ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿಬೆಂಕಿ ಬಿದ್ದು ದಟ್ಟಹೊಗೆ: ಜನಾತಂಕ

KannadaprabhaNewsNetwork |  
Published : Jun 22, 2026, 04:00 AM IST
Metro 2 | Kannada Prabha

ಸಾರಾಂಶ

ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಕನ್ನಡಪ್ರಭ ವಾರ್ತೆ ಬೆಂಗಳೂರು

ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಮಾದಾವರ-ರೇಷ್ಮೆ ಸಂಸ್ಥೆ ಮಾರ್ಗದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಭಾನುವಾರ ಮಧ್ಯಾಹ್ನ 1.40ರ ಸುಮಾರಿಗೆ ತುರ್ತು ನಿರ್ಗಮನ ಬಳಿಯ ಸೂಚನಾ ಫಲಕದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿ ದಟ್ಟವಾದ ಹೊಗೆ ಆವರಿಸಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಮೆಟ್ರೋ ಸಿಬ್ಬಂದಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿ ಬಂದ ಸಿಬ್ಬಂದಿ ಸುಮಾರು ಒಂದೂವರೆ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಸಮಸ್ಯೆ ಉಂಟಾಗಿಲ್ಲ. ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಈ ಸಂಬಂಧ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ಸಂಚಾರದಲ್ಲಿ ಯಾವುದೇ ವ್ಯತ್ಯಯವಿಲ್ಲ:

ಈ ಕುರಿತು ಬಿಎಂಆರ್‌ಸಿಎಲ್‌ ಪ್ರಕಟಣೆ ಹೊರಡಿಸಿದ್ದು, ಬೆಂಕಿ ಅವಘಡದಿಂದಾಗಿ ಮೆಟ್ರೋ ರೈಲು ಸಂಚಾರ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಎಲ್ಲಾ ಮೆಟ್ರೋ ಸೇವೆಗಳು ಎಂದಿನಂತೆ ಸುಗಮವಾಗಿ ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಯಶಸ್ವಿಯಾಗಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

17 ದಿನದಲ್ಲಿ 600 ಟನ್‌ ಮಾವು ಮಾರಾಟ
ಇಂದು ಅನಕೃ, ಪುನೀತ್‌ ಸಭಾಂಗಣ ಲೋಕಾರ್ಪಣೆ