ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ: ಸುಟ್ಟುಕರಕಲಾದ ಬಟ್ಟೆಗಳು

KannadaprabhaNewsNetwork |  
Published : Aug 24, 2026, 01:45 AM IST
ಪೋಟೋ: 23ಎಸ್‌ಎಂಜಿಕೆಪಿ08ಶಿರಾಳಕೊಪ್ಪ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ರೇಂಜ್‌ 1 ಬಟ್ಟೆ ಅಂಗಡಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಟ್ಟು ಕರಕಲಾಗಿರುವ ಬಟ್ಟೆಗಳು. | Kannada Prabha

ಸಾರಾಂಶ

ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ರೇಂಜ್‌ 1 ಬಟ್ಟೆ ಅಂಗಡಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಅಂಗಡಿ ಸಂಪೂರ್ಣವಾಗಿ ಸುಟ್ಟುಹೋಗಿದ್ದು, 2 ಕೋಟಿ ರು.ಗೂ ಅಧಿಕ ಪ್ರಮಾಣದ ಬಟ್ಟೆ ಹಾಗೂ ಇತರ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಕನ್ನಡಪ್ರಭ ವಾರ್ತೆ ಶಿರಾಳಕೊಪ್ಪ

ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ರೇಂಜ್‌ 1 ಬಟ್ಟೆ ಅಂಗಡಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಅಂಗಡಿ ಸಂಪೂರ್ಣವಾಗಿ ಸುಟ್ಟುಹೋಗಿದ್ದು, 2 ಕೋಟಿ ರು.ಗೂ ಅಧಿಕ ಪ್ರಮಾಣದ ಬಟ್ಟೆ ಹಾಗೂ ಇತರ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಭಾನುವಾರ ಮುಂಜಾನೆ ಅಂಗಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.

ಅಂಗಡಿಯೊಳಗೆ ಹೆಚ್ಚಿನ ಪ್ರಮಾಣದಲ್ಲಿ ಬಟ್ಟೆ ಹಾಗೂ ಸುಲಭವಾಗಿ ಹೊತ್ತಿಕೊಳ್ಳುವ ವಸ್ತುಗಳಿದ್ದ ಹಿನ್ನೆಲೆಯಲ್ಲಿ ಬೆಂಕಿ ವೇಗವಾಗಿ ವ್ಯಾಪಿಸಿದ್ದು, ಅಂಗಡಿಯ ಬಹುತೇಕ ಭಾಗ ಹಾಗೂ ಒಳಗಿದ್ದ ಸರಕುಗಳು ಸುಟ್ಟುಹೋಗಿವೆ.

ರೇಂಜ್‌ 1 ಅಂಗಡಿ ಸಾಗರ ಮೂಲದ ಫಯಾಜ್ ಎಂಬುವವರಿಗೆ ಸೇರಿದ್ದು, ಮುಂಬರುವ ಈದ್‌ ಮಿಲಾದ್‌ ಹಬ್ಬದ ವ್ಯಾಪಾರಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ ಹೊಸ ಬಟ್ಟೆಗಳನ್ನು ಸಂಗ್ರಹಿಸಲಾಗಿತ್ತು ಎನ್ನಲಾಗಿದೆ. ಈ ಸರಕುಗಳೆಲ್ಲ ಬೆಂಕಿಗೆ ಆಹುತಿಯಾಗಿರುವುದರಿಂದ ಉದ್ಯಮಿಗೆ ಭಾರಿ ನಷ್ಟ ಸಂಭವಿಸಿದೆ.

ಪ್ರಾಥಮಿಕ ಅಂದಾಜಿನಂತೆ 2 ಕೋಟಿ ರು.ಗೂ ಅಧಿಕ ನಷ್ಟವಾಗಿರಬಹುದು ಎಂದು ತಿಳಿದುಬಂದಿದೆ. ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಳ್ಳಲು ಶಾರ್ಟ್‌ ಸರ್ಕ್ಯೂಟ್‌ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಬೆಂಕಿ ಅಕ್ಕಪಕ್ಕದ ಅಂಗಡಿಗಳು ಹಾಗೂ ಕಟ್ಟಡಗಳಿಗೆ ವ್ಯಾಪಿಸುವುದನ್ನು ತಡೆಯಲಾಗಿದ್ದು, ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಘಟನೆಯಿಂದ ಸ್ಥಳೀಯ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಲ್ಲಿ ಆತಂಕ ಉಂಟಾಯಿತು. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೇಮಾವತಿ ಜಲಾಶಯದಿಂದ ಕೆರೆಕಟ್ಟೆಗಳಿಗೆ ನೀರು: ಶಾಸಕ ಎಚ್.ಟಿ.ಮಂಜು ಪರಿಶೀಲನೆ
ಎಚ್ಡಿಕೆಯಿಂದ ಶ್ರೀಅಭಯ ಆಂಜನೇಯಸ್ವಾಮಿ ದೇಗುಲ ಲೋಕಾರ್ಪಣೆ