ನರ್ಸರಿ ಫಿಲ್ಟರ್ ಹೌಸ್ ಹತ್ತಿರ ಬೆಂಕಿ ಅವಘಡ

KannadaprabhaNewsNetwork |  
Published : Feb 21, 2026, 01:45 AM IST
20ಎಚ್ಎಸ್ಎನ್5 :  | Kannada Prabha

ಸಾರಾಂಶ

ಫಿಲ್ಟರ್ ಹೌಸ್ ಹಿಂಭಾಗದ ಒಣಗಿದ ಹುಲ್ಲು ಮತ್ತು ಪ್ಲಾಸ್ಟಿಕ್ ಕವರ್‌ಗಳಿಗೆ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ಜ್ವಾಲೆಗಳು ಏರಿಕೊಂಡವು. ಗಾಳಿ ವೇಗವಾಗಿದ್ದರಿಂದ ಬೆಂಕಿ ನರ್ಸರಿ ಭಾಗಕ್ಕೆ ವೇಗವಾಗಿ ವ್ಯಾಪಿಸಿದೆ. ಹೊಗೆ ದಟ್ಟವಾಗಿ ಆವರಿಸಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ನೀರಿನ ಟ್ಯಾಂಕರ್‌ಗಳನ್ನು ಬಳಸಲಾಯಿತು.

ಕನ್ನಡಪ್ರಭ ವಾರ್ತೆ ಬೇಲೂರು

ಪಟ್ಟಣದ ನರ್ಸರಿ ಪ್ರದೇಶದಲ್ಲಿರುವ ಫಿಲ್ಟರ್‌ ಹೌಸ್ ಹತ್ತಿರ ಶುಕ್ರವಾರ ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ವ್ಯಾಪಕ ಹಾನಿ ಉಂಟಾಗಿದೆ. ಬೆಂಕಿ ತೀವ್ರವಾಗಿ ಹಬ್ಬಿದ ಪರಿಣಾಮ ನರ್ಸರಿಯಲ್ಲಿ ಬೆಳೆಸಲಾಗಿದ್ದ ಅನೇಕ ಅಲಂಕಾರಿಕ ಹಾಗೂ ಹಣ್ಣು ಗಿಡಗಳು ಸಂಪೂರ್ಣವಾಗಿ ನಾಶವಾಗಿವೆ ಎಂದು ತಿಳಿದುಬಂದಿದೆ.

ಸ್ಥಳೀಯರ ಪ್ರಕಾರ, ಮಧ್ಯಾಹ್ನ ಹೊತ್ತಿನಲ್ಲಿ ಫಿಲ್ಟರ್ ಹೌಸ್ ಹಿಂಭಾಗದ ಒಣಗಿದ ಹುಲ್ಲು ಮತ್ತು ಪ್ಲಾಸ್ಟಿಕ್ ಕವರ್‌ಗಳಿಗೆ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ಜ್ವಾಲೆಗಳು ಏರಿಕೊಂಡವು. ಗಾಳಿ ವೇಗವಾಗಿದ್ದರಿಂದ ಬೆಂಕಿ ನರ್ಸರಿ ಭಾಗಕ್ಕೆ ವೇಗವಾಗಿ ವ್ಯಾಪಿಸಿದೆ. ಹೊಗೆ ದಟ್ಟವಾಗಿ ಆವರಿಸಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ನೀರಿನ ಟ್ಯಾಂಕರ್‌ಗಳನ್ನು ಬಳಸಲಾಯಿತು.

ಪ್ರಾಥಮಿಕ ಅಂದಾಜು ಪ್ರಕಾರ ಲಕ್ಷಾಂತರ ರುಪಾಯಿ ಮೌಲ್ಯದ ಗಿಡಗಳು ಹಾನಿಗೊಳಗಾಗಿರುವ ಸಾಧ್ಯತೆ ಇದೆ. ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ ಅಥವಾ ನಿರ್ಲಕ್ಷ್ಯದಿಂದ ಬೆಂಕಿ ಉಂಟಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿರಂತರ ಚಿರತೆ ಹಾವಳಿ: ರೈತರಲ್ಲಿ ತಪ್ಪದ ಭೀತಿ
ಸಾಮಾಜಿಕ ನ್ಯಾಯದ ಪ್ರತಿಪಾದಕ ಕವಿ ಸರ್ವಜ್ಞ: ಸಿ.ಎಸ್.ಚಂದ್ರಭೂಪಾಲ