ಬ್ಯಾಡಗಿ:ಪಟ್ಟಣದ ಗುಮ್ಮನಹಳ್ಳಿ ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್‌ನಲ್ಲಿ ಸೋಮವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು, ಬ್ಯಾಂಕ್‌ನ ಎರಡು ಕ್ಯಾಬಿನ್‌ಗಳು ಬೆಂಕಿಗೆ ಆಹುತಿಯಾಗಿವೆ.
ಅಗ್ನಿಶಾಮಕ ದಳ ಸಿಬ್ಬಂದಿ ಸಾಹಸ:ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಬ್ಯಾಂಕ್‌ನಲ್ಲಿದ್ದ ನಗದು ಹಣ ಹಾಗೂ ಚಿನ್ನಾಭರಣಕ್ಕೆ ಯಾವುದೇ ಹಾನಿಯಾಗಿಲ್ಲ ಬ್ಯಾಂಕ್ ಮೂಲಗಳು ತಿಳಿಸಿವೆ.
ಆತಂಕದ ವಾತಾವರಣ:ಬೆಳಗಿನ ಜಾವ ಸಂಭವಿಸಿದ ಈ ಅಗ್ನಿ ಅವಘಡದಿಂದ ಪಟ್ಟಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಸಂಭವಿಸಿದೆಯೇ ಎಂಬ ಬಗ್ಗೆ ಹೆಚ್ಚಿನ ಪರಿಶೀಲನೆಯ ಬಳಿಕ ನಿಖರ ಮಾಹಿತಿ ಲಭ್ಯವಾಗಬೇಕಿದೆ.ಶಾಸಕ ಬಸವರಾಜ ಶಿವಣ್ಣವನರ ಹಾಗೂ ಎಸ್‌ಪಿ ಭೇಟಿ:ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಾಸಕ ಬಸವರಾಜ ಶಿವಣ್ಣವನರ ಹಾ ಗೂ ಎಸ್‌ಪಿ ಯಶೋಧಾ ವಂಟಗೋಡಿ, ಅಡಿಷನಲ್ ಎಸ್‌ಪಿ ಲಕ್ಷ್ಮಣ ಶಿರಕೋಳ, ಸಿಪಿಐ ಎಂ.ಬಿ. ಚಿಕ್ಕಣ್ಣನವರ, ಪಿಎಸ್‌ಐ ಭಾ ರತಿ ಕುರಿ ಸೇರಿದಂತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಶಾಸಕ ಶಿವಣ್ಣನವರ ಅಗ್ನಿ ಅವಘಡದ ಬಗ್ಗೆ ಬ್ಯಾಂಕ್ ಮ್ಯಾ ನೇಜರ ಜೊತೆ ಕೆಲ ಕಾಲ ಮಾತು ನಡೆಸಿ ಮಾಹಿತಿ ಪಡೆದುಕೊಂಡರು.