ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ

KannadaprabhaNewsNetwork |  
Published : Feb 18, 2024, 01:33 AM IST
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ವ್ಯಾಪ್ತಿಯ ಕೆರೆಯಲ್ಲಿ ಮೀನುಗಳ ಮಾರಣಹೋಮ. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಾಣ ಹೋಮವಾಗಿದೆ. ಕಸಬಾ ಹೋಬಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯ ನೀರು ಕೆರೆಗೆ ಸೇರಿರುವ ಪರಿಣಾಮ ಸಾವಿರಾರು ಮೀನುಗಳು ಮೃತಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಾಣ ಹೋಮವಾಗಿದೆ. ಕಸಬಾ ಹೋಬಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯ ನೀರು ಕೆರೆಗೆ ಸೇರಿರುವ ಪರಿಣಾಮ ಸಾವಿರಾರು ಮೀನುಗಳು ಮೃತಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಸಣ್ಣ ನೀರಾವರಿ ಇಲಾಖೆಗೆ ಸೇರಿದ ಕೆರೆಯಲ್ಲಿ ಸಾವಿರಾರು ಮೀನುಗಳ ಸಾವಿನಿಂದ ದರ್ವಾಸನೆ ಉಂಟಾಗಿದೆ. ಕಳೆದ ಎರಡು ಮೂರು ದಿನಗಳ ಹಿಂದೆ ಕೆರೆಗೆ ತ್ಯಾಜ್ಯ ನೀರನ್ನು ನೇರವಾಗಿ ಕಾರ್ಖಾನೆಗಳ ರಾಸಯನಿಕ ಮಿಶ್ರಿತ ತ್ಯಾಜ್ಯ ನೀರು ಹರಿದಿದ್ದರಿಂದ ಮೀನುಗಳು ಸಾವನ್ನಪ್ಪಿವೆ ಎಂದು ಸ್ಥಳೀಯರಾದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಸೊಣ್ಣೇಗೌಡ ದೂರಿದ್ದಾರೆ.

ತೆರವಾಗದ ಮೀನುಗಳು:

ಕೆರೆಯಲ್ಲಿ ಮೀನುಗಳು ಸಾವನ್ನಪ್ಪಿ ಈಗಾಲೇ ಮೂರು ದಿನಗಳು ಕಳೆದಿವೆ. ದಡಕ್ಕೆ ಬಂದು ಸೇರಿರುವ ರಾಶಿ ರಾಶಿ ಮೀನುಗಳು ಕೊಳೆತು ಗಬ್ಬುನಾರುತ್ತಿವೆ. ನೀರಿನಲ್ಲಿಯೇ ಹಾಗೆ ಬಿಟ್ಟರೆ ನೀರು ಮತ್ತಷ್ಟು ಮಲಿನಗೊಳ್ಳುವ ಆತಂಕ ಎದುರಾಗಿದೆ. ಮೀನುಗಾರಿಕೆ ಇಲಾಖೆ ಅಥವಾ ಸಂಬಂಧಟ್ಟ ಇಲಾಖೆಯವರು ಮೃತ ಮೀನಿಗಳನ್ನು ಕೆರೆಯಿಂದ ತೆಗೆದು ಗುಂಡಿಯಲ್ಲಿ ಹಾಕಿ ವಿಲೇವಾರಿ ಮಾಡಬೇಕಿದೆ.

ತಾಲೂಕಿಗೆ ಬಾರದ ಮಾಲಿನ್ಯ ನಿಯಂತ್ರಣ ಮಂಡಳಿ:

