ಅಗ್ನಿ ಅವಘಡ: ಮೃತ ಕಾರ್ಮಿಕನ ಮನೆಗೆ ಶೆಟ್ಟರ್‌ ಭೇಟಿ

KannadaprabhaNewsNetwork |  
Published : Aug 14, 2024, 12:52 AM IST
ನಾವಗೆ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟ ಕಾರ್ಮಿಕನ ಮನೆಗೆ ಸಂಸದ ಜಗದೀಶ ಶೆಟ್ಟರ್‌ ಭೇಟಿ ನೀಡಿ ಪರಿಶೀಲಿಸಿದರು | Kannada Prabha

ಸಾರಾಂಶ

ನಾವಗೆ ಕೈಗಾರಿಕೆ ಪ್ರದೇಶದಲ್ಲಿನ ಖಾಸಗಿ ಕಾರ್ಖಾನೆಯಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿ ದುರಂತ ಸ್ಥಳಕ್ಕೆ ಮಂಗಳವಾರ ಸಂಸದ ಜಗದೀಶ ಶೆಟ್ಟರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ನಾವಗೆ ಕೈಗಾರಿಕೆ ಪ್ರದೇಶದಲ್ಲಿನ ಖಾಸಗಿ ಕಾರ್ಖಾನೆಯಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿ ದುರಂತ ಸ್ಥಳಕ್ಕೆ ಮಂಗಳವಾರ ಸಂಸದ ಜಗದೀಶ ಶೆಟ್ಟರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಖಾನೆ ಮಾಲೀಕರು ಹಾಗೂ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು, ಇಂತಹ ಅವಘಡಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ಅನುಸರಿಸುವಂತೆ ಮತ್ತು ಕಾರ್ಮಿಕರ ಹಿತಾಸಕ್ತಿ ಕಾಪಾಡುವಂತೆ ಸೂಚನೆ ನೀಡಿದರು.

ಕಾರ್ಖಾನೆಯ ಬೆಂಕಿ ಅವಘಡದದಲ್ಲಿ ಮೃತಪಟ್ಟಿದ್ದ ಮಾರ್ಕಂಡೇಯ ನಗರದ ಯುವಕ ಯಲ್ಲಪ್ಪ ಗುಂಡ್ಯಾಗೋಳ ಮನೆಗೆ ಭೇಟಿ ನೀಡಿ, ಅವರ ತಂದೆ ತಾಯಿ‌ ಮತ್ತು ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.

ಎಲ್ಲ ಕಾರ್ಖಾನೆಗಳು ಮುನ್ನೆಚ್ಚರಿಕೆ ಕ್ರಮ ಅನುಸರಿಸುವುದು ತುಂಬ ಮುಖ್ಯ. ಕಾರ್ಮಿಕರ ಪ್ರಾಣಹಾನಿಯಾಗದಂತೆ ಸೂಕ್ತ ಕ್ರಮ ಕಾರ್ಖಾನೆಗಳು ಕಡ್ಡಾಯವಾಗಿ ಅನುಸರಿಸಬೇಕು. ಮಾಲೀಕರು ಕಾರ್ಮಿಕರ ಯೋಗಕ್ಷೇಮದ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜಯ ಪಾಟೀಲ, ಮುಖಂಡರಾದ ಧನಂಜಯ ಜಾಧವ, ಚೇತನ ಅಂಗಡಿ, ಹೇಮಂತ ಪಾಟೀಲ, ನಾಗೇಂದ್ರ ದೇಸಾಯಿ, ಸಂತೋಷ ದೇಸಾಯಿ, ಗ್ರಾಮ ಪಂಚಾಯತಿ ಸದಸ್ಯರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೊಸ ತೊಡಕು ಹಿನ್ನೆಲೆಯಲ್ಲಿ ಮುಂಜಾನೆಯೇ ಮಾಂಸದಂಗಡಿ ಮುಂದೆ ಜನರ ಸರದಿ ಸಾಲು
ಬೆಂಗಳೂರು ನಗರದಲ್ಲಿ ರಂಜಾನ್‌ ಆಚರಣೆ ಭರದ ಸಿದ್ಧತೆ