ಟೈರ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ

KannadaprabhaNewsNetwork |  
Published : Feb 03, 2025, 12:33 AM IST
2ಕೆಆರ್ ಎಂಎನ್ 5.ಜೆಪಿಜಿಕೈಗಾರಿಕಾ ಪ್ರದೇಶದಲ್ಲಿ ಟೈಯರ್ ಕಾರ್ಖಾನೆಯಲ್ಲಿ ಬೆಂಕಿ ಉರಿಯುತ್ತಿರುವುದು. | Kannada Prabha

ಸಾರಾಂಶ

ಹಾರೋಹಳ್ಳಿ: ಕೈಗಾರಿಕಾ ಪ್ರದೇಶದಲ್ಲಿ ಟೈರ್ ಕಾರ್ಖಾನೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು ಕಾರ್ಖಾನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಭಾನುವಾರ ನಡೆದಿದೆ.

ಹಾರೋಹಳ್ಳಿ: ಕೈಗಾರಿಕಾ ಪ್ರದೇಶದಲ್ಲಿ ಟೈರ್ ಕಾರ್ಖಾನೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು ಕಾರ್ಖಾನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಭಾನುವಾರ ನಡೆದಿದೆ.

ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಜುಪಿಟರ್ ಟೈಯರ್ ಕಾರ್ಖಾನೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ನೋಡು ನೋಡುತ್ತಿದ್ದಂತೆ ಬೆಂಕಿ ಕೆನ್ನಾಲಿಗೆ ಕಾರ್ಖಾನೆ ತುಂಬೆಲ್ಲ ಆವರಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಖಾನೆಯಲ್ಲಿದ್ದ ಕಾರ್ಮಿಕರು ಕಾರ್ಖಾನೆಯಿಂದ ಹೊರಬಂದು ಅಪಾಯದಿಂದ ಪಾರಾಗಿದ್ದಾರೆ.

ಟೈಯರ್ ಕಾರ್ಖಾನೆ ಅಗ್ನಿ ಅವಘಡ ದಿಂದ ಕಾರ್ಖಾನೆ ಧಗಧಗನೆ ಹೊತ್ತಿ ಉರಿದಿದ್ದು ಹಾರೋಹಳ್ಳಿ ಕೈಗಾರಿಕಾ ಪ್ರದೇಶ ದಟ್ಟ ಹೊಗೆಯಿಂದ ಆವರಿಸಿ ಆತಂಕ ಸೃಷ್ಟಿಯಾಗಿತ್ತು. ಎರಡು ಅಗ್ನಿಶಾಮಕ ದಳದ ತಂಡ ಬೆಂಕಿ ನಂದಿಸಲು ಹರಸಾಹಸ ಪಟ್ಟರು ನಿಯಂತ್ರಣಕ್ಕೆ ಬರದೆ ಕಾರ್ಖಾನೆಯಲ್ಲಿದ್ದ ವಸ್ತುಗಳು ಬೆಂಕಿಯ ಕೆನ್ನಾಲಗಿಗೆ ಸುಟ್ಟು ಭಸ್ಮವಾಗಿದೆ. ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ಮಾತ್ರ ತಿಳಿದುಬಂದಿಲ್ಲ.

ನಾಲ್ಕು ವರ್ಷಗಳ ಹಿಂದೆಯೂ ಘಟನೆ ಸಂಭವಿಸಿತ್ತು :

ಕಳೆದ ಹತ್ತು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಈ ಕಾರ್ಖಾನೆಯಲ್ಲಿ ಈ ರೀತಿಯ ಅಗ್ನಿ ಅವಘಡ ಇದೆ ಮೊದಲೇನಲ್ಲ ಆಗಾಗ ಈ ರೀತಿಯ ಅಗ್ನಿ ಅವಘಡ ಸಂಭವಿಸುತ್ತಿದೆ. ಕಳೆದ ನಾಲ್ಕು ವರ್ಷಗಳ ಹಿಂದೆ ಇದೇ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಕೆಲವು ಕಾರ್ಮಿಕರ ಪ್ರಾಣವನ್ನು ಬಲಿ ತೆಗೆದುಕೊಂಡಿದೆ ಹಿಂದೆ ಅಗ್ನಿ ಅವಘಡ ಸಂಭವಿಸಿದಾಗ ಕೆಲ ದಿನಗಳ ಕಾಲ ಕಾರ್ಖಾನೆ ಸ್ಥಗಿತಗೊಳಿಸಿ ಮತ್ತೆ ಪ್ರಾರಂಭ ಮಾಡಿದ್ದಾರೆ ಅಂದಿನಿಂದ ಇಂದಿನವರೆಗೂ ಸ್ಥಳೀಯರಿಗೆ ಕಾರ್ಖಾನೆ ನರಕ ಸದೃಶವಾಗಿ ಪರಿಣಮಿಸಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿ ಬಂದಿದೆ.

ಸುರಕ್ಷತೆ ಭದ್ರತೆ ಇಲ್ಲ:

ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಜುಪಿಟರ್ ಟೈಯರ್ ಕಾರ್ಖಾನೆಯಲ್ಲಿ ಯಾವುದೇ ಸುರಕ್ಷತೆ ಮತ್ತು ಭದ್ರತೆ ಇಲ್ಲದೆ ಇರುವುದರಿಂದ ಆಗಾಗ ಬೆಂಕಿ ಅವಘಡ ಸಂಭವಿಸುತ್ತದೆ ಎಂಬ ಆರೋಪ ಸ್ಥಳೀಯ ಕೇಳಿಬಂದಿದೆ ಹೊರ ರಾಜ್ಯದ ಕಾರ್ಮಿಕರೇ ಕೆಲಸ ಮಾಡುವ ಈ ಕಾರ್ಖಾನೆಯಲ್ಲಿ ಕಾರ್ಮಿಕರಿಗೂ ಯಾವುದೇ ಸುರಕ್ಷತೆ ಮತ್ತು ಭದ್ರತೆ ಇಲ್ಲ ಈ ಕಾರ್ಖಾನೆ ಪಕ್ಕದಲ್ಲಿ ಟ್ರಾನ್ಸ್‌ಪಾರ್ಮರ್ ಅಳವಡಿಸಿದ್ದು ಚಿಕ್ಕದಾದ ಜಾಗದಲ್ಲಿ ಟೈಯರ್ ಕಾರ್ಖಾನೆ ನಡೆಯುತ್ತಿದೆ ಈ ಕಾರ್ಖಾನೆಯಲ್ಲಿ ಆಗಾಗ ಸಂಭವಿಸುತ್ತಿರುವುದರಿಂದ ಅಕ್ಕಪಕ್ಕದಲ್ಲಿರುವ ಕಾರ್ಖಾನೆಗಳಿಗೂ ಸುರಕ್ಷತೆ ಇಲ್ಲದಂತಾಗಿದೆ ಎಂಬುದು ಸ್ಥಳೀಯರ ಆರೋಪ.

-----------------------------

2ಕೆಆರ್ ಎಂಎನ್ 5.ಜೆಪಿಜಿ

ಕೈಗಾರಿಕಾ ಪ್ರದೇಶದಲ್ಲಿ ಟೈಯರ್ ಕಾರ್ಖಾನೆಯಲ್ಲಿ ಬೆಂಕಿ ಉರಿಯುತ್ತಿರುವುದು.

-----------------------------

PREV

Recommended Stories

ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಟಾಕ್ಸಿಕ್‌ ಮುಂಬೈ ಶೂಟ್‌ ಮುಗಿಸಿ ಲಂಡನ್‌ಗೆ ಹಾರಿದ ಯಶ್‌