ಕನ್ನಡಪ್ರಭ ವಾರ್ತೆ ಚಿಕ್ಕೋಡಿ
ಹಾಲಸಿಧ್ಧನಾಥ ಸಕ್ಕರೆ ಕಾರ್ಖಾನೆಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ ಅವರು, ನೇಮಕಾತಿಯಲ್ಲಿ ತಮ್ಮ ಹೆಸರನ್ನು ದುರ್ಬಳಕೆ ಮಾಡಿಕೊಂಡು ಹಣದ ಬೇಡಿಕೆ ಇಟ್ಟಿದ್ದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ವೈರಲ್ ಆದ ಹಿನ್ನೆಲೆಯಲ್ಲಿ ಈ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಡಿಸಿಸಿ ಬ್ಯಾಂಕ್‌ನ ನೌಕರರ ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ನಿಯಮಾನುಸಾರ ಮತ್ತು ಪಾರದರ್ಶಕವಾಗಿ ನಡೆಯುತ್ತದೆ. ಅಧಿಕೃತವಾಗಿ ಅರ್ಜಿಗಳನ್ನು ಆಹ್ವಾನಿಸಿ, ಪರೀಕ್ಷೆ ಹಾಗೂ ಸಂದರ್ಶನಗಳ ಮೂಲಕವೇ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಮಹಾರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸುವ ಮಧ್ಯವರ್ತಿಗಳು ಹಾಗೂ ಏಜೆಂಟರು ಅಭ್ಯರ್ಥಿಗಳನ್ನು ವಂಚಿಸಿ ಹಣ ಪಡೆಯುವ ಜಾಲ ಹೊಂದಿದ್ದಾರೆ. ಆದ್ದರಿಂದ ಸಾರ್ವಜನಿಕರು ಹಾಗೂ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಇಂತಹ ಮಧ್ಯವರ್ತಿಗಳ ಮಾತುಗಳನ್ನು ನಂಬಿ ಹಣ ನೀಡಿ ಮೋಸ ಹೋಗಬಾರದು ಎಂದು ಅವರು ಮನವಿ ಮಾಡಿದ್ದಾರೆ.