ಕನ್ನಡಪ್ರಭ ವಾರ್ತೆ ಯಾದಗಿರಿ
ಸಮೀಪದ ಗುರುಮಠಕಲ್ ಮತಕ್ಷೇತ್ರದ ಯರಗೋಳ ಗ್ರಾಮದಲ್ಲಿ ಶುಕ್ರವಾರ ಜಿಲ್ಲಾಡಳಿತ ಹಾಗೂ ಜಿಪಂ, 2021-22ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದ ಅಡಿಯಲ್ಲಿ ₹95 ಲಕ್ಷ ಅನುದಾನದ ನೂತನ 7 ಶಾಲಾ ಕೋಣೆಗಳು, ಶಿಕ್ಷಣ ಇಲಾಖೆ ಯೋಜನೆ ಅಡಿಯಲ್ಲಿ ₹1ಕೋಣೆ, 45ಲಕ್ಷಗಳ ಅನುದಾನದ ನೂತನ ಪಶು ಆಸ್ಪತ್ರೆಯ ಕಟ್ಟಡದ ಉದ್ಘಾಟನೆ, ಅಲ್ಪಸಂಖ್ಯಾತ ಇಲಾಖೆ ಅಡಿಯಲ್ಲಿ₹10 ಲಕ್ಷ ರಸ್ತೆಗೆ ಅಡಿಗಲ್ಲು ಸಮಾರಂಭ ಉದ್ಘಾಟಿಸಿ, ಗುರುಮಠಕಲ್ ಜನತೆ ನನಗೆ ಹೆಚ್ಚಿನ ಮತ ನೀಡುವ ಮೂಲಕ ಆಶೀರ್ವಾದ ಮಾಡಿದ್ದು, ಅಭಿವೃದ್ಧಿ ಮಾಡುವ ಮೂಲಕ ಋಣ ತೀರಿಸುವೆ ಎಂದು ಎಂದರು.
ಗುರುಮಠಕಲ್ ಮತ ಕ್ಷೇತ್ರದಲ್ಲಿ ಶಿಕ್ಷಕರ ಕೊರತೆ ಇರುವುದು ನಿಜ. ಈ ಬಾರಿ ಎಸ್ಎಸ್ಎಲ್‌ಸಿ ಫಲಿತಾಂಶ ಕಡಿಮೆಯಾಗಿದ್ದು ನೋವಿನ ಸಂಗತಿ. ಶಿಕ್ಷಣಾಧಿಕಾರಿಗಳು ಶಿಕ್ಷಕರಿಗೆ ತರಕಾರಿ ಕತ್ತರಿಸುವ ಕೆಲಸದ ಬದಲು ಬೋಧನೆಗೆ ಹಚ್ಚಿದಾಗ ಫಲಿತಾಂಶ ಸುಧಾರಣೆ ಆಗುತ್ತದೆ ಎಂದರು.ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ, ಶುದ್ಧ ಕುಡಿವ ನೀರಿನ ಘಟಕ, ಕಂಪ್ಯೂಟರ್, ವಿಜ್ಞಾನ ಪ್ರಯೋಗಾಲಯ, ಕ್ರೀಡೆ ಸೇರಿದಂತೆ ಇನ್ನಿತರ ಚಟುವಟಿಕೆಗಳಿಗೆ ಬೇಕಾದ ಸಾಮಗ್ರಿಗಳು ಶೀಘ್ರದಲ್ಲಿ ಒದಗಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ಈ ವೇಳೆ ಗ್ರಾಮದ ರಾಮಲಿಂಗೇಶ್ವರ ಬೆಟ್ಟಕ್ಕೆ ರಸ್ತೆ ನಿರ್ಮಿಸುವಂತೆ ಶ್ರೀರಾಮಲಿಂಗೇಶ್ವರ ಸೇವಾ ಸಮಿತಿಯ ಸದಸ್ಯರು ಶಾಸಕರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು, ಆದಷ್ಟು ಶೀಘ್ರದಲ್ಲಿ ಅಧಿಕಾರಿಗಳನ್ನು ಕಳುಹಿಸಿ, ವರದಿ ಪಡೆದುಕೊಳ್ಳಲಾಗುವುದು ಎಂದರು.
ಯಾದಗಿರಿ: ಸಮೀಪದ ಲಿಂಗೇರಿ ಗ್ರಾಮದಲ್ಲಿ ವಿದ್ಯುತ್ ತಗುಲಿ ಮೃತಪಟ್ಟಿದ್ದ ಹಸುವಿನ ಮಾಲೀಕರಾದ ಲಿಂಗಪ್ಪ ಅವರ ಕುಟುಂಬಕ್ಕೆಶಾಸಕ ಶರಣಗೌಡ ಕಂದಕೂರು ತಮ್ಮ ಜನಸಂಪರ್ಕ ಕಚೇರಿಯಲ್ಲಿ 50 ಸಾವಿರ ರು. ಚೆಕ್ ವಿತರಿಸಿದರು. ಅಧಿಕಾರಿಗಳಾದ ಜೆಸ್ಕಾಂ ಶಾಖಾಧಿಕಾರಿ ಮೋಸಿನ್, ಮುಖಂಡರಾದ ಬಂದಪ್ಪಗೌಡ ಲಿಂಗೇರಿ, ಸೋಮಣಗೌಡ ಬೆಳಿಗೇರಾ, ಆಶಪ್ಪ ಬೆಳಗೇರಾ, ಶಾಂತು ಸಾಹುಕಾರ ಕೋಟಗೇರಾ, ಬಾಲರೆಡ್ಡಿ ಕುಂಟಿಮರಿ ಇತರರಿದ್ದರು.