ಗಂಗಾವತಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಡಿ. 25ಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಂಜನಾದ್ರಿಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.ಕಲ್ಯಾಣ ರಾಜ್ಯ ಪ್ರಗತಿಪಕ್ಷದ ಸಂಸ್ಥಾಪಕ ಅಧ್ಯಕ್ಷ ಹಾಗೂ ಗಂಗಾವತಿ ಶಾಸಕ ಜಿ. ಜನಾರ್ದನ ರೆಡ್ಡಿ ನೇತೃತ್ವದ ಕೆಆರ್‌ಪಿ ಪಕ್ಷ ಸ್ಥಾಪನೆಗೊಂಡ ಹಿನ್ನೆಲೆಯಲ್ಲಿ ರೆಡ್ಡಿ ಅವರ ಆಶಯದಂತೆ ವಾರ್ಷಿಕೋತ್ಸವ ಆಚರಿಸಿದರು. ಅಂಜನಾದ್ರಿಯಲ್ಲಿ ಆಂಜನೇಯನ ಪಾದುಕೆಗಳಿಗೆ ಪೂಜೆ ನೆರವೇರಿಸಿ, ಕೇಕ್ ಕತ್ತರಿಸಿದರು. ಈ ಸಂದರ್ಭದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು.
ಕೆಆರ್‌ಪಿಪಿ ಸಂಸ್ಥಾಪನಾ ದಿನಾಚರಣೆ: ಕುಷ್ಟಗಿ ತಾಲೂಕಿನ ಮೆಣೆದಾಳ ಆಂಜನೇಯ ದೇವಸ್ಥಾನದ ಹತ್ತಿರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ್ರಥಮ ವರ್ಷದ ಸಂಸ್ಥಾಪನ ದಿನದ ಅಂಗವಾಗಿ ಸಸಿ ನೆಡಲಾಯಿತು.ಯುವ ಮುಖಂಡ ಚಂದ್ರಶೇಖರ ರೆಡ್ಡಿ ಮಾತನಾಡಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷವು ಶಾಸಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಕನಸಿನ ಕೂಸು. ಸಸಿ ಬೆಳೆಯುವ ರೀತಿಯಲ್ಲಿ ಪಕ್ಷವು ಇನ್ನೂ ಎತ್ತರಕ್ಕೆ ಬೆಳೆಯಲಿ. ಜನಾರ್ದನ ರೆಡ್ಡಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವಂತಾಗಬೇಕು ಎಂದರು.
ಪಕ್ಷದ ಯುವ ಕಾರ್ಯಕರ್ತರಾದ ಪುಟ್ಟರಾಜ, ಸಂತೋಷ್, ಶ್ಯಾಮೂರ್ತಿ, ವೀರೇಶ್, ವಿಠೋಬಾ, ಚಿದಾನಂದ ಉಪಸ್ಥಿತರಿದ್ದರು.