ಏಷ್ಯಾದ ಎರಡನೇ ಅತಿ ದೊಡ್ಡ ಕೈಗಾರಿಕಾ ಕ್ಲಸ್ಟರ್ ಹೊಂದಿರುವ ಖ್ಯಾತಿಯ ದೊಡ್ಡಬಳ್ಳಾಪುರದಲ್ಲಿ ಸಾವಿರಾರು ಕೈಗಾರಿಕೆಗಳು, ಕಾರ್ಖಾನೆಗಳು, ಗಾರ್ಮೆಂಟ್ಸ್ ಗಳು ಚಾಲ್ತಿಯಲ್ಲಿವೆ. ಜಿಲ್ಲಾಧಿಕಾರಿಗಳ ಕಾರ್ಯಾಲಯವು ಜಿಲ್ಲೆಗೆ ಸ್ಥಳಾಂತರವಾಗಿದೆ. ಆದರೆ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮಾತ್ರ ವರ್ಷಾನುಗಟ್ಟಲೆ ಕಳೆದರೂ ಸಹ ಬೆಂಗಳೂರಿನಿಂದ ಗ್ರಾಮಾಂತರಕ್ಕೆ ಬಂದಿಲ್ಲ. ಇಂತಹ ಘಟನೆಗಳು ಸಂಭವಿಸಿದಾಗ ದೂರು ಕೊಡಲು ಬೆಂಗಳೂರಿಗೆ ಹೋಗಿ ಬರುವಷ್ಟರಲ್ಲಿ ಘಟನೆ ಮಾಸಿ ಹೋಗಿರುತ್ತದೆ ಎಂದು ಬಾಶೆಟ್ಟಿಹಳ್ಳಿ ವಿಎಸ್ಎಸ್ಎನ್ ಅಧ್ಯಕ್ಷ ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಟ್‌...............

ಈ ಭಾಗದ ಕೆರೆಗಳಲ್ಲಿ ಮೀನುಗಳ ಮಾರಣ ಹೋಮ ಇದೇ ಮೊದಲಲ್ಲ. ಕೊನೆಯೂ ಅಲ್ಲ. ಪದೇ ಪದೇ ಇಂತಹ ಘಟನೆಗಳು ಸಂಭವಿಸುತ್ತಲೇ ಇದೆ. ಕೈಗಾರಿಕಾ ತ್ಯಾಜ್ಯ ನೀರನ್ನು ರಾತ್ರೋರಾತ್ರಿ ಕಳ್ಳದಾರಿಯಲ್ಲಿ ಕೆರೆಗೆ ಹರಿಸಿರುವುದರಿಂದ ಇಂದು ಮೀನುಗಳು ಸಾವನ್ನಪ್ಪಿವೆ. ಇದಕ್ಕೆ ಕಾರಣರಾದವರ ವಿರುದ್ಧ ಮಾಲಿನ್ಯ ನಿಯಂತ್ರಣ ಮಂಡಳಿ ಕಠಿಣ ಕ್ರಮ ತೆಗೆದುಕೊಳ್ಳಬೇಕು.

-ರಾಜಘಟ್ಟ ರವಿ, ಕನ್ನಡಪರ ಹೋರಾಟಗಾರ

ಕೋಟ್‌...........

ಕೆರೆಯ ನೀರು ಶುದ್ಧವಾಗಿಯೇ ಇತ್ತು. ಕಳೆದ ಮೂರು ದಿನಗಳ ಹಿಂದೆ ಯಾರೂ ಕಾರ್ಖಾನೆಯವರು ರಾಸಾಯನಿಕಯುಕ್ತ ನೀರನ್ನು ಕೆರೆಗೆ ಹರಿಸಿರುವುದರಿಂದ ಅಥವಾ ಬಿಸಿಲು ಹೆಚ್ಚಾಗಿ ಕೆರೆಯಲ್ಲಿ ಆಮ್ಲಜನಕದ ಕೊರತೆಯುಂಟಾಗಿ ಮೀನುಗಳು ಸಾವನ್ನಪ್ಪಿರಬಹುದು. ಕೈಗಾರಿಕೆಯವರ ವಿರುದ್ಧ ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆ ಬಿಗಿ ಕ್ರಮ ಜರುಗಿಸಬೇಕು.

-ಲೋಹಿತ್, ವೈ.ಟಿ. ಪರಿಸರಾಸಕ್ತ17ಕೆಡಿಬಿಪಿ2-ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ವ್ಯಾಪ್ತಿಯ ಕೆರೆಯಲ್ಲಿ ಮೀನುಗಳ ಮಾರಣಹೋಮ.--

17ಕೆಡಿಬಿಪಿ3- ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಸತ್ತು ತೇಲುತ್ತಿರುವ ರಾಶಿ ರಾಶಿ ಮೀನುಗಳು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಗಳಿಂದ ಮಕ್ಕಳ ಶಿಕ್ಷಣ ಕಸಿಯುವ ಹುನ್ನಾರ
ಭಾರತದ ಭವಿಷ್ಯ ವರ್ಗ ಕೋಣೆಯಲ್ಲಿದೆ