ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಸೇರಿದ ಪಕ್ಷದ ಕಾರ್ಯಕರ್ತರು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಘೋಷಣೆ ಕೂಗಿದರು. ಸಂವಿಧಾನ ವಿರೋಧಿ ನಡೆಯನ್ನು ತೀವ್ರವಾಗಿ ಖಂಡಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಮಾತನಾಡಿ, ಉತ್ತರ ಖಂಡ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿ ಹೋದ ಬಳಿಕ ವೇದಿಕೆಯನ್ನು ಶುದ್ಧೀಕರಣಗೊಳಿಸಿರುವ ಬಿಜೆಪಿಯವರ ನಡೆ ಅಮಾನವೀಯ. ಸಂವಿಧಾನ ವಿರೋಧಿ. ಇಂತಹ ಆಚರಣೆಗಳನ್ನು ಬೆಂಬಲಿಸುವ ಬಿಜೆಪಿಯವರಿಂದ ದೇಶದ ಅಭಿವೃದ್ಧಿ ಅಸಾಧ್ಯ. ಖರ್ಗೆ ಅವರಿಗೆ ಆದ ಅವಮಾನವನ್ನು ಖಂಡಿಸಿ ಮಾತನಾಡಿದ ರಾಹುಲ್‌ಗಾಂಧಿ ವಿರುದ್ಧ ಸುಳ್ಳು ದೂರು ದಾಖಲಿಸಿಕೊಂಡು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಟೀಕಿಸಿದರು.ಬಿಜೆಪಿ ಸರ್ಕಾರ ಜನವಿರೋಧಿ ಸರ್ಕಾರ. ಇದನ್ನು ದೇಶದಿಂದ ತೊಲಗಿಸಬೇಕು. ಜಾತ್ಯತೀತ ತತ್ವಗಳನ್ನು ಮೈಗೂಡಿಸಿಕೊಂಡಿರುವ, ದೇಶದ ಬಗ್ಗೆ ಕಾಳಜಿ ಇರುವಂತಹ ರಾಹುಲ್‌ಗಾಂಧಿ ಅವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಿ ಸಂವಿಧಾನಕ್ಕೆ ಅನುಗುಣವಾಗಿ ದೇಶ ಮುನ್ನಡೆಸಲು ಅನುವು ಮಾಡಿಕೊಡಬೇಕು. ಎನ್‌ಡಿಎ ಸರ್ಕಾರದ ವಿರುದ್ಧ ನಿರಂತರವಾಗಿ ಪ್ರತಿಭಟನೆ ಮುಂದುವರೆಯಲಿದೆ. ತಕ್ಷಣವೇ ಸುಳ್ಳು ಕೇಸ್‌ಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಕೀಲಾರ ರಾಧಾಕೃಷ್ಣ, ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಮಹಿಳಾಧ್ಯಕ್ಷೆ ಶುಭದಾಯಿನಿ, ಚಂದಗಾಲು ವಿಜಯ್‌ಕುಮಾರ್, ಸಿ.ಎಂ.ದ್ಯಾವಪ್ಪ, ಶ್ರೀಧರ್, ಅಜ್ಜಹಳ್ಳಿ ರಾಮಕೃಷ್ಣ, ಚಿನಕುರಳಿ ರಮೇಶ್, ಸುಂಡಹಳ್ಳಿ ಮಂಜುನಾಥ, ಹನ್ಸಿಯಾಬಾನು, ಕಮಲಾರಾಜು, ವೀಣಾ, ಪದ್ಮ, ಯಶೋದಾ ಮೊದಲಾದವರಿದ್ದರು.