ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಗಳೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಉತ್ತರಾಖಂಡದ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಉತ್ತರಾಖಂಡದ ಹಲ್ದ್ವಾನ್ ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯನ್ನು ''''''''''''''''ಶುದ್ಧೀಕರಣ'''''''''''''''' ಮಾಡಿ ಅಪಮಾನವೆಸಗಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ವಿವಾದದ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದುರುದ್ದೇಶಪೂರಿತವಾಗಿ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿಯ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಾಲೂಕಿನ ಬಾಶೆಟ್ಟಿಹಳ್ಳಿಯ ಅಂಬೇಡ್ಕರ್ ಪ್ರತಿಮೆ ಮುಂಭಾಗ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಗಳೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಉತ್ತರಾಖಂಡದ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಟಿ.ವೆಂಕಟಮಣಯ್ಯ, ಬಿಜೆಪಿಯವರು ಬರೀ ಸುಳ್ಳುಗಳನ್ನೇ ಹೇಳುತ್ತಾ ಬರುತ್ತಿದ್ದಾರೆ. ಮೋದಿ ಸರ್ಕಾರದಲ್ಲಿ ಒಂದೇ ಒಮದ ಸಾರ್ವಜನಿಕ ಉದ್ದಿಮೆಯಾಗಲೀ ಗಮನಾರ್ಹವಾದ ಅಭಿವೃದ್ದಿಯಾಗಲೀ ಆಗಿಲ್ಲ. ಆದರೆ ಸತ್ಯ ಹೇಳಿದವರ ಮೇಲೆ ದೂರು ದಾಖಲು ಮಾಡುವುದು, ರಾಜಕೀಯ ದುರುದ್ದೇಶದಿಂದ ಇ.ಡಿ ದಾಳಿ ನಡೆಸುವುದು ಇಂತಹ ಕೃತ್ಯಗಳನ್ನು ಮಾತ್ರ ನಡೆಸುತ್ತಿದ್ದಾರೆ.ಖರ್ಗೆ ಅವರಿಗೆ ಅಪಮಾನಿಸಿದ ಕೃತ್ಯ ಎಸಗಿದವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಿದೆ ಎಂದರು.
ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಜಿ. ಲಕ್ಷ್ಮೀಪತಿ, ಹಾಲ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೆರವರು ಭಾಷಣ ಮಾಡಿದ ವೇದಿಕೆಯ ಶುದ್ದೀಕರಣ ಮಾಡಿರುವುದು ಕಾನೂನು ಬಾಹಿರ. ಇದು ಜಾತಿ ಆಧಾರಿತ ಅವಮಾನ ಮತ್ತು ಸಂವಿಧಾನ ಹಾಗೂ ದಲಿತ ನಾಯಕರಿಗೆ ಮಾಡಿದ ಅಪಮಾನವಷ್ಟೇ ಅಲ್ಲದೇ ಇದು ಜಾತಿ ಆಧಾರಿತ ಅವಮಾನ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ದಾಳಿಯಾಗಿದೆ. ಡಾ. ಮಲ್ಲಿಕಾರ್ಜುನ ಖರ್ಗೆರವರು ಭಾಷಣ ಮಾಡಿದ ವೇದಿಕೆಯನ್ನು ಅತ್ಯಂತ ಕೀಳುಮಟ್ಟದ ಮನುವಾದದ ಮನಸ್ಥಿತಿಯ ಶುದ್ದೀಕರಣ ಆಚರಣೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ದುರುದ್ದೇಶವಾಗಿ ದಾಖಲಿಸಿದ ದೂರು ಹಿಂಪಡೆಯಬೇಕು. ಇನ್ನು ಮುಂದೆ ಇಂತಹ ಘಟನೆಗಳಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ಡಾ.ಕೃಪಾ ಆಳ್ವ ಕಾಂಗ್ರೆಸ್ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಕಸಬಾ ಬ್ಲಾಕ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ನಗರಸಭಾ ಸದಸ್ಯರಾದ ಎಚ್.ಎಸ್.ಶಿವಶಂಕರ್, ಶಿವಣ್ಣ, ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ತಾಲೂಕು ಅಧ್ಯಕ್ಷ ವಿಶ್ವನಾಥ ರೆಡ್ಡಿ, ತಾಪಂ ಮಾಜಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ, ರವಿ ಹಸನ್ ಘಟ್ಟ, ಮುಖಂಡರಾದ ಬಿ.ಕೆ.ಮುನಿರಾಜು, ಬಿ. ಎಂ. ನರಸಿಂಹಮೂರ್ತಿ, ರಾಜೇಂದ್ರ, ಜವಾಜಿ ರಾಜೇಶ್, ಸಿದ್ದರಾಮಯ್ಯ ಮೊದಲಾದವರು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.