ಪೋಷಕರಿಗೆ ಬೆಂಕಿರಹಿತ ಅಡುಗೆ ತಯಾರಿಸುವ ಸ್ಪರ್ಧೆ

KannadaprabhaNewsNetwork |  
Published : Feb 12, 2026, 02:00 AM IST
11ಎಚ್ಎಸ್ಎನ್16 :  | Kannada Prabha

ಸಾರಾಂಶ

ಮೂಕೀಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಪೋಷಣ್‌ ಮಾಸಾಚಾರಣೆಯ ಪ್ರಯುಕ್ತ ಶಾಲೆಯಲ್ಲಿ ಪೋಷಕರಿಗೆ ಏರ್ಪಡಿಸಿದ್ದ ಬೆಂಕಿ ರಹಿತ ಅಡುಗೆ ತಯಾರಿಸುವ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿ, ಇದರಿಂದ ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಸದೃಡವಾಗಲು ಸಹಕಾರಿಯಾಗಲಿದೆ ಎಂದರು. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಿ ಗುಣಮಟ್ಟದ ಶಿಕ್ಷಣ ಕಲ್ಪಿಸುವಲ್ಲಿ ಮುಂದಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣದ ಜೊತೆಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣಸರ್ಕಾರವು ಪಿಎಂ ಪೋಷಣ್ ಅಭಿಯಾನದಡಿ ಸರ್ಕಾರಿ ಶಾಲಾ ಮಕ್ಕಳಿಗೆ ಪೂರಕವಾದ ಪೌಷ್ಟಿಕ ಆಹಾರ, ಹಾಲು, ಬಿಸಿಯೂಟ, ರಾಗಿ ಮಾಲ್ಟ್ ನೀಡಲಾಗುತ್ತಿದೆ ಎಂದು ಪಿಎಂ ಪೋಷಣ್ ಅಭಿಯಾನದ ಸಹಾಯಕ ನಿರ್ದೇಶಕ ಉಮಾಶಂಕರ್ ಹೇಳಿದರು.ತಾಲೂಕಿನ ಮೂಕೀಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಪೋಷಣ್‌ ಮಾಸಾಚಾರಣೆಯ ಪ್ರಯುಕ್ತ ಶಾಲೆಯಲ್ಲಿ ಪೋಷಕರಿಗೆ ಏರ್ಪಡಿಸಿದ್ದ ಬೆಂಕಿ ರಹಿತ ಅಡುಗೆ ತಯಾರಿಸುವ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿ, ಇದರಿಂದ ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಸದೃಡವಾಗಲು ಸಹಕಾರಿಯಾಗಲಿದೆ ಎಂದರು. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಿ ಗುಣಮಟ್ಟದ ಶಿಕ್ಷಣ ಕಲ್ಪಿಸುವಲ್ಲಿ ಮುಂದಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣದ ಜೊತೆಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಶಿಕ್ಷಣ ಸಂಯೋಜಕ ಶ್ರೀನಿವಾಸ್ ಮಾತನಾಡಿ, ಸರ್ಕಾರಿ ಶಾಲೆಗಳ ಬಲವರ್ಧನೆಗೆ ಇಲಾಖೆ ಕೈಗೊಂಡಿರುವ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಆಯೋಜಿಸಿದ್ದ ಬೆಂಕಿ ರಹಿತ ಅಡುಗೆ ತಯಾರಿಸುವ ಸ್ಪರ್ಧೆಯಲ್ಲಿ ಮಾನಸ ಪ್ರಥಮ ಸ್ಥಾನ, ಮಣಿ ದ್ವಿತೀಯ ಸ್ಥಾನ ಹಾಗೂ ವೀಣಾ ತೃತೀಯ ಸ್ಥಾನಕ್ಕೆ ಬಾಜನರಾಗಿದ್ದು ಬಹುಮಾನ ಪಡೆದರು.

ದಿಡಗ ಸರ್ಕಾರಿ ಆರೋಗ್ಯ ಕೇಂದ್ರದ ಹಿರಿಯ ಸುರಕ್ಷಿಣಾ ಅಧಿಕಾರಿ ಸರೋಜಮ್ಮ, ಕಿರಿಯ ಸುರಕ್ಷಣಾ ಅಧಿಕಾರಿ ಪುಷ್ಫಲತಾ, ಎಸ್ಡಿಎಂಸಿ ಅಧ್ಯಕ್ಷ ಮಣಿ, ಉಪಾಧ್ಯಕ್ಷ ಮೋಹನ್ ಕುಮಾರ್‌, ಶಾಲೆಯ ಮುಖ್ಯಶಿಕ್ಷಕ ಶ್ರೀಕಾಂತ್, ಸಹ ಶಿಕ್ಷಕರಾದ ಕೆಂಪೇಗೌಡ, ಸೌಮ್ಯ, ರಮ್ಯ, ಪೋ?ಕರು, ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೀದಿನಾಯಿಗಳ ಕೊರಳಲ್ಲಿ ದೇವರಾಜೇಗೌಡ ಫೋಟೋ
ಸರ್ಕಾರಿ ಶಾಲೆಗಳು ಅಭಿವೃದ್ಧಿಯಾದರೆ ಗ್ರಾಮ ಅಭಿವೃದ್ಧಿ