತನಾಡಿ, ಜಿಲ್ಲೆಯಲ್ಲಿ ಇಂಧನ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಸೋಲಾರ್ ಪವರ್ ಸ್ಟೇಷನ್ ಪ್ರಾರಂಭಿಸಲು ನಿವೇಶನ ಗುರುತಿಸುವ ಪ್ರಕ್ರಿಯೆ ನಡೆದಿದೆ. ಜನತಾ ದರ್ಶನ ಕಾರ್ಯಕ್ರಮದಲ್ಲಿ ಬಂದ ಅರ್ಜಿಗಳನ್ನು ಶೇ.80ರಷ್ಟು ವಿಲೇವಾರಿ ಮಾಡಲಾಗಿದೆ. ಶೇ.20ರಷ್ಟು ಬಾಕಿ ಉಳಿದಿದ್ದು, ತುರ್ತಾಗಿ ವಿಲೇ ಮಾಡಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು. ವಸತಿ ನಿಲಯಗಳಲ್ಲಿ ಮಕ್ಕಳಲ್ಲಿಯೇ ವೈಮನಸ್ಸು ಬಾರದ ರೀತಿಯಲ್ಲಿ ನಿಲಯ ಮೇಲ್ವಿಚಾರಕರು ಗಮನ ಹರಿಸಲು ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ತಿಳಿಸಿದರು.

ಸಭೆಯಲ್ಲಿ ಯುಕೆಪಿ ಮಹಾವ್ಯವಸ್ಥಾಪಕ ರಮೇಶ ಕಳಸದ, ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ, ಜಿಪಂ ಮುಖ್ಯ ಯೋಜನಾಧಿಕಾರಿ ಪುನೀತ್ ಯೋಜನಾಧಿಕಾರಿ ಎನ್.ವೈ. ಬಸರಿಗಿಡದ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

---

ಸ್ಕ್ಯಾನಿಂಗ್‌ ಸೆಂಟರ್ ಮೇಲೆ ದೂರು ದಾಖಲಿಸಿ

ಜಿಲ್ಲೆಯಲ್ಲಿ ಇರುವ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಭೇಟಿ ನೀಡಿದ ವರದಿ ಪರಿಶೀಲಿಸಿದ ಉಸ್ತುವಾರಿ ಕಾರ್ಯದರ್ಶಿಗಳು ಅನಧಿಕೃತ ಸೆಂಟರ್‌ಗಳಿಗೆ ಕೇವಲ ನೋಟಿಸ್ ನೀಡಿದರೆ ಸಾಲದು. ಪ್ರಕರಣ ಏಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದರು. ಜಿಲ್ಲೆಯಲ್ಲಿರುವ 182 ಸ್ಕ್ಯಾನಿಂಗ್ ಸೆಂಟರ್‌ಗಳ ಪೈಕಿ 149 ಸೆಂಟರ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿ 87 ಸೆಂಟರ್‌ಗಳಿಗೆ ನೋಟಿಸ್ ಮಾತ್ರ ಕೊಟ್ಟಿದ್ದು, ಯಾವುದೇ ಪ್ರಕರಣ ದಾಖಲು ಮಾಡಿಲ್ಲ. ಕೂಡಲೇ ಅಂತವರ ಮೇಲೆ ಪ್ರಕರಣದ ದಾಖಲಿಸಲು ಸೂಚಿಸಿದರು.

Share this article