ಗುರುನಾನಕ್‌ ಶಾಲೆಯಲ್ಲಿ ಅಗ್ನಿ ಸುರಕ್ಷತೆ ಅರಿವು

KannadaprabhaNewsNetwork |  
Published : Oct 07, 2026, 01:45 AM IST
ಚಿತ್ರ 6ಬಿಡಿಆರ್55 | Kannada Prabha

ಸಾರಾಂಶ

ನಗರದ ಗುರು ನಾನಕ್‌ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಗಾಗಿ ಅಗ್ನಿ ಸುರಕ್ಷತೆ ಮತ್ತು ತುರ್ತು ಸೇವೆಗಳ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕನ್ನಡಪ್ರಭ ವಾರ್ತೆ ಬೀದರ್

ನಗರದ ಗುರು ನಾನಕ್‌ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಗಾಗಿ ಅಗ್ನಿ ಸುರಕ್ಷತೆ ಮತ್ತು ತುರ್ತು ಸೇವೆಗಳ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಅವಘಡಗಳು ಸಂಭವಿಸಿದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನಚ್ಚರಿಕೆ ಕ್ರಮಗಳು, ಅಗ್ನಿ ಅವಘಡಗಳನ್ನು ತಡೆಗಟ್ಟುವ ವಿಧಾನಗಳು ಹಾಗೂ ತುರ್ತು ಸಂದರ್ಭದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗೆ ಮಾಹಿತಿ ನೀಡಿದರು.

ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ತುರ್ತು ಸೇವೆಗಳನ್ನು ಸಂಪರ್ಕಿಸುವ ವಿಧಾನ, ಸುರಕ್ಷಿತವಾಗಿ ಸ್ಥಳಾಂತರಗೊಳ್ಳುವ ಕ್ರಮಗಳು ಮತ್ತು ಅಗ್ನಿಶಾಮಕ ಉಪಕರಣಗಳ ಬಳಕೆ ಕುರಿತು ಪ್ರಾತ್ಯಕ್ಷಿಕೆಯ ಮೂಲಕ ಅರಿವು ಮೂಡಿಸಲಾಯಿತು.

ವಿವಿಧ ರೀತಿಯ ಬೆಂಕಿ ಅವಘಡಗಳಿಗೆ ಅನುಗುಣವಾಗಿ ಅಗ್ನಿಶಾಮಕ ಉಪಕರಣಗಳನ್ನು ಹೇಗೆ ಬಳಸಬೇಕು, ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಗ್ಯಾಸ್ ಸಿಲಿಂಡರ್ ಹಾಗೂ ಇತರ ಕಾರಣಗಳಿಂದ ಬೆಂಕಿ ಕಾಣಿಸಿಕೊಂಡಾಗ ಯಾವ ರೀತಿಯ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ವಿವರಿಸಿದರು.

ಅಗ್ನಿ ಶಾಮಕ ಅಧಿಕಾರಿ ಪ್ರವೀಣ ಮಾತನಾಡಿ, ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ಗಾಬರಿಯಾಗಬಾರದು, ಶಾಂತವಾಗಿ ವರ್ತಿಸುವುದು, ಲಿಫ್ಟ್ ಬಳಸದೆ ಸುರಕ್ಷಿತ ಮಾರ್ಗದ ಮೂಲಕ ಹೊರಬರುವುದು, ಶಾಲೆಯ ತುರ್ತು ನಿರ್ಗಮನ ದ್ವಾರಗಳನ್ನು ಬಳಸುವುದು ಹಾಗೂ ಇತರರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂಬುದು ಸೇರಿದಂತೆ ಹಲವು ಪ್ರಮುಖ ಸುರಕ್ಷತಾ ಕ್ರಮಗಳ ಕುರಿತು ಮಕ್ಕಳಿಗೆ ಅರಿವು ಮೂಡಿಸಿದರು.

ಶಾಲೆಯಲ್ಲಿ ತುರ್ತು ಪರಿಸ್ಥಿತಿ ಎದುರಾದಾಗ ಶಿಕ್ಷಕರು ಮತ್ತು ಸಿಬ್ಬಂದಿಯವರ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕರೆ ಕೊಟ್ಟರು.

ಶಾಲೆಯ ಪ್ರಾಂಶುಪಾಲೆ ನಲಿನಿ ಡಿ.ಜಿ. ಮಾತನಾಡಿ, ಆವರಣದಲ್ಲಿ ಅಗ್ನಿ ಸುರಕ್ಷತಾ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವುದು ವಿದ್ಯಾರ್ಥಿಗಳಲ್ಲಿ ಸುರಕ್ಷತಾ ಅರಿವು ಬಳಸುವುದರ ಜೊತೆಗೆ, ತುರ್ತು ಸಂದರ್ಭಗಳಲ್ಲಿ ಸೂಕ್ತವಾಗಿ ಮತ್ತು ಸಮಯೋಚಿತವಾಗಿ ಪ್ರತಿಕ್ರಿಯಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಗ್ನಿ ಶಾಮಕದಳದ ಅಧಿಕಾರಿ ಪ್ರವೀಣ, ಚಾಂದಮಿಯ್ಯಾ, ಇಬ್ರಾಹಿಂ, ಮುಕಿಮ್, ವಿಜಯಕುಮಾರ, ಶಾಲೆಯ ಪ್ರಾಂಶುಪಾಲರಾದ ನಲಿನಿ ಡಿ.ಜಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜಯಪುರ ಶಾಸಕ ಯತ್ನಾಳ್ ವಿರುದ್ಧ ದಾವಣಗೆರೆ ಕಾಂಗ್ರೆಸ್ ದೂರು
ಶಿಥಿಲ, ಹಳೇ ಪಶು ವೈದ್ಯಕೀಯ ಆಸ್ಪತ್ರೆಗಳ ಪಟ್ಟಿ ನೀಡಿ: ಶಾಂತನಗೌಡ