ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಅಗ್ನಿಶಾಮಕ ಸೇವೆಗಳ ಪ್ರದರ್ಶನ, ಜಾಗೃತಿ ಕಾರ್ಯಕ್ರಮ

KannadaprabhaNewsNetwork |  
Published : Dec 26, 2025, 01:45 AM IST
25 HRR. 02 &01 Aಹರಿಹರ: ತಾಲೂಕಿನ ಕೊಂಡಜ್ಜಿ ಗ್ರಾಮದಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಕುರಿತು ಪ್ರತ್ಯಕ್ಷ (ಡೆಮೋನ್ಸ್ಟ್ರೇಷನ್) ಕಾರ್ಯಾಗಾರವನ್ನು  ಆಯೋಜಿಸಲಾಯಿತು. | Kannada Prabha

ಸಾರಾಂಶ

ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಕುರಿತು ಪ್ರತ್ಯಕ್ಷ ಕಾರ್ಯಾಗಾರ ನಡೆಯಿತು. ವಿದ್ಯಾರ್ಥಿಗಳಿಗೆ ಅಗ್ನಿ ಅವಘಡಗಳು ಹಾಗೂ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಜನಜಾಗೃತಿ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

- ಕೊಂಡಜ್ಜಿ ಗ್ರಾಮದಲ್ಲಿ ವಿದ್ಯಾರ್ಥಿಗಳಿಗೆ ಜೀವ ರಕ್ಷಣೆ ಪಾಠ

- - -

ಹರಿಹರ: ತಾಲೂಕಿನ ಕೊಂಡಜ್ಜಿ ಗ್ರಾಮದ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಕುರಿತು ಪ್ರತ್ಯಕ್ಷ ಕಾರ್ಯಾಗಾರ ನಡೆಯಿತು. ವಿದ್ಯಾರ್ಥಿಗಳಿಗೆ ಅಗ್ನಿ ಅವಘಡಗಳು ಹಾಗೂ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಜನಜಾಗೃತಿ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಸಮಾರಂಭದಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಜಿಲ್ಲಾ ಅಧಿಕಾರಿ ಮಹಾಲಿಂಗಪ್ಪ ಎಸ್. ಲಂಗೋಟಿ ಪಾಲ್ಗೊಂಡು ತಮ್ಮ ಅನುಭವ ಮತ್ತು ಜ್ಞಾನವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಅಗ್ನಿ ಅವಘಡಗಳ ಸಂಭವದ ಕಾರಣಗಳು, ಅವುಗಳನ್ನು ತಪ್ಪಿಸುವ ಮಾರ್ಗಗಳು ಹಾಗೂ ತುರ್ತು ಸಂದರ್ಭಗಳಲ್ಲಿ ಶಾಂತವಾಗಿ ನಡೆದುಕೊಳ್ಳುವ ವಿಧಾನಗಳನ್ನು ವಿವರಿಸಿದರು.

ಡೆಮೊನ್ಸ್ಟ್ರೇಷನ್‌ ಭಾಗವಾಗಿ ಅಗ್ನಿ ನಂದಿಸುವ ಉಪಕರಣಗಳ ಬಳಕೆ, ಅಗ್ನಿಶಾಮಕ ವಾಹನಗಳ ಕಾರ್ಯವಿಧಾನ, ಬೆಂಕಿ ಆವರಿಸಿದ ಸಂದರ್ಭದಲ್ಲಿ ಜನರನ್ನು ರಕ್ಷಿಸುವ ಕ್ರಮಗಳು ಹಾಗೂ ಪ್ರಥಮ ಚಿಕಿತ್ಸೆ ನೀಡುವ ವಿಧಾನಗಳನ್ನು ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿಯಿಂದ ಕಾರ್ಯಕ್ರಮವನ್ನು ವೀಕ್ಷಿಸಿ, ಪ್ರಶ್ನೆಗಳನ್ನು ಕೇಳುವ ಮೂಲಕ ಮಾಹಿತಿ ಪಡೆದುಕೊಂಡರು.

ಕಾರ್ಯಕ್ರಮದಿಂದ ವಿದ್ಯಾರ್ಥಿಗಳಿಗೆ ಜೀವ ರಕ್ಷಣೆ, ಸುರಕ್ಷತಾ ಜಾಗೃತಿ ಹಾಗೂ ತುರ್ತು ಸಂದರ್ಭಗಳಲ್ಲಿ ಧೈರ್ಯದಿಂದ ನಿರ್ಧಾರ ಕೈಗೊಳ್ಳುವ ಮಹತ್ವದ ಅರಿವು ಮೂಡಿತು. ಅಂತಿಮವಾಗಿ ಶಾಲೆ ವತಿಯಿಂದ ಅಗ್ನಿಶಾಮಕ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಲಾಯಿತು.

ಈ ಸಂದರ್ಭ ಅಗ್ನಿಶಾಮಕ ಇಲಾಖೆ ಠಾಣಾಧಿಕಾರಿ ಪಕೀರಪ್ಪ ಉಪ್ಪಾರ, ಮುನಿಸ್ವಾಮಿ, ಸತೀಶ್, ನಾಗರಾಜ್ ಹಾಗೂ ಶಾಲೆಯ ಬೋಧಕ- ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

- - -

-25HRR02 &01A:

ಕೊಂಡಜ್ಜಿ ಗ್ರಾಮದ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಕುರಿತು ಪ್ರತ್ಯಕ್ಷ ಕಾರ್ಯಾಗಾರ ಮೂಲಕ ಜನಜಾಗೃತಿ ಮೂಡಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುರ್ಚಿ ಸರ್ಕಸ್‌ ಮಧ್ಯೆ ಇಂದು ಸಿದ್ದು ದೆಹಲಿಗೆ - ನಾಳೆ ಸಿಡಬ್ಲುಸಿ ಸಭೆಯಲ್ಲಿ ಸಿಎಂ ಭಾಗಿ
ಭೂಪರಿವರ್ತನೆ ಇನ್ನು ಅತಿ ಸರಳ