ಶಾಲೆಗಳಲ್ಲಿ ಪ್ರಥಮ ಚಿಕಿತ್ಸೆ ತರಬೇತಿ ಕಡ್ಡಾಯಗೊಳಿಸಬೇಕು: ಬಸ್ರೂರು ರಾಜೀವ ಶೆಟ್ಟಿ

KannadaprabhaNewsNetwork |  
Published : Dec 06, 2025, 03:00 AM IST
05ಬಸ್ರೂರು | Kannada Prabha

ಸಾರಾಂಶ

ಜಿಲ್ಲಾ ರೆಡ್ ಕ್ರಾಸ್ ಸಭಾಂಗಣದಲ್ಲಿ ರೆಡ್ ಕ್ರಾಸ್ ಅಧಿಕಾರಿಗಳು ಮತ್ತು ಸ್ವಯಂಸೇವಕರಿಗೆ ಒಂದು ದಿನದ ತರಬೇತಿ ಶಿಬಿರ ನೆರವೇರಿತು.

ಉಡುಪಿ: ಪ್ರಥಮ ಚಿಕಿತ್ಸೆ ಮತ್ತು ಪ್ರಕೃತಿ ವಿಕೋಪದ ಕುರಿತಾದ ತರಬೇತಿಯ ಮೂಲಕ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸಮಾಜಮುಖಿಯಾಗಲು ಉತ್ತಮ ಅವಕಾಶ. ಪ್ರಥಮ ಚಿಕಿತ್ಸೆಯ ತರಬೇತಿಯನ್ನು ಶೈಕ್ಷಣಿಕ ಸಂಸ್ಥೆಗಳಲ್ಲಿ ಸರ್ಕಾರ ಕಡ್ಡಾಯಗೊಳಿಸಬೇಕು ಎಂದು ಭಾರತೀಯ ರೆಡ್ ಕ್ರಾಸ್ ರಾಜ್ಯ ಸಭಾಪತಿ ಬಸರೂರು ರಾಜೀವ ಶೆಟ್ಟಿ ಹೇಳಿದ್ದಾರೆ.

ಭಾರತೀಯ ರೆಡ್ ಕ್ರಾಸ್ ರಾಜ್ಯ ಘಟಕ ಮತ್ತು ಉಡುಪಿ ಜಿಲ್ಲಾ ಘಟಕ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಯುವ ರೆಡ್ ಕ್ರಾಸ್ ಘಟಕ ವತಿಯಿಂದ ಜಿಲ್ಲಾ ರೆಡ್ ಕ್ರಾಸ್ ಸಭಾಂಗಣದಲ್ಲಿ ನಡೆದ ರೆಡ್ ಕ್ರಾಸ್ ಅಧಿಕಾರಿಗಳು ಮತ್ತು ಸ್ವಯಂಸೇವಕರಿಗೆ ನಡೆದ ಒಂದು ದಿನದ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ಕುಂದಾಪುರ ರೆಡ್ ಕ್ರಾಸ್ ಸಭಾಪತಿ ಜಯಕರ ಎಸ್. ಶೆಟ್ಟಿ ಮಾತಾನಾಡಿ, ಉಡುಪಿ ಜಿಲ್ಲೆಯು ರಕ್ತದಾನಿಗಳ ಜಿಲ್ಲೆ ಎಂದು ಗುರುತಿಸಲ್ಪಟ್ಟಿದೆ. ಈ ಪರಂಪರೆಯನ್ನು ರಕ್ತದಾನ ಮಾಡುವ ಮೂಲಕ ಮುಂದುವರೆಸುವ ಅಗತ್ಯವಿದೆ ಎಂದರು.

ಮಂಗಳೂರು ವಿಶ್ವವಿದ್ಯಾನಿಲಯ ಯುವ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ಎನ್ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಯುವ ರೆಡ್ ಕ್ರಾಸ್ ಅನುಷ್ಠಾನದ ಬಗ್ಗೆ ಮಾತಾನಾಡಿದರು.

ಸ್ವಯಂಸೇವಕಿಯರ ರೆಡ್ ಕ್ರಾಸ್ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಕಾರ್ಯಕ್ರಮದ ಉದ್ದೇಶ ವಿವರಿಸಿ ಸ್ವಾಗತಿಸಿದರು. ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ರೆಡ್ ಕ್ರಾಸ್ ಆಡಳಿತ ಮಂಡಳಿಯ ಸದಸ್ಯ ಟಿ. ಚಂದ್ರಶೇಖರ್ ಮುಖ್ಯ ಅತಿಥಿಯಾಗಿದ್ದರು. ಡಾ. ಕೀರ್ತಿ, ಅಶ್ವಿನ್ ಕುಮಾರ್, ಡಾ. ಸುರೇಶ್ ಶೆಣೈ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ರೆಡ್ ಕ್ರಾಸ್ ಖಜಾಂಚಿ ರಮಾದೇವಿ ವಂದಿಸಿದರು. ರೆಡ್ ಕ್ರಾಸ್ ಸದಸ್ಯರಾದ ರಾಘವೇಂದ್ರ ಪ್ರಭು ನಿರೂಪಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಉಡುಪಿ ಜಿಲ್ಲಾ ವ್ಯಾಪ್ತಿಯ ರೆಡ್ ಕ್ರಾಸ್ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲೆಗಳಿಗೆ ಸಕಾರಾತ್ಮಕತೆ ಹೆಚ್ಚಿಸುವ ಶಕ್ತಿ ಇದೆ: ಡಾ.ಪಿ.ವಿ.ಭಂಡಾರಿ
ಬೆಳೆ ಕಟಾವಿಗೆ ಯಂತ್ರದ ಮೊರೆ ಹೋದ ಅನ್ನದಾತ