ಲಾರಿ ಚಾಲಕನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

KannadaprabhaNewsNetwork |  
Published : Jan 26, 2026, 04:15 AM IST
ಲಾರಿ ಚಾಲಕನ ರಕ್ಷಣೆ ಮಾರುತ್ತಿರುವ ಅಗ್ನಿಶಾಮಕ ಸಿಬ್ಬಂದಿ. | Kannada Prabha

ಸಾರಾಂಶ

ಟ್ರ್ಯಾಕ್ಟರ್ ಮತ್ತು ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಿಂದ ಸಂಭವಿಸಿದ ಅಪಘಾತದಲ್ಲಿ ಅಗ್ನಿಶಾಮಕ ಸಿಬ್ಬಂದಿ ಸಕಾಲಕ್ಕೆ ಆಗಮಿಸಿ ಸಿಲುಕಿಕೊಂಡಿದ್ದ ಲಾರಿ ಚಾಲಕನನ್ನು ಸುರಕ್ಷಿತವಾಗಿ ಹೊರತೆಗೆದ ಘಟನೆ ತಾಲೂಕಿನ ಅನಗವಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೆಟ್ರೋಲ್ ಬಂಕ್ ಹತ್ತಿರ ಭಾನುವಾರ ಸಂಭವಿಸಿದೆ.

ಕನ್ನಡಪ್ರಭ ವಾರ್ತೆ ಬೀಳಗಿ

ಅಪಘಾತದಲ್ಲಿ ಲಾರಿ ರಸ್ತೆ ಬದಿಗೆ ಹೊರಳಿದ್ದು, ಚಾಲಕ ಸಿಲುಕಿಕೊಂಡು ಹೊರಬರಲಾಗದೇ ಆತಂಕಕ್ಕೆ ಒಳಗಾಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ಠಾಣೆಗೆ ಕರೆ ಮಾಡಿದ್ದು, ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಲಾರಿಯಲ್ಲಿ ಸಿಲುಕಿ ಹಾಕಿಕೊಂಡ ವ್ಯಕ್ತಿಯನ್ನು ಸುರಕ್ಷಿತವಾಗಿ ಹೊರಗಡೆ ತೆಗೆದರು. ಪ್ರತ್ಯಕ್ಷ ದರ್ಶಿಗಳು ಬೀಳಗಿ ಅಗ್ನಿಶಾಮಕ ಠಾಣೆ ಸಿಬ್ಬಂದಿಯ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಾಚರಣೆಯಲ್ಲಿ ಬೀಳಗಿಯ ಅಗ್ನಿಶಾಮಕ ಇಲಾಖೆ ಅಧಿಕಾರಿ ಆನಂದ ಚಿನಗುಂಡಿ ಮತ್ತು ಸಿಬ್ಬಂದಿ ರಂಗಪ್ಪ ನಕ್ಕರಗುಂದಿ, ಫಾರೂಕ ಹುಡೇದ, ಆನಂದ ಗುಂಜಿ , ಶಿವಗೆನಪ್ಪ ಕುಂಬಾರ, ಅಷ್ಪಕ್ ಮುಲ್ಲಾ, ಶ್ರೀಶೈಲ್ ಬಿದರಿ, ಸಂಗಪ್ಪ ಕಟಗೇರಿ, ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತ್ತೂರು ಬಸಿಲಿಕಾದಲ್ಲಿ ಸಂತ ಲಾರೆನ್ಸ್ ವಾರ್ಷಿಕ ಮಹೋತ್ಸವ ಆರಂಭ
ಯುವಜನತೆಗೆ ಧಾರ್ಮಿಕ ಶಿಕ್ಷಣದ ಅಗತ್ಯವಿದೆ - ಕೇಮಾರು ಶ್ರೀ