ಪ್ರಥಮ ಪಿಯು ತರಗತಿ ಪ್ರವೇಶಕ್ಕೆ ಆಹ್ವಾನ

KannadaprabhaNewsNetwork |  
Published : May 20, 2024, 01:32 AM IST
ಪ್ರವೇಶಕ್ಕೆ | Kannada Prabha

ಸಾರಾಂಶ

ಕೊಡ್ಲಿಪೇಟೆ ಡಾ. ಎ.ಪಿ.ಜೆ. ಅಬ್ದುಲ್‌ ಕಲಾಂ ವಸತಿ ಕಾಲೇಜಿನ ಪ್ರಥಮ ಪಿಯುಸಿ ತರಗತಿಗೆ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನ.

ಮಡಿಕೇರಿ: ಪ್ರಸಕ್ತ (2024-25) ಸಾಲಿಗೆ ಸೋಮವಾರಪೇಟೆ ತಾಲೂಕು ಕೊಡ್ಲಿಪೇಟೆ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಕಾಲೇಜಿನ ಪ್ರಥಮ ಪಿಯುಸಿ ತರಗತಿಗೆ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯ ಹಾಗೂ ಪ.ಜಾತಿ, ಪ.ಪಂಗಡ, ಇತರೆ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿಜ್ಞಾನ ವಿಭಾಗದಲ್ಲಿ ಪಿಸಿಎಂಬಿ, ಪಿಸಿಎಂಸಿ ಹಾಗೂ ವಾಣಿಜ್ಯ ವಿಭಾಗದಲ್ಲಿ ಎಚ್‌ಇಬಿಎ ಸಂಯೋಜನೆಗಳ ತರಗತಿಗಳನ್ನು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುವುದು. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್ ಸಮುದಾಯದವರಿಗೆ ಶೇ.75 ಹಾಗೂ ಹಿಂದುಳಿದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಶೇ.25 ಸೀಟು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಎಲ್ಲ ದಾಖಲೆಗಳ ಸಹಿತ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಕಾಲೇಜು ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲೂಕು ದೂ.ಸಂ. 7676473767 ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‌ಎಂಸಿ ಕಾಲೇಜು ಹತ್ತಿರ, ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕ್ಷೇತ್ರ ಘೋಷಿಸಿದ ನಿಖಿಲ್
ಬೆಂಬಲ ಬೆಲೆಯಡಿ ರಾಗಿ ಖರೀದಿಗೆ ಚುರುಕು