ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ

KannadaprabhaNewsNetwork |  
Published : Apr 19, 2026, 03:15 AM IST
ಜಮಖಂಡಿ ನಗರದ ಶಾಂತಿನಗರ ಪ್ರದೇಶದ ಅರಣ್ಯದಲ್ಲಿ ಶುಕ್ರವಾರ ಮಧ್ಯಾಹ್ನ ಕಾಣಿಸಿ ಕೊಂಡ ಬೆಂಕಿ. ಸ್ಥಳಿಯರು ಆತಂಕ ವ್ಯಕ್ತ ಪಡಿಸಿದ್ದಾರೆ.  | Kannada Prabha

ಸಾರಾಂಶ

ಜಮಖಂಡಿ ನಗರದ ಶಾಂತಿನಗರ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 10 ಎಕರೆ ಬೆಟ್ಟದ ಪ್ರದೇಶದಲ್ಲಿ ಬೆಂಕಿ ಹರಡಿದೆ.

ಜಮಖಂಡಿ: ನಗರದ ಶಾಂತಿನಗರ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 10 ಎಕರೆ ಬೆಟ್ಟದ ಪ್ರದೇಶದಲ್ಲಿ ಬೆಂಕಿ ಹರಡಿದೆ. ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಅಗ್ನಿ ಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಇಷ್ಟಾದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಸಣ್ಣಪುಟ್ಟ ಮರಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳೀಯ ಪರಿಸರ ಪ್ರೇಮಿಗಳು, ಪ್ರಾಣಿ ಪ್ರೀಯರು ಆತಂಕ ವ್ಯಕ್ತಪಡಿಸಿದ್ದು, ಅಗ್ನಿ ಅವಘಡಗಳು ಸಂಭವಿಸಿದಾಗ ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕ್ರಮಕ್ಕೆ ಮುಂದಾಗ ಬೇಕು ಎಂದು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಕ್ಕೇರಿ ಚಂದ್ರಶೇಖರ ಶ್ರೀಗೆ ಜೀವಮಾನ ಸಾಧನೆ ಪ್ರಶಸ್ತಿ
ಹಲ್ಮಿಡಿ ಶಾಸನದ ಪ್ರತಿಕೃತಿ ಮರುಸ್ಥಾಪನೆ ಮುಖಂಡರ ಸಲಹೆ