ಮಾ. 1ರಂದು ಪ್ರಥಮ ಮರಾಠಿ ಹೋಳಿ ಸಂಭ್ರಮ

KannadaprabhaNewsNetwork |  
Published : Feb 27, 2026, 02:45 AM IST
ಪ್ರಥಮ ಮರಾಠಿ ಹೋಳಿ ಸಂಭ್ರಮದ ಬಗ್ಗೆ ಉಮೇಶ್ ನಾಯ್ಕ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು   | Kannada Prabha

ಸಾರಾಂಶ

ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘ ಇದರ ನೇತೃತ್ವದಲ್ಲಿ ಮರಾಠಿ ಹೋಳಿ ಸಂಭ್ರಮ - 2026 ಕಾರ್ಯಕ್ರಮವನ್ನು ಮಾ. 1ರಂದು ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮದ ಮುಂಡ್ಮಿನಜೆಡ್ಡು ಆರ್. ಕೆ. ಪಾಟ್ಕರ್ ಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಉಡುಪಿ ಜಿಲ್ಲಾ ಸಂಚಾಲಕ ಉಮೇಶ್ ಎ. ನಾಯ್ಕ್ ಚೇರ್ಕಾಡಿ ತಿಳಿಸಿದ್ದಾರೆ.

ಉಡುಪಿ: ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘ ಇದರ ನೇತೃತ್ವದಲ್ಲಿ ಮರಾಠಿ ಹೋಳಿ ಸಂಭ್ರಮ - 2026 ಕಾರ್ಯಕ್ರಮವನ್ನು ಮಾ. 1ರಂದು ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮದ ಮುಂಡ್ಮಿನಜೆಡ್ಡು ಆರ್. ಕೆ. ಪಾಟ್ಕರ್ ಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಉಡುಪಿ ಜಿಲ್ಲಾ ಸಂಚಾಲಕ ಉಮೇಶ್ ಎ. ನಾಯ್ಕ್ ಚೇರ್ಕಾಡಿ ತಿಳಿಸಿದ್ದಾರೆ.ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಉಡುಪಿ ಜಿಲ್ಲೆಯಲ್ಲಿರುವ ಮರಾಠಿ ಸಮುದಾಯದ ಸುಮಾರು 136 ಹತ್ತರಕಟ್ಟೆ (ಹತ್ತು ಸಮಸ್ತರ ಕಟ್ಟೆ)ಗಳ 3 ಸಾವಿರಕ್ಕೂ ಅಧಿಕ ಮರಾಠಿ ಜನರು ಈ ಹೋಳಿ ಸಂಭ್ರಮದಲ್ಲಿ ಭಾಗಿಯಾಗಲಿದ್ದಾರೆ. ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನದ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಈ 136 ಹತ್ತರಕಟ್ಟೆಗಳ ಸದಸ್ಯರು ತಂತಮ್ಮ ಗ್ರಾಮಗಳ ವ್ಯಾಪ್ತಿಯಲ್ಲಿ ಹೋಳಿ ಕುಣಿತ ಸಂಭ್ರಮ ನಡೆಸುವುದು ವಾಡಿಕೆ. ಆದರೆ ಈ ಬಾರಿ ಮೊದಲ ಬಾರಿಗೆ ಎಲ್ಲರೂ ಒಗ್ಗಟ್ಟಾಗಿ ಈ ಹೋಳಿ ಸಂಭ್ರಮಾಚರಣೆಯಲ್ಲಿ ಭಾಗಿಯಾಗುತ್ತಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘ ಅಧ್ಯಕ್ಷ ಕೆ. ಟಿ. ನಾಯ್ಕ ಚಾಂತಾರು, ಪ್ರಮುಖರಾದ ವೆಂಕಟೇಶ್ ನಾಯ್, ನಾರಾಯಣ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಳೆ ಶಿವಾಜಿ ಜಯಂತ್ಯುತ್ಸವ ಪ್ರಯುಕ್ತ ಬೃಹತ್ ಮೆರವಣಿಗೆ
ಫೆ. 28ಕ್ಕೆಶೈಕ್ಷಣಿಕ ಸಮ್ಮೇಳನ: ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